WI vs SA 2nd Test: ವಿಂಡೀಸ್ ಗೆಲುವಿಗೆ 263 ರನ್ ಗುರಿ
Team Udayavani, Aug 17, 2024, 10:39 PM IST
ಪ್ರೊವಿಡೆನ್ಸ್ (ಗಯಾನಾ): ಪ್ರವಾಸಿ ವೆಸ್ಟ್ ಇಂಡೀಸ್ ತಂಡದೆದುರಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವಿನ ನಿರೀಕ್ಷೆಯಲ್ಲಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 16 ರನ್ ಮುನ್ನಡೆ ಪಡೆದಿದ್ದ ದಕ್ಷಿಣ ಆಫ್ರಿಕಾವು ಪಂದ್ಯದ ಮೂರನೇ ದಿನ ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ 246 ರನ್ ಗಳಿಸಿ ಆಲೌಟಾಗಿದೆ. ಇದರಿಂದ ವೆಸ್ಟ್‌ಇಂಡೀಸ್ ಗೆಲ್ಲಲು 263 ರನ್ ಗಳಿಸುವ ಗುರಿ ಪಡೆದಿದೆ.
ಐದು ವಿಕೆಟಿಗೆ 223 ರನ್ನುಗಳಿಂದ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾವು 246 ರನ್ ಗಳಿಸಿ ಆಲೌಟಾಯಿತು. ಕೈಲ್ ವೆರೇಯ್ನ 59 ರನ್ ಗಳಿಸಿದರು. ಅವರು ವಿಯಾನ್ ಮುಲ್ಡರ್ ಜತೆಗೂಡಿ ಆರನೇ ವಿಕೆಟಿಗೆ 85 ರನ್ ಪೇರಿಸಿ ಬೇರ್ಪಟ್ಟರು. ಈ ಮೊದಲು ದ್ವಿತೀಯ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಬಹಳಷ್ಟು ಎಚ್ಚರಿಕೆಯಿಂದ ಆಡಿತು. ಇನ್ನಿಂಗ್ಸ್ ಆರಂಭಿಸಿದ ಐಡೆನ್ ಮಾರ್ಕ್‌ರಮ್ ಮತ್ತು ಟೋನಿ ಡಿ ಜಾರ್ಜಿ ಮೊದಲ ವಿಕೆಟಿಗೆ 79 ರನ್ ಪೇರಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. ಉತ್ತಮವಾಗಿ ಆಡುತ್ತಿದ್ದ ಜಾರ್ಜಿ 39 ರನ್ ಗಳಿಸಿ ಔಟಾದರು. ಆಬಳಿಕ ಮಾರ್ಕ್‌ರಮ್ ಅವರು ಟ್ರಿಸ್ಟನ್ ಸ್ಟಬ್ಸ್ ಜತೆಗೂಡಿ ದ್ವಿತೀಯ ವಿಕೆಟಿಗೆ 41 ರನ್ ಪೇರಿಸಿ ತಂಡವನ್ನು ಆಧರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.