Kolkata: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ… ಆಸ್ಪತ್ರೆ ಕೊಠಡಿ ಪುಡಿಪುಡಿ, ಕಲ್ಲುತೂರಾಟ
Team Udayavani, Aug 15, 2024, 9:46 AM IST
ಕೊಲ್ಕತ್ತಾ: ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಪರಿಣಾಮ ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ವಿಭಾಗವನ್ನು ಧ್ವಂಸಗೊಳಿಸಿದೆ ಆಸ್ಪತ್ರೆಯ ಹೊರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಇದನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಇದಕ್ಕೆ ಪ್ರತಿಯಾಗಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಘಟನೆಯಲ್ಲಿ ಕೆಲ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ವೈದ್ಯಯ ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಮಹಿಳಾ ಸಿಬಂದಿಗಳಿಗೆ ಯಾವುದೇ ಸುರಕ್ಷತೆ ಇಲ್ಲ ಎಂದು ಆಸ್ಪತ್ರೆಯ ಮಹಿಳಾ ಸಿಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ಇದರ ನಡುವೆ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವುದು ದೃಢಪಟ್ಟಿದ್ದು ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕೊಲ್ಕತ್ತಾ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಜೊತೆಗೆ ಪ್ರಕರಣವನ್ನು ಹೈಕೋರ್ಟ್ ಸಿಬಿಐಗೆ ವಹಿಸಿದ್ದು, ತನಿಖೆ ಚುರುಕುಗೊಳಿಸುವಂತೆ ಆದೇಶಿಸಿದೆ.
ಗುಂಪಿನ ಕೃತ್ಯ:
ಮಹಿಳೆಯರ ಗುಂಪೊಂದು ಶಾಂತಯುತವಾಗಿ ಆಸ್ಪತ್ರೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಬುಧವಾರ ತಡರಾತ್ರಿ ಯುವಕರ ಗುಂಪೊಂದು ಏಕಾಏಕಿ ಆಸ್ಪತ್ರೆಯ ಒಳಗೆ ದಾಳಿ ಮಾಡಿ ಆಸ್ಪತ್ರೆಯ ತುರ್ತು ಘಟಕವನ್ನು ಪುಡಿಗೈದು ಹೊರಬಂದಿದೆ ಈ ವೇಳೆ ಪೋಲೀಸರ ಮೇಲೆ ಕೂಡ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ಸದ್ಯ ಆಸ್ಪತ್ರೆಯ ಸುತ್ತ ಹೆಚ್ಚಿನ ಭದ್ರತೆ ವ್ಯವಸ್ಥೆಗೊಳಿಸಲಾಗಿದ್ದು ಈ ಕುರಿತು ಮಾಹಿತಿ ನೀಡಿದ ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್, ಹಿಂಸಾತ್ಮಕ, ಪ್ರಚೋದನಾತ್ಮಕ, ತಪ್ಪು ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇ ಇಂತಹ ವಿಧ್ವಂಸಕ ಕೃತ್ಯಕ್ಕೆ ಕಾರಣ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.