Karnataka 3 ವಿಧಾನಸಭೆ ಕ್ಷೇತ್ರಗಳಿಗೆ ಬೈಎಲೆಕ್ಷನ್ ಸದ್ಯಕ್ಕಿಲ್ಲ
ಭೂಕುಸಿತ ಕಾರಣಕ್ಕೆ ವಯನಾಡ್ ಚುನಾವಣೆಯೂ ಸದ್ಯಕ್ಕಿಲ್ಲ
Team Udayavani, Aug 17, 2024, 6:30 AM IST
ಹೊಸದಿಲ್ಲಿ: ಕರ್ನಾಟಕದ ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಸೇರಿದಂತೆ ದೇಶದ 46 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ. ಮಳೆ, ಪ್ರವಾಹದ ಕಾರಣದಿಂದಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸಂದರ್ಭದಲ್ಲಿ ಮಾತನಾಡಿದ ಅವರು, ವಯನಾಡ್ನಲ್ಲಿ ಭೂಕುಸಿತ ಉಂಟಾಗಿರುವುದರಿಂದ ಅಲ್ಲಿ ತತ್ಕ್ಷಣವೇ ಚುನಾವಣೆ ನಡೆಸಲು ಸಾಧ್ಯವಿಲ್ಲ. ಬಿಹಾರ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಎಲ್ಲ 46 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಉಪ ಚುನಾವಣೆಯನ್ನು 6 ತಿಂಗಳ ಒಳಗಾಗಿ ನಡೆಸಲಾಗುತ್ತದೆ ಎಂದರು. ಭದ್ರತಾ ವ್ಯವಸ್ಥೆ, ಹವಾಮಾನ ಸೇರಿದಂತೆ ಹಲವು ಕಾರಣಗಳಿಂದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದಿನಾಂಕ ಬಳಿಕ ಪ್ರಕಟಿಸಲಾಗುತ್ತದೆ ಎಂದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಯ್ಬರೇಲಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದ ಕಾರಣ ವಯನಾಡ್ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.