Rain Alert: ಕರಾವಳಿ, ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ನಾಳೆ, ನಾಡಿದ್ದುಅಧಿಕ ಮಳೆ ಸಾಧ್ಯತೆ
ಕರಾವಳಿಯುದ್ದಕ್ಕೂ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ, ಹಳದಿ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
Team Udayavani, Aug 18, 2024, 9:12 PM IST
ಬೆಂಗಳೂರು: ಕರಾವಳಿ ಜಿಲ್ಲೆಗಳು, ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ 8 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ (Rain)ಯಾಗುವ ಸಂಭವ ಕಂಡು ಬಂದಿದ್ದು, ಈ ಜಿಲ್ಲೆಗಳಿಗೆ ಸೋಮವಾರ ಹಾಗೂ ಮಂಗಳವಾರ ಹಳದಿ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ.
ಉತ್ತರ ಒಳನಾಡಿನಲ್ಲಿ ಸರ್ಕ್ನೂಲೇಶನ್ 4.8 ಕಿ.ಮೀ ಎತ್ತರದಲ್ಲಿ ಇದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಆ.20ರ ವರೆಗೆ ವ್ಯಾಪಕ ಮಳೆಯಾಗಲಿದೆ. ಆ.19 ಹಾಗೂ 20ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದ ಕರಾವಳಿಯುದ್ದಕ್ಕೂ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮೀನುಗಾರರು ಸಮುದ್ರದಲ್ಲಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
#ಮಳೆ #ಮುನ್ಸೂಚನೆ: ರಾಜ್ಯದಾದ್ಯಂತ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. #ಮುಂಗಾರುಮಳೆ @KarnatakaVarthe pic.twitter.com/gj3iXhyVTS
— Karnataka State Natural Disaster Monitoring Centre (@KarnatakaSNDMC) August 18, 2024
ಬೆಂಗಳೂರಿನಲ್ಲಿ ಸೋಮವಾರ ಹಾಗೂ ಮಂಗಳವಾರ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 2 ರಿಂದ 3 ಡಿ.ಸೆ. ಏರಿಕೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಪರಿಣಾಮ ಬೇಗೆಯ ವಾತಾವರಣ ಹೆಚ್ಚಾಗಲಿವೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ತಣ್ಣನೆಯ ವಾತಾವರಣ ಇರುತ್ತದೆ. ಆದರೆ, ಈ ಬಾರಿ ಹವಾಮಾನ ವೈಪರೀತ್ಯದಿಂದ ಉಷ್ಣಾಂಶ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.