Karnataka ರಾಜ್ಯಕ್ಕೆ ಹೆಚ್ಚು ಪಾಲು ಕೇಳಲು ಸಿಎಂ ಸಿದ್ದರಾಮಯ್ಯ ತಯಾರಿ

16ನೇ ಹಣಕಾಸು ಆಯೋಗದಲ್ಲಿ ಬೇಡಿಕೆ ಮಂಡಿಸಲು ಆರ್ಥಿಕ ಇಲಾಖೆ ಜತೆಗೆ ಸಿಎಂ ಸಭೆ

Team Udayavani, Aug 17, 2024, 6:21 AM IST

Karnataka ರಾಜ್ಯಕ್ಕೆ ಹೆಚ್ಚು ಪಾಲು ಕೇಳಲು ಸಿಎಂ ಸಿದ್ದರಾಮಯ್ಯ ತಯಾರಿ

ಬೆಂಗಳೂರು: ಕೇಂದ್ರ ಸರಕಾರದ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮರುದಿನವೇ ಅದಕ್ಕೆ ಪೂರಕವಾಗಿ 16ನೇ ಹಣಕಾಸು ಆಯೋಗದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚು ಪಾಲು ತರುವ ಕಸರತ್ತಿಗೆ ಚಾಲನೆ ನೀಡಿದ್ದಾರೆ.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಸುದೀರ್ಘ‌ ಚರ್ಚೆ ನಡೆಸಿ ರಾಜ್ಯಕ್ಕಾಗುತ್ತಿರುವ ಅನ್ಯಾಯ ಪುನರಾವರ್ತನೆ ಆಗದಿರಲು ಹಲವು ಸೂಚನೆಗಳನ್ನು ನೀಡಲಾಯಿತು.

15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕಾದ ಅನ್ಯಾಯ 16ನೇ ಹಣಕಾಸು ಆಯೋಗದಲ್ಲೂ ಮುಂದುವರಿಯಬಾರದು. ಗರಿಷ್ಠ ತೆರಿಗೆ ಪಾವತಿಸಿದರೂ ಕಡಿಮೆ ಪಾಲು ಸಿಗುತ್ತಿದೆ. ಇದು ಪುನರಾವರ್ತನೆ ಆಗದಂತೆ ಅಗತ್ಯ ಮಾನದಂಡಗಳನ್ನು ರೂಪಿಸಬೇಕು. ಆ ಮೂಲಕ ರಾಜ್ಯಕ್ಕೆ ಹೆಚ್ಚು ಅನುದಾನ ಸಿಗುವಂತಾಗಬೇಕು ಎಂದು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇಂದ್ರದಿಂದ ಈ ಹಿಂದಿನ ಹಣ ಕಾಸು ಆಯೋಗಗಳಲ್ಲಿ ರಾಜ್ಯಕ್ಕೆ ಹೆಚ್ಚು ಅನುದಾನ ಸಿಗುತ್ತಿತ್ತು. ಆಗ ಜಾಸ್ತಿ ಸಿಗುತ್ತಿದ್ದುದು, ಈಗ ಏಕಾಏಕಿ ಯಾಕೆ ಕಡಿಮೆಯಾಯಿತು? ಯಾವ ಮಾನದಂಡಗಳನ್ನು ಆಧರಿಸಿ ಕಡಿಮೆ ಮಾಡಿದರು? ಅದಕ್ಕೆ ಪ್ರತಿಯಾಗಿ ರಾಜ್ಯಕ್ಕಾಗುತ್ತಿರುವ ಅನ್ಯಾಯ ಸರಿಪಡಿಸಲು ಯಾವ ಮಾನದಂಡಗಳನ್ನು ರೂಪಿಸುವುದು ಸೂಕ್ತ ಇದೆಲ್ಲದರ ಬಗ್ಗೆ ಪರಾಮರ್ಶೆ ಮಾಡಿ, ವರದಿ ಸಿದ್ಧಪಡಿಸುವಂತೆ ನಿರ್ದೇಶನ ನೀಡಿದರು ಎನ್ನಲಾಗಿದೆ.

ಪಾಲು ಹೆಚ್ಚಳಕ್ಕೆ ವರದಿ ಸಿದ್ಧಪಡಿಸಿ
ಸಾಫ್ಟ್ವೇರ್‌ ವಲಯದಲ್ಲಿ ಬರುವ ದೇಶದ ಒಟ್ಟಾರೆ ತೆರಿಗೆ ಪೈಕಿ ಶೇ. 42ರಷ್ಟು ಬೆಂಗಳೂರಿನಿಂದಲೇ ಪಾವತಿಯಾಗುತ್ತಿದೆ. ಆದರೆ, ಅದರಲ್ಲಿ ಬರುವ ಪಾಲು ಅತ್ಯಲ್ಪ. ಇದರಿಂದ ಬೆಂಗಳೂರಿನ ನಿರೀಕ್ಷಿತ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದವರು ಹೇಳಿದರು.

29ಕ್ಕೆ ಹಣಕಾಸು ಆಯೋಗದ ಸಭೆ?
16ನೇ ಹಣಕಾಸು ಆಯೋಗಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆ. 29ಕ್ಕೆ ಸಭೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಅಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಬೇಕಾದ, ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡಬಹುದಾದ ಮಾನ ದಂಡಗಳ ವರದಿ ಪಡೆಯುವ ಸಂಬಂಧ ಈ ಪೂರ್ವಭಾವಿ ಸಭೆನಡೆಸಲಾಗಿದೆ. ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್‌.ಶ್ರೀನಿವಾಸ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಫಾಕ್ಸ್‌ಕಾನ್‌ಗೆ ಅಗತ್ಯ ನೆರವು: ಸಿಎಂ ಭರವಸೆ
ಬೆಂಗಳೂರು: ಆ್ಯಪಲ್‌ ಫೋನ್‌ ಸೇರಿ ಎಲೆಕ್ಟ್ರಾನಿಕ್‌ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪೆನಿಗಳಲ್ಲಿ ಒಂದಾಗಿರುವ ಫಾಕ್‌ಕಾನ್‌ನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಂಗ್‌ ಲಿಯು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಖಾಸಗಿ ಹೊಟೇಲ್‌ನಲ್ಲಿ ಭೇಟಿಯಾಗಿ ಸಮಾಲೋಚಿಸಿದರು.

ಫಾಕ್ಸ್‌ಕಾನ್‌ ಮತ್ತು ರಾಜ್ಯದ ನಡುವಿನ ಸಹಭಾಗಿತ್ವವನ್ನು ಇನ್ನಷ್ಟು ಗಟ್ಟಿಗೊಳಿಸಲು ನಾವು ಬದ್ಧರಾಗಿದ್ದೇವೆ. ರಾಜ್ಯದಲ್ಲಿನ ಫಾಕ್ಸ್‌ಕಾನ್‌ ಯೋಜನೆಗೆಗಳಿಗೆ ಅಗತ್ಯವಾದ ಎಲ್ಲ ರೀತಿಯ ಸಹಕಾರ ಮತ್ತು ನೆರವು ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಇದಕ್ಕೂ ಮೊದಲು ಯಂಗ್‌ ಲಿ ಯು ಅವರನ್ನು ಸರಕಾರದ ಪರವಾಗಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬರಮಾಡಿಕೊಂಡರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.