Puttur : ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಆಯ್ಕೆ


Team Udayavani, Aug 14, 2024, 7:14 PM IST

Puttur : ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಆಯ್ಕೆ

ಪುತ್ತೂರು: ಪುತ್ತೂರು ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಯನ್ನು ನೇಮಿಸಲಾಗಿದೆ. ಆಯ್ಕೆಯಲ್ಲಿ ಪುತ್ತಿಲ ಪರಿವಾರ, ಬಿಜೆಪಿ ಬಣ ಎರಡಕ್ಕೂ ಮನ್ನಣೆ ನೀಡಿ ವಿವಾದ ಉಂಟಾಗದಂತೆ ಎಚ್ಚರ ವಹಿಸಿದೆ.

ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ರ್ಯದರ್ಶಿಗಳಾಗಿ ಉಮೇಶ್ ಗೌಡ, ಪ್ರಶಾಂತ ನೆಕ್ಕಿಲಾಜೆ, ಪುತ್ತೂರು ನಗರ ಮಂಡಲದ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಶ್ ಪ್ರಭು, ಅನಿಲ್ ತೆಂಕಿಲ ಅವರನ್ನು ನೇಮಕ ಮಾಡಲಾಗಿದೆ. ಎರಡೂ ಮಂಡಲದಲ್ಲಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡು ಅನಂತರ ಬಿಜೆಪಿಗೆ ಸೇರ್ಪಡೆಯಾಗಿದ್ದ ಮುಖಂಡರಿಗೆ ನೀಡಲಾಗಿದೆ. ತನ್ಮೂಲಕ ಎರಡೂ ಬಣವನ್ನು ಒಂದಾಗಿ ಕೊಂಡೊಯ್ಯಲು ಹೈಕಮಾಂಡ್ ತಂತ್ರ ರೂಪಿಸಿರುವುದು ಸ್ಪಷ್ಟವಾಗಿದೆ. ಇದರ ಜತೆಗೆ ಪುತ್ತಿಲ ಪರಿವಾರದಲ್ಲಿ ಮುಂಚೂಣಿ ನಾಯಕರಾಗಿದ್ದ ಪುತ್ತಿಲ ಪರಿವಾರದ ಅಧ್ಯಕ್ಷರಾಗಿದ್ದ ಪ್ರಸನ್ನ ಮಾರ್ಥ ಅವರನ್ನು ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನಾಗಿ ನಿಯಕ್ತಿಗೊಳಿಸಲಾಗಿದೆ.

ಆಯ್ಕೆಯ ಸವಾಲು
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರವಾಗಿ ಸ್ಪರ್ದಿಸಿದ್ದ ಅರುಣ್ ಪುತ್ತಿಲ ಅವರು ರಾಜ್ಯಮಟ್ಟದ ನಾಯಕರ ಸಂಧಾನದ ಫಲವಾಗಿ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಮರಳಿ ಬಿಜೆಪಿ ಸೇರಿದ್ದರು. ಪಕ್ಷಕ್ಕೆ ಸೇರ್ಪಡೆ ಸಂದರ್ಭದಲ್ಲಿ ಮಂಡಲ ಅಧ್ಯಕ್ಷತೆಯ ಬೇಡಿಕೆಯನ್ನು ಇರಿಸಲಾಗಿತ್ತುಆರಂಭದಲ್ಲಿ ಅರುಣ್ ಅವರಿಗೆ ಜಿಲ್ಲಾಧ್ಯಕ್ಷತೆ ನೀಡುವಂತೆ ಪುತ್ತಿಲ ಬೆಂಬಲಿಗರು ಪಟ್ಟು ಹಿಡಿದಿದ್ದರು. ಪಕ್ಷವು ಪಾಧ್ಯಕ್ಷತೆಯ ಆಫರ್ ನೀಡಿತ್ತು. ಇದನ್ನು ಪುತ್ತಿಲ ಬೆಂಬಲಿಗರು ತಿರಸ್ಕರಿಸಿದ್ದರು. ಲೋಕಸಭಾ ಚುನಾವಣೆ ಬಳಿಕ ಅರುಣ್ ಅವರಿಗೆ ಮಂಡಲ ಅಧ್ಯಕ್ಷತೆ ದೊರೆಯುವ ಮಾತು ಕೇಳಿ ಬಂದಿತ್ತು. ಪರ ವಿರೋಧದ ಗೊಂದಲದಿಂದ ಆಯ್ಕೆ ಪ್ರಕ್ರಿಯೆಯು ಅರ್ಧದಲ್ಲೇ ಬಾಕಿಯಾಗಿತ್ತು. ಜು.17 ರಂದು ನಡೆದ ಮಂಡಲ ಅಧ್ಯಕ್ಷರ ಅಪೇಕ್ಷಿತರ ಸಭೆಯಲ್ಲಿ ಅಧ್ಯಕ್ಷತೆ ಸ್ಥಾನಕ್ಕೆ ಅರುಣ್ ಪುತ್ತಿಲ ಅವರ ಹೆಸರನ್ನು ಯಾರೂ ಸೂಚಿಸಿರಲಿಲ್ಲ. ಹೀಗಾಗಿ ಪುತ್ತಿಲ ಬದಲಾಗಿ ಬೇರೆಯವರಿಗೆ ಅವಕಾಶ ನೀಡುವುದು ನಿಶ್ಚಿತವಾಗಿತ್ತು.

ಇದನ್ನೂ ಓದಿ: Gadaga: ಸೊಸೆ ಮಾಡಿದ ಮೋಸಕ್ಕೆ ಬೀದಿಗೆ ಬಂದ ಬದುಕು… ದಯಾಮರಣ ಕೋರಿ ಅರ್ಜಿ

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.