Governor ವಿರುದ್ಧ ರಾಜ್ಯಾದ್ಯಂತ ಭುಗಿಲೆದ್ದ ಕೈ ಆಕ್ರೋಶ
ಹೋರಾಟ ಟೈರ್ಗೆ ಬೆಂಕಿ ಹಚ್ಚಿ ವಾಹನ ಸಂಚಾರ ತಡೆದು ಪ್ರತಿಭಟನೆ
Team Udayavani, Aug 19, 2024, 12:58 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ರವಿವಾರ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಮೈಸೂರಲ್ಲಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ನೂರಾರು ಜನರು ಮೈಸೂರು-ನಂಜನಗೂಡು ರಸ್ತೆಯ ಎಪಿಎಂಸಿ ರಿಂಗ್ರೋಡ್ ಜಂಕ್ಷನ್ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ರಾಜ್ಯಪಾಲರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಮೈಸೂರು ನಗರದ ಕಾಂಗ್ರೆಸ್ ಭವನದ ಮುಂಭಾಗ ರವಿವಾರ ಪ್ರತಿಭಟನೆ ನಡೆಸಿದರು. ಪಿರಿಯಾಪಟ್ಟಣದಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಟೈರ್ಗೆ ಬೆಂಕಿ ಹೆಚ್ಚಿ ರಸ್ತೆ ತಡೆದು, ಪ್ರತಿಭಟನೆ ನಡೆಸಿ, ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.