Jharkhand: ಎನ್ ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಚಂಪೈ ಸೊರೆನ್

Team Udayavani, Aug 19, 2024, 8:56 AM IST

Champai Soren joined NDA says Jitan ram Manjhi

ಹೊಸದಿಲ್ಲಿ: ಜಾರ್ಖಂಡ್‌ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಎನ್‌ ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಜಿತನ್‌ ರಾಮ್‌ ಮಾಂಜಿ ಹೇಳಿದ್ದಾರೆ. ಇದರಿಂದ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷ ಮತ್ತು ಜಾರ್ಖಂಡ್ ಸಿಎಂ ಹೇಮಂತ್‌ ಸೊರೆನ್‌ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.

ಜಿತನ್‌ ರಾಮ್‌ ಮಾಂಜಿ ಅವರ ಪಕ್ಷವಾದ ಹಿಂದೂಸ್ಥಾನಿ ಅವಾಮ್‌ ಮಾಂಜಿ ಕೂಡಾ ಬಿಜೆಪಿ ನೇತೃತ್ವದ ಎನ್‌ ಡಿಎದ ಭಾಗವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ ಪೋಸ್ಟ್‌ ಮಾಡಿರುವ ಮಾಂಝಿ, ಚಂಪೈ ಸೊರೆನ್ ಹುಲಿಯಾಗಿದ್ದರು ಮತ್ತು ಹುಲಿಯಾಗಿಯೇ ಉಳಿಯುತ್ತಾರೆ ಎಂದಿದ್ದಾರೆ.

ಬಿಹಾರದಿಂದ ಬೇರ್ಪಟ್ಟು ಪ್ರತ್ಯೇಕ ಜಾರ್ಖಂಡ್ ರಾಜ್ಯವನ್ನು ರಚಿಸುವಲ್ಲಿ ಚಂಪೈ ಸೊರೆನ್ ಅವರ ಪಾತ್ರಕ್ಕಾಗಿ ಅವರನ್ನು ಟೈಗರ್‌ ಎಂದು ಕರೆಯಲಾಗುತ್ತದೆ.

ಈ ವರ್ಷದ ಜನವರಿಯಲ್ಲಿ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಹೇಮಂತ್ ಸೊರೆನ್ ಅವರನ್ನು ಬಂಧಿಸಿದ ಕಾರಣಕ್ಕೆ ರಾಜೀನಾಮೆ ನೀಡಿದ ನಂತರ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ಆದರೆ, ಹೇಮಂತ್‌ ಸೊರೆನ್‌ಗೆ ಜಾಮೀನು ದೊರೆತಾಗ, ಚಂಪೈ ಸೊರೆನ್‌ ಅವರನ್ನು ಹುದ್ದೆಯಿಂದ ಕೆಳಗಿಳಿಸಿ ಈ ವರ್ಷದ ಜುಲೈನಲ್ಲಿ ಮತ್ತೊಮ್ಮೆ ರಾಜ್ಯದ ಆಡಳಿತವನ್ನು ವಹಿಸಿಕೊಂಡರು.

ಸೊರೆನ್‌ ಸುದೀರ್ಘ ಟ್ವೀಟ್

“ನಮ್ಮ ಬೆವರು, ರಕ್ತ ಸುರಿದು ಕಟ್ಟಿದ ಪಕ್ಷದಲ್ಲಿ ನನ್ನ ಅಸ್ತಿತ್ವವೇ ಇಲ್ಲವೆನ್ನುವಂತೆ ನನ್ನನ್ನು ಅವಮಾನಿಸಲಾ ಗಿತ್ತು. 4 ದಶಕದ ರಾಜಕೀಯ ಜೀವನದಲ್ಲಿ ಅದೇ ಮೊದಲ ಬಾರಿಗೆ ನಾನು ಕುಗ್ಗಿಹೋದೆ. ನನ್ನ ಜನರೇ ನನ್ನನ್ನು ನೋಯಿಸಿದರು” ಎಂದು ರವಿವಾರ ರಾತ್ರಿ ಚಂಪೈ ಸೊರೆನ್‌ ಟ್ವೀಟ್‌ ಮಾಡಿದ್ದಾರೆ.

“ಅಧಿಕಾರದ ಆಸೆ ಇರದ ನನ್ನನ್ನು ವಿಪಕ್ಷ ಒಕ್ಕೂಟದ ನಾಯಕರು ಸಿಎಂ ಆಗುವಂತೆ ಕೇಳಿದರು. ಅದರಂತೆ ಜ.31ರಂದು ಸಿಎಂ ಆದೆ. ಬಳಿಕ‌ ಜು.3ಕ್ಕೂ 2 ದಿನದ ಹಿಂದೆ ಇದ್ದಕ್ಕಿದ್ದಂತೆ ಸಿಎಂ ಆಗಿದ್ದ ನನ್ನ ಕಾರ್ಯಕ್ರಮಗಳನ್ನು ಪಕ್ಷ ರದ್ದುಗೊಳಿಸಿತ್ತು. ಪ್ರಜಾಪ್ರಭುತ್ವದಲ್ಲಿ ಸಿಎಂಗೆ ಇದಕ್ಕಿಂತ ದೊಡ್ಡ ಅವಮಾನ ಏನಿದೆ? ಬಳಿಕ ನನ್ನ ರಾಜೀನಾಮೆ ಕೇಳಿದರು. ಅಧಿಕಾರದ ಆಸೆ ಇಲ್ಲದ್ದಕ್ಕೆ ರಾಜೀನಾಮೆಯನ್ನೂ ಕೊಟ್ಟೆ. ಆದರೆ ನನ್ನ ಆತ್ಮ ಗೌರವವನ್ನು ಗಾಳಿಯಲ್ಲಿ ತೂರಿದ್ದರ ಬಗ್ಗೆ ಯಾರೂ ಚಿಂತಿಸಲಿಲ್ಲ. ಇದರಿಂದ ನಾನು ಕಣ್ಣೀರಿಟ್ಟೆ, ಅವಮಾನಕ್ಕೊಳಗಾದೆ. ಆ ಬಳಿಕ ನನ್ನ ಮುಂದೆ 3 ಹಾದಿ ಇದೆ ಎಂದು ನಿರ್ಧರಿಸಿದೆ. ಒಂದು ರಾಜಕೀಯ ನಿವೃತ್ತಿ ಅಥವಾ ಪಕ್ಷ ಸ್ಥಾಪನೆ, ಇಲ್ಲವೋ ಸಮಾನ ಮನಸ್ಕರೊಂದಿಗೆ ಹೆಜ್ಜೆ ಎಂದುಕೊಂಡಿದ್ದೆ. ಆ ಆಯ್ಕೆಗಳು ಆಗಲೂ ನನ್ನ ಮುಂದೆ ಇದ್ದವು, ಈಗಲೂ ಇವೆ” ಎಂದಿದ್ದಾರೆ.

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.