ಮಿತ್ರ ಪಕ್ಷಗಳು ಘೋಷಿಸುವ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಗೆ ಬೆಂಬಲ: ಉದ್ಧವ್ ಠಾಕ್ರೆ
Team Udayavani, Aug 16, 2024, 1:57 PM IST
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಸದ್ಯಕ್ಕೆ ಶಿವಸೇನೆ (ಯುಬಿಟಿ), ಎನ್‌ಸಿಪಿ (ಶರದ್ ಪವಾರ್) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಇದೆಲ್ಲದರ ನಡುವೆ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಶುಕ್ರವಾರ ಉದ್ಧವ್ ಠಾಕ್ರೆ ದೊಡ್ಡ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಯಾರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಿದರೂ ಅವರ ಪಕ್ಷ ಅವರನ್ನು ಬೇಷರತ್ತಾಗಿ ಬೆಂಬಲಿಸುತ್ತದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.
ಜೊತೆಗೆ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯು ರಾಜ್ಯದ ಸ್ವಾಭಿಮಾನವನ್ನು ರಕ್ಷಿಸುವ ಹೋರಾಟವಾಗಿದೆ ಎಂದು ಮಹಾ ವಿಕಾಸ್ ಅಘಾಡಿ ಸಭೆಯಲ್ಲಿ ಠಾಕ್ರೆ ಒತ್ತಿ ಹೇಳಿದರು.
ಮೊದಲು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ ನಂತರ ಪ್ರಚಾರ ಆರಂಭಿಸಿ ಎಂದು ಠಾಕ್ರೆ ಎಂವಿಎ ಪಾಲುದಾರರನ್ನು ಒತ್ತಾಯಿಸಿದರು. ಪೃಥ್ವಿರಾಜ್ ಚವಾಣ್ ಆಗಲಿ ಅಥವಾ ಶರದ್ ಪವಾರ್ ಆಗಲಿ ಮೈತ್ರಿಕೂಟದ ಎಲ್ಲ ನಾಯಕರಿಗೆ ಸಿಎಂ ಆಯ್ಕೆಯನ್ನು ಮಾಡುವಂತೆ ಮನವಿ ಮಾಡುತ್ತೇನೆ ಜೊತೆಗೆ ಅವರ ಆಯ್ಕೆಯನ್ನು ಬೆಂಬಲಿಸುವುದಾಗಿ ಹೇಳಿದರು.
ಎಂವಿಎ ಮಿತ್ರಪಕ್ಷಗಳು ಮೊದಲು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ ನಂತರ ಪ್ರಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು. ಯಾರು ಹೆಚ್ಚು ಸೀಟು ಗೆದ್ದರೂ ಸಿಎಂ ಸ್ಥಾನ ಎಂಬ ನಿಯಮ ಪಾಲಿಸುತ್ತಿದ್ದೆವು, ಹಿಂದಿನ ಮೈತ್ರಿಕೂಟದಲ್ಲೂ ಇದೇ ಸೂತ್ರ ಅನುಸರಿಸಿದ್ದೆವು ಆದರೆ ಈ ಬಾರಿ ಹಾಗೆ ಮಾಡುವುದಿಲ್ಲ ಮಿತ್ರ ಪಕ್ಷಗಳು ಯಾರು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತದೋ ಅವರನ್ನೇ ನಮ್ಮ ಪಕ್ಷ ಬೆಂಬಲಿಸಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.