Udupi: ಹೃದಯ ಸಂಬಂಧಿ ಕಾಯಿಲೆ; ಕುಸಿದುಬಿದ್ದು ಸಾವು
Team Udayavani, Aug 18, 2024, 8:07 PM IST
ಉಡುಪಿ: ವಿವಿಧ ರೀತಿಯ ಕಾಯಿಲೆಗಳಿಂದ ಬಳಲುತ್ತಿದ್ದ ಅಜ್ಜರಕಾಡು ನಿವಾಸಿ ಮುಕ್ತಾ(80) ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
10 ವರ್ಷಗಳಿಂದ ಕಿಡ್ನಿ, ಲಿವರ್, ಬಿಪಿ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ಆ.17ರಂದು ತಲೆ ತಿರುಗಿ ಕುಸಿದು ಬಿದ್ದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.