Siddaramaiah ತತ್‌ಕ್ಷಣ ರಾಜೀನಾಮೆ,ನಿವೇಶನ ವಾಪಸ್ ನೀಡಿ:ಸಿಬಿಐ ತನಿಖೆಗೆ ವಿಪಕ್ಷಗಳ ಆಗ್ರಹ
Team Udayavani, Aug 18, 2024, 6:02 AM IST
ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀ ನಾಮೆಗೆ ಬಿಜೆಪಿ ಪಟ್ಟು ಹಿಡಿಯಲಾರಂಭಿಸಿದೆ. ಜತೆಗೆ ಮೈಸೂರಿನ ನಿವೇಶನಗಳನ್ನು ವಾಪಸ್ ಮಾಡುವಂತೆ ಆಗ್ರಹಿಸಿದೆ.
ಇದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ವಿಧಾನ ಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಪಾದಿಸಿದ್ದಾರೆ. ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ. ನಿವೇಶನ ಹಂಚಿಕೆಯ ಪ್ರತೀ ಹಂತದಲ್ಲೂ ಸಿದ್ದರಾಮಯ್ಯ ಅವರ ಹಸ್ತ ಕ್ಷೇಪ ಕಂಡುಬಂದಿದೆ. ಡಿನೋಟಿಫಿಕೇಶನ್, ಭೂ ಪರಿವರ್ತನೆ ಈ ಎಲ್ಲ ಹಂತಗಳಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್ ಪಡೆಯಬೇಕೆಂಬುದು ನಮ್ಮ ಬೇಡಿಕೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿನ ಹಿನ್ನೆಲೆಯಲ್ಲಿ ತನಿಖೆಗೆ
ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ ಅದನ್ನು ಒಪ್ಪು ತ್ತಾರಾ? ಈಗ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ಅನುಸರಿಸಲಿ ಎಂದು ಆಗ್ರಹಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಹಗರಣ ಸಂಬಂಧ ರಾಜ್ಯಪಾಲರು ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ತಮ್ಮನ್ನು ಬಗ್ಗಿಸುವವರಿಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯನವರು ಈಗಲಾದರೂ ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದಿದ್ದಾರೆ.
ಶೋಭಾ ಕರಂದ್ಲಾಜೆ, ಸಚಿವೆ
ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ವಿರುದ್ಧ 20ಕ್ಕೂ ಹೆಚ್ಚು ಕೇಸುಗಳು ಲೋಕಾಯುಕ್ತದಲ್ಲಿದ್ದವು. ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಿದ್ದರಾಮಯ್ಯನವರು ಲೋಕಾಯುಕ್ತವನ್ನೇ ರದ್ದು ಮಾಡಿ ಪ್ರಕರಣವನ್ನು ಎಸಿಬಿಗೆ ವರ್ಗಾಯಿಸಿ ಮುಚ್ಚಿ ಹಾಕಿದ್ದರು. ಈ ಕೇಸನ್ನು ಕೂಡ ಮುಚ್ಚಿ ಹಾಕಲು ನ್ಯಾ| ದೇಸಾಯಿ ಸಮಿತಿ ರಚಿಸಿ¨ªಾರೆ. ರಾಜ್ಯಪಾಲರು ಕಾನೂನು ಪ್ರಕಾರ ನಡೆದುಕೊಂಡಿದ್ದಾರೆ.
ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿಪಕ್ಷ ನಾಯಕ
ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸುವಾಗ ಏನು ಹೇಳಿದ್ದೀರಿ? ಆಗ ರಾಜ್ಯಪಾಲರು ನಿಮ್ಮ ದೃಷ್ಟಿಯಲ್ಲಿ ಉತ್ತಮ ಕೆಲಸ ಮಾಡಿದ್ದರಲ್ಲವೇ? ಈಗ ನಿಮ್ಮ ವಿರುದ್ಧ ಅಭಿಯೋಜನೆಗೆ ಅವಕಾಶ ನೀಡಿದರೆ ಕಾನೂನುಬಾಹಿರವೇ? ರಾಜ್ಯಪಾಲರು ಕಾನೂನಾತ್ಮಕವಾಗಿ, ಸಂವಿಧಾನಾತ್ಮಕವಾಗಿ ನಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು.
ಡಾ| ಅಶ್ವತ್ಥನಾರಾಯಣ, ಮಾಜಿ ಡಿಸಿಎಂ
ಸಿದ್ದರಾಮಯ್ಯನವರಿಗೆ ಸ್ವಲ್ಪವಾದರೂ ಆತ್ಮಸಾಕ್ಷಿ ನೈತಿಕತೆ, ಮೌಲ್ಯ, ಸಂವಿಧಾನಕ್ಕೆ ನಿಷ್ಠೆ ಇದ್ದರೆ ತತ್‌ಕ್ಷಣ ರಾಜೀನಾಮೆ ಕೊಡಬೇಕು. ಮುಖ್ಯಮಂತ್ರಿಗಳು ತಪ್ಪು ಮಾಡಿದ್ದು ಎಲ್ಲರಿಗೂ ಗೊತ್ತಿದೆ. ತಜ್ಞರ ಸಲಹೆ ಪಡೆದು ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ.
ಎನ್. ರವಿಕುಮಾರ್, ವಿಧಾನ ಪರಿಷತ್ ಸದಸ್ಯ
ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿಯಲ್ಲಿ ದೂರು ಬಂದಿರುವ ಕಾರಣ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಹಿಂದೆ ಈಶ್ವರಪ್ಪ ಅವರ ರಾಜೀನಾಮೆಗೆ ಸಿದ್ದರಾಮಯ್ಯನವರು ಆಗ್ರಹಿಸಿದ್ದರು. ಈಗ ಸಿದ್ದರಾಮಯ್ಯನವರ ವಿರುದ್ಧ ಆರೋಪ ಕೇಳಿ ಬಂದಿದೆ, ರಾಜೀನಾಮೆ ನೀಡಲಿ.
ಗಾಲಿ ಜನಾರ್ದನ ರೆಡ್ಡಿ, ಶಾಸಕ
ಇಳಿವಯಸ್ಸಿನಲ್ಲಿರುವ ಸಿದ್ದರಾಮಯ್ಯನವರು ತಾವು ಪ್ರಾಮಾಣಿಕ ಎಂದು ಸಾಬೀತು ಪಡಿಸಲು ಅಧಿಕಾರದಿಂದ ಕೆಳಕ್ಕೆ ಇಳಿಯಲೇ ಬೇಕು. ಎಲ್ಲ 136 ಶಾಸಕರು ಮುಖ್ಯಮಂತ್ರಿಗಳ ಜತೆಗಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹಾಗಾದರೆ ನೀವೆಲ್ಲರೂ ಭ್ರಷ್ಟಾಚಾರದ ಪರ ಇದ್ದೀರೆಂದು ಅರ್ಥವೇ ?
ನಿಖಿಲ್ , ಜೆಡಿಎಸ್ ಯುವ ರಾಜ್ಯಾಧ್ಯಕ್ಷ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲ ವಾದರೆ ನಮ್ಮ ಹೋರಾಟ ನಿರಂತರ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.