MUDA Case; ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ರೇಣುಕಾಚಾರ್ಯ

Team Udayavani, Aug 17, 2024, 6:42 PM IST

mp renukacharya

ದಾವಣಗೆರೆ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯ ಅವರು ತಕ್ಷಣ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು.

ಸುದ್ದಿಗೋಷ್ಠಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಾರದರ್ಶಕವಾದ ಆಡಳಿತ ನೀಡಿದ್ದರೆ ಇಂಥ ಸ್ಥಿತಿ ಬರುತ್ತಿರಲ್ಲ. ಆರೋಪ ಬಂದಿರುವ ಈ ಸಂದರ್ಭದಲ್ಲಿ ಅವರು ಕುರ್ಚಿಗೆ ಅಂಟಿಕೊಳ್ಳದೆ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದರು.

ರಾಜ್ಯಪಾಲರು ಕಾನೂನು ತಜ್ಞರ ಜತೆ ಚರ್ಚೆ ಮಾಡಿ ಕಾನೂನಾತ್ಮಕವಾಗಿಯೇ ಅನುಮತಿ ಕೊಟ್ಟಿದ್ದಾರೆ. ಇದರಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ ಏನೂ ಇಲ್ಲ. ರಾಜ್ಯಪಾಲರ ಕ್ರಮ ಇದು ರಾಜಕೀಯ ಪ್ರೇರಿತವಲ್ಲ. ಕಾನೂನಾತ್ಮಕ ಕ್ರಮ. ಯಡಿಯೂರಪ್ಪ ಅವರ ಮೇಲೆ ಖಾಸಗಿ ವ್ಯಕ್ತಿಗಳು ದೂರು ಕೊಟ್ಟಾಗ ಆಗಿನ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ್ದರು. ಆಗ ರಾಜಭವನ ಸ್ವಚ್ಛಗಿತ್ತಾ? ತನ್ನ ಆಡಳಿತಾವಧಿಯಲ್ಲಿ ರಾಜಭವನವನ್ನು ಕಚೇರಿ ಮಾಡಿಕೊಂಡಿದ್ದು ಕಾಂಗ್ರೆಸ್. ಹಿಂದೆ ತಮ್ಮ ಮೇಲೆ ಆರೋಪ ಬಂದಾಗ ಯಡಿಯೂರಪ್ಪ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಸಹ ಅದೇ ಮಾರ್ಗ ಅನುಸರಿಸಲಿ ಎಂದರು.

ಕಾಂಗ್ರೆಸ್‌ ಗೆ ಮತ್ತೊಂದು ಹೆಸರೇ ಬ್ರಹ್ಮಾಂಡ ಭ್ರಷ್ಟಾಚಾರ. ಅಧಿಕಾರಕ್ಕೆ ಬಂದಾಗಿನಿಂದ ಹಗರಣಗಳನ್ನು ಮಾಡುತ್ತಲೇ ಬಂದಿದ್ದು ಇಡೀ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಗಿನಡಿಯಲ್ಲೇ ಭ್ರಷ್ಟಾಚಾರ ನಡೆದಿದೆ. ರಾಜಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ವಿರುದ್ಧ ನ್ಯಾಯಾಲಯಕ್ಕೆ ಬೇಕಾದರೆ ಹೋಗಲಿ. ಆದರೆ, ನ್ಯಾಯಾಲಯದ ತೀರ್ಮಾನ ಆಗುವವರೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ನ್ಯಾಯಾಲಯದಲ್ಲಿ ಜಯ ಸಿಕ್ಕ ಮೇಲೆ ಬೇಕಾದರೆ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ರೇಣುಕಾಚಾರ್ಯ ಹೇಳಿದರು.

ಕಾಂಗ್ರೆಸ್ ಹಗರಣಗಳ ವಿರುದ್ಧ ಮತ್ತೆ ಪಾದಯಾತ್ರೆಗೆ ಪಕ್ಷದ ರಾಷ್ಟ್ರೀಯ ಮುಖಂಡರ ಅನುಮತಿ ಕೇಳಿದ್ದು, ಅನುಮತಿ ಸಿಕ್ಕರೆ ವಾಲ್ಮೀಕಿ ನಿಗಮ, ದಲಿತರ ಹಣ ದುರುಪಯೋಗದ ವಿರುದ್ಧ ಪಾದಯಾತ್ರೆ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.