Jammu Kashmir: ಮುಂದಿನ ವಾರದಿಂದ ಕಾಶ್ಮೀರದಲ್ಲಿ ಮೋದಿ, ಅಮಿತ್ ಶಾ ಪ್ರಚಾರ ಶುರು
Team Udayavani, Aug 19, 2024, 1:25 AM IST
ಹೊಸದಿಲ್ಲಿ: ಸುಮಾರು 10 ವರ್ಷಗಳ ಬಳಿಕ ನಡೆಯುತ್ತಿರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಮುಂದಿನ ವಾರದಿಂದಲೇ ಪ್ರಚಾರ ಆರಂಭಿಸಲಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸರಣಿ ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಾರಿ ಬಿಜೆಪಿ ಶೇ.80 ಹೊಸ ಮುಖಗಳಿಗೆ ಅವಕಾಶ ನೀಡಲಿದೆ ಎನ್ನಲಾಗಿದೆ. 370ನೇ ವಿಧಿ ರದ್ದತಿ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಬಿಜೆಪಿ ಅಧಿಕಾರ ಹಿಡಿಯಲು ಸಕಲ ಪ್ರಯತ್ನ ನಡೆಸುತ್ತಿದೆ.
ಚುನಾವಣ ಪೂರ್ವ ಮೈತ್ರಿ ಇಲ್ಲ: ಜಮ್ಮು-ಕಾಶ್ಮೀರ ದಲ್ಲಿ ಬಿಜೆಪಿ ಯಾವುದೇ ಚುನಾವಣ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ರಾಜ್ಯಾಧ್ಯಕ್ಷ ರವೀಂದರ್ ರೈನಾ ಹೇಳಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಉದ್ದೇಶಿಸಿರುವ 8-10 ಮಂದಿ ಜತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಜುಲ್ಫೀಕರ್ ಬಿಜೆಪಿಗೆ
ಕಣಿವೆ ರಾಜ್ಯದಲ್ಲಿ ಸಾಕಷ್ಟು ಹೆಸರು ಮಾಡಿರುವ ಪಿಡಿಪಿ ನಾಯ ಕ, ಮಾಜಿ ಸಚಿವ ಚೌಧರಿ ಜುಲ್ಫೀಕರ್ ಅಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.