Bantwal: ಮೂವರ ಬಂಧನ; 70 ಸಾವಿರ ಮೌಲ್ಯದ ಸೊತ್ತು ವಶ
Team Udayavani, Aug 16, 2024, 9:47 PM IST
ಬಂಟ್ವಾಳ: ಬಿ.ಸಿ. ರೋಡಿನ ಪದ್ಮಾ ಕಾಂಪ್ಲೆಕ್ಸ್ ಕಟ್ಟಡದ ತಳಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮಟ್ಕಾ ಚೀಟಿ ದಂಧೆಯ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಡಿವೈಎಸ್ಪಿ ನೇತೃತ್ವದ ತಂಡ ದಾಳಿ ನಡೆಸಿ ಮೂವರು ಆರೋಪಿಗಳ ಜತೆಗೆ ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಆ. 14ರಂದು ನಡೆದಿದೆ.
ಮಂಜೇಶ್ವರ ನಿವಾಸಿ ಸಜೀತ್ ಕೆ. (38), ಉಚ್ಚಿಲ ನಿವಾಸಿ ವಿಶಾಲ್ ಸಿ. ಉಚ್ಚಿಲ್ (35) ಹಾಗೂ ಮಂಜೇಶ್ವರ ಬಡ್ಡಹಿತ್ತಲು ನಿವಾಸಿ ಸುನೀಲ್ ಕುಮಾರ್ (39) ಬಂಧಿತ ಆರೋಪಿಗಳಾಗಿದ್ದಾರೆ.
ಅಕ್ರಮ ಮಟ್ಕಾ ಚೀಟಿ ವ್ಯವಹಾರ ನಡೆಸುವ ಕುರಿತು ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿಯ ವೇಳೆ ಕೃತ್ಯಕ್ಕೆ ಬಳಸಿದ್ದ ವಿವಿಧ ಮುಖಬೆಲೆಯ ನೋಟುಗಳು, ಕ್ಯಾಲ್ಕುಲೇಟರ್, ಪೆನ್ನುಗಳು, ಪುಸ್ತಕಗಳು, ಮೊಬೈಲ್ಗಳು ಸೇರಿ ಒಟ್ಟು 70 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.