ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ: ಶಾಸಕ ಎಸ್ ಸಿ ಬಾಲಕೃಷ್ಣ
Team Udayavani, Aug 17, 2024, 3:30 PM IST
ಮಾಗಡಿ: ರಾಜ್ಯಪಾಲರ ಹಠಾವೋ ಕರ್ನಾಟಕ ಬಚಾವೋ ಘೋಷಣೆಯೊಂದಿಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಎಸ್ ಸಿ ಬಾಲಕೃಷ್ಣ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿಚಾರವಾಗಿ ಮಾಗಡಿಯಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪ್ರತಿಕ್ರಿಯೆ ನೀಡಿ, ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಮುಂದುವೆರದು ಮಾತನಾಡಿ ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಅಂತ ಅಂದುಕೊಂಡಿರಲಿಲ್ಲ. ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ ಸಿದ್ದರಾಮಯ್ಯ. ಅಧಿಕಾರವಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕುಟುಂಬದವರನ್ನು ಅಕ್ಕಪಕ್ಕ ಸೇರಿಸದೇ ಆಡಳಿತ ಮಾಡಿದ್ದಾರೆ. ಬಿಜೆಪಿ ಅವ್ರು ದ್ವೇಷದ ರಾಜಕೀಯ ಮಾಡ್ತಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಕಾಲದಲ್ಲಿ ಆಗದೇ ಇರೋ ವಿಚಾರವನ್ನು ಅವರ ಹಣೆಗೆ ಕಟ್ಟುವ ಕೆಲಸ ಆಗ್ತಿದೆ. ಬಿಜೆಪಿಯವರಿಗೆ ಸಿದ್ದರಾಮಯ್ಯನ ಜನಪ್ರಿಯತೆ ಸಹಿಸಲು ಆಗುತ್ತಿಲ್ಲ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ರು ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ ಎಂದರು.
ಬಹುಶಃ ಇದರಿಂದ ಅವರಿಗೆ ಯಾವುದೇ ಅನುಕೂಲ ಆಗಲ್ಲ. ದ್ವೇಷದ ರಾಜಕಾರಣ ಮಾಡಿ ರಾಜ್ಯವನ್ನು ಬಾಂಗ್ಲಾ, ಶ್ರೀಲಂಕಾ ಸ್ಥಿತಿಗೆ ತರುವ ಪ್ರಯತ್ನ ಮಾಡ್ತಿದ್ದಾರೆ. ರಾಜ್ಯದಲ್ಲಿ ಇಷ್ಟೊಂದು ದ್ವೇಷದ ರಾಜಕಾರಣ ಮಾಡಿರೋ ಉದಾಹರಣೆಯೇ ಇಲ್ಲ. ಇದರಿಂದ ಸಿದ್ದರಾಮಯ್ಯ ಅವರ ಒಂದು ಕೂದಲನ್ನೂ ಬಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.