Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ: 34.80 ಲ.ರೂ. ವಂಚನೆ
Team Udayavani, Aug 17, 2024, 8:45 PM IST
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೋರ್ವರಿಂದ 34.80 ಲ.ರೂ. ಪಡೆದು ವಂಚಿಸಿದ ಘಟನೆ ನಡೆದಿದೆ.
ದೂರುದಾರರು ಜು.1ರಂದು ಇನ್ಸ್ಟಾಗ್ರಾಂನಲ್ಲಿ ಷೇರು ವ್ಯಾಪಾರ ಕಂಪೆನಿಯ ಬಗ್ಗೆ ಇದ್ದ ಲಿಂಕ್ನ್ನು ನೋಡಿ ಅದರ ಮೂಲಕ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಂಡಿದ್ದರು. ಅನಂತರ ಅದರಲ್ಲಿ ಕಸ್ಟಮರ್ ಸರ್ವೀಸ್ನ ಚಾಟ್ ಬಾಕ್ಸ್ನಲ್ಲಿ ಅಪರಿಚಿತ ವ್ಯಕ್ತಿಗಳು ಷೇರು ಮಾರುಕಟ್ಟೆಯ ಬಗ್ಗೆ ತಿಳಿಸಿ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ಗಳಿಸಬಹುದೆಂದು ಪ್ರರೇಪಿಸಿದ್ದರು. ಅದನ್ನು ನಂಬಿದ ದೂರುದಾರರು ಜು.1ರಿಂದ ಆ.12ರವರೆಗೆ ಹಂತ ಹಂತವಾಗಿ ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಒಟ್ಟು 34,80,000 ರೂ.ಗಳನ್ನು ವರ್ಗಾಯಿಸಿದ್ದಾರೆ. ಕೆಲವು ದಿನಗಳ ಅನಂತರ ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಮುಂದಾದಾಗ ಅಪರಿಚಿತ ವ್ಯಕ್ತಿಗಳು ಶೇ.20 ರಷ್ಟು ತೆರಿಗೆ ಪಾವತಿಸುವಂತೆ ತಿಳಿಸಿದರು. ದೂರುದಾರರು ಹಣವನ್ನು ವಾಪಸ್ ಪಡೆಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆಗ ದೂರುದಾರರಿಗೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.