Actor Mohanlal: ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು
Team Udayavani, Aug 18, 2024, 2:58 PM IST
ಕೊಚ್ಚಿ: ಮಾಲಿವುಡ್ (Mollywood) ಚಿತ್ರರಂಗದ ಹಿರಿಯ ನಟ , ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೋಹನ್ ಲಾಲ್ ಅವರಿಗೆ ತೀವ್ರತರವಾದ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಇತರೆ ರೋಗ ಲಕ್ಷಣಗಳು ಕಂಡುಬಂದ ಹಿನ್ನೆಲೆ ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎನ್ನಲಾಗಿದೆ.
ಇದನ್ನೂ ಓದಿ: Bigg Boss Kannada 11: ಶೀಘ್ರ ಬಿಗ್ ಬಾಸ್ ಪ್ರೋಮೊ ರಿಲೀಸ್; ಈ ಬಾರಿಯೂ ಕಿಚ್ಚನೇ ಕಿಂಗ್
ಆಸ್ಪತ್ರೆಯಲ್ಲಿರುವ ಅವರಿಗೆ ಐದು ದಿನಗಳವರೆಗೆ ಸಾರ್ವಜನಿಕ ಸಂವಹನದಿಂದ ದೂರವಿರಲು ಸೂಚಿಸಲಾಗಿದ್ದು, ಸರಿಯಾದ ಔಷಧಿ ಹಾಗೂ ವಿಶ್ರಾಂತಿಯನ್ನು ಪಡೆಯಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.
‘ಎಲ್ 2: ಎಂಪುರಾನ್'(L2: Empuraan) ಚಿತ್ರೀಕರಣದ ಬಳಿಕ ಚೊಚ್ಚಲ ನಿರ್ದೇಶನದ ‘ಬರೋಜ್'(Barroz) ನ ಪೋಸ್ಟ್-ಪ್ರೊಡಕ್ಷನ್ ಕೆಲಸವನ್ನು ಮುಗಿಸಿ ಮೋಹನ್ ಲಾಲ್ ಗುಜರಾತ್‌ನಿಂದ ಕೊಚ್ಚಿಗೆ ಮರಳಿದಾಗ ಅವರ ಆರೋಗ್ಯ ಹದಗೆಟ್ಟಿದೆ.
Wishing @Mohanlal a speedy recovery! ❤️🩹 pic.twitter.com/PjQ31OXcQa
— Sreedhar Pillai (@sri50) August 18, 2024
ʼಬರೋಜ್ʼ ಇದೇ ಅಕ್ಟೋಬರ್ 9 ರಂದು ರಿಲೀಸ್ ಆಗಲಿದೆ. ಈ ಹಿಂದೆಯೇ ಸಿನಿಮಾ ರಿಲೀಸ್ ಆಗಬೇಕಿತ್ತು ಆದರೆ ಪೋಸ್ಟ್ ಪ್ರೊಡಕ್ಷನ್ ಕೆಲಸದ ವಿಳಂಬದಿಂದಾಗಿ ರಿಲೀಸ್ ಡೇಟ್ ಮುಂದೂಡಿಕೆ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.