Udupi: ಆನ್ಲೈನ್ ವಂಚನೆ: ಲಕ್ಷಾಂತರ ರೂ. ಕಳೆದುಕೊಂಡ ಹಿರಿಯ ನಾಗರಿಕ
Team Udayavani, Aug 15, 2024, 6:30 AM IST
ಉಡುಪಿ: ಆನ್ಲೈನ್ ವಂಚಕರ ಆಮಿಷಕ್ಕೆ ಒಳಗಾದ ಹಿರಿಯ ನಾಗರಿಕರೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ.
ಉಪೇಂದ್ರ (72) ವಂಚನೆಗೆ ಒಳಗಾದವರು. ಇವರನ್ನು ಯಾರೋ ಅಪರಿಚಿತ ವ್ಯಕ್ತಿಗಳು ವಾಟ್ಸ್ ಆ್ಯಪ್ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೇಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ಗೆ ಸೇರಿಸಿದ್ದಾರೆ. ಬಳಿಕ ಆ ಗ್ರೂಪಿನ ಐಕನ್ ನಿಂದ ಅಕೌಂಟ್ ನಂಬರ್ ನೀಡಿದ್ದಾರೆ. ಈ ವೇಳೆ ಅವರಿಗೆ ವಾಟ್ಸ್ ಆ್ಯಪ್ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ, ಹೆಚ್ಚಿನ ಲಾಭಾಂಶದ ಆಸೆ ತೋರಿಸಿ, ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದಾರೆ. ಇದನ್ನು ನಂಬಿದ ಅವರು ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಜು. 4ರಿಂದ 24ರ ವರೆಗೆ ಹಂತ ಹಂತವಾಗಿ ಒಟ್ಟು 33,10,000 ರೂ.ಗಳನ್ನು ಡಿಪಾಸಿಟ್ ಮಾಡಿದ್ದಾರೆ. ಆದರೆ ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನಾಗಲಿ ಈವರೆಗೆ ನೀಡದೇ ನಂಬಿಸಿ, ಮೋಸದಿಂದ ನಷ್ಟ ಉಂಟು ಮಾಡಿದ್ದಾರೆ.
ಈ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.