Davanagere: ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ!
ಪಾನಮತ್ತನಾಗಿ ಮನೆಗೆ ಬಂದ ಪತಿ, ಪತ್ನಿಯೊಂದಿಗೆ ಜಗಳ ತಾರಕಕ್ಕೆ ಏರಿ ದುರ್ಘಟನೆ
Team Udayavani, Aug 17, 2024, 9:36 PM IST
ದಾವಣಗೆರೆ: ಪತ್ನಿಯ ಶೀಲ ಶಂಕಿಸಿ ನಡೆದ ಜಗಳವು ಹತ್ಯೆಯಲ್ಲಿ ಅಂತ್ಯವಾದ ಘಟನೆ ಇಲ್ಲಿನ ಕೆಟಿಜೆ ನಗರದಲ್ಲಿ ನಡೆದಿದೆ.
ಪತಿ-ಪತ್ನಿ ಜಗಳದಲ್ಲಿ ಪತ್ನಿ ರೇಖಾ (35ವರ್ಷ) ಹತ್ಯೆಗೀಡಾದ ಮಹಿಳೆ. ಪತಿ ದೇವರಾಜ್ ಆಗಾಗ ಪಾನಮತ್ತನಾಗಿ ಮನೆಗೆ ಬಂದು ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ. ಹಾಗೆಯೇ ಶನಿವಾರ ಬೆಳಗ್ಗೆಯೂ ದೇವರಾಜ್ ಪತ್ನಿಯೊಂದಿಗೆ ಜಗಳವಾಡಿದ್ದು, ಈ ಜಗಳವು ವಿಕೋಪಕ್ಕೆ ಹೋಗಿ ಮನೆಯಲ್ಲಿ ಅಡುಗೆ ಮಾಡಲು ಬಳಸುವ ಗುಂಡುಕಲ್ಲಿನಿಂದ ಪತ್ನಿಯ ತಲೆಗೆ ಎತ್ತಿಹಾಕಿ ಚಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಸುಮಾರು ಹದಿನಾಲ್ಕು ವರ್ಷಗಳ ಹಿಂದೆ ರೇಖಾಳನ್ನು ದೇವರಾಜ್ ವಿವಾಹವಾಗಿದ್ದರು.
ಶೀಲ ಶಂಕಿಸಿ ಪತ್ನಿಯ ಹತ್ಯೆಗೈದ ಪತಿಯ ದೇವರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮತ್ತು ಪೊಲೀಸ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.