Bantwala: ಡ್ರಾಪ್ ಕೊಡುವ ನೆಪದಲ್ಲಿ ಹಲ್ಲೆ ನಡೆಸಿ, ನಗ ನಗದು ದೋಚಿ ಪರಾರಿಯಾದ ತಂಡ
Team Udayavani, Aug 15, 2024, 12:06 PM IST
ಬಂಟ್ವಾಳ: ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿದ ತಂಡ ಬಳಿಕ ಕೆಲ ದೂರ ಸಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಆತನ ಬಳಿಯಿದ್ದ ನಗ ನಗದು ದೋಚಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಏನಿದು ಘಟನೆ:
ಕೊಡಗಿನ ವಿರಾಜಪೇಟೆ ನಿವಾಸಿಯಾಗಿರುವ ಎಂ. ಗಂಗಾಧರ ಅವರು ನಗ ನಗದು ಕಳೆದು ಕೊಂಡ ವ್ಯಕ್ತಿಯಾಗಿದ್ದು, ಇವರು ಕಳೆದ ಶುಕ್ರವಾರ (ಆಗಸ್ಟ್ 9) ದಂದು ವಿರಾಜಪೇಟೆಯಿಂದ ಬಿಸಿ ರೋಡ್ ಗೆ ರಾತ್ರಿ ಸುಮಾರು ಒಂಬತ್ತು ಗಂಟೆಯ ವೇಳೆಗೆ ಬಂದಿದ್ದರು. ಬಂಟ್ವಾಳದ ನರಿಕೊಂಬಿನಲ್ಲಿರುವ ಅಣ್ಣನ ಮನೆಗೆ ತೆರಳಲು ಬಿ.ಸಿ.ರೋಡ್ ನಲ್ಲಿ ವಾಹನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ಅದೇ ದಾರಿಯಲ್ಲಿ ಅಪರಿಚಿತ ಕಾರೊಂದು ಬಂದಿದ್ದು ಗಂಗಾಧರ ಅವರ ಬಳಿ ಯಾವ ಕಡೆ ಹೋಗುವವರು ಎಂದು ವಿಚಾರಿಸಿದ್ದಾರೆ. ಅಲ್ಲದೆ ನಾವು ಕೂಡ ಅದೇ ಮಾರ್ಗವಾಗಿ ಹೋಗುತ್ತಿದ್ದು ನಿಮ್ಮನ್ನು ಡ್ರಾಪ್ ಮಾಡುತ್ತೇವೆ ಎಂದು ಹೇಳಿ ಗಂಗಾಧರ ಅವರನ್ನು ಕಾರಿಗೆ ಹತ್ತಿಸಿದ್ದಾರೆ.
ಕಾರು ಕೆಲ ದೂರ ಪ್ರಯಾಣಿಸುತ್ತಿದ್ದಂತೆ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತ್ತಿದ್ದ ಇಬ್ಬರು ವ್ಯಕ್ತಿಗಳು ಗಂಗಾಧರ ಅವರ ಮೇಲೆ ಹಲ್ಲೆ ನಡೆಸಿ ಬಳಿಕ ಅವರ ಬಳಿಯಿದ್ದ 80 ಸಾವಿರ ರೂ. ಮೌಲ್ಯದ ಚಿನ್ನದ ಸರ ಮತ್ತು 2 ಸಾವಿರ ರೂ. ನಗದು ಹಣವನ್ನು ಕಸಿದುಕೊಂಡು ಬಳಿಕ ಅವರನ್ನು ಕಾರಿನಿಂದ ದೂಡಿ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ ಗಂಗಾಧರ ಅವರು ಹೇಗೋ ಅಲ್ಲಿದ್ದ ಸಾರ್ವಜನಿಕರ ಸಹಕಾರದಿಂದ ಸಹೋದರನಿಗೆ ಕರೆ ಮಾಡಿ ವಿಚಾರ ತಿಳಿಸಿ ಗಾಯಕ್ಕೆ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿ ಬುಧವಾರ (ಆಗಸ್ಟ್ 14) ರಂದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.