School Development: 2,000 ಸರಕಾರಿ ಶಾಲೆಗೆ ಸಿಎಸ್‌ಆರ್‌ ನಿಧಿ: ಡಿ.ಕೆ.ಶಿವಕುಮಾರ್‌

"ಸಮತ್ವ' ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಚಾಲನೆ, ಗ್ರಾಮೀಣ ವಿದ್ಯಾರ್ಥಿಗಳ ವಲಸೆ ತಡೆಗೆ ಯೋಜನೆ

Team Udayavani, Aug 20, 2024, 6:37 AM IST

CSR

ಬೆಂಗಳೂರು: ನಮ್ಮ ಮಕ್ಕಳು ಜಾಗತಿಕ ಪೈಪೋಟಿ ಎದುರಿಸಬೇಕು. ಹಾಗಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಅಗತ್ಯ. ಈ ಹಿನ್ನೆಲೆಯಲ್ಲಿ ನಾವು ಸಿಎಸ್‌ಆರ್‌ ನಿಧಿಯನ್ನು ಪೂರ್ಣ ಪ್ರಮಾಣದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಸೂಚಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಸಮಾವೇಶ -2024ರಲ್ಲಿ ಮಾತನಾಡಿ, ಸಿಎಸ್‌ಆರ್‌ ನಿಧಿಯನ್ನು ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಶಿಕ್ಷಣ ಇಲಾಖೆ ರೂಪಿಸಿರುವ “ಸಮತ್ವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಜನತೆ ತಮ್ಮ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಊರು ತೊರೆದು ಬೆಂಗಳೂರಿಗೆ ವಲಸೆ ಬರುವುದನ್ನು ತಡೆಯಲು ಗ್ರಾಮೀಣ ಶಾಲೆಗಳನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸಿಎಸ್‌ಆರ್‌ ನಿಧಿಯನ್ನು ಶಾಲೆಗಳಿಗೆ ಬಳಸಲು ತೀರ್ಮಾನಿಸಿದ್ದೇವೆ. ಅದರಂತೆ ರಾಜ್ಯದಲ್ಲಿನ ಉದ್ಯಮಿಗಳು ರಾಜ್ಯದಲ್ಲೇ ತಮ್ಮ ಸಿಎಸ್‌ಆರ್‌ ನಿಧಿಯನ್ನು ಬಳಸುವಂತೆ ಜಿಲ್ಲಾಧಿಕಾರಿಗಳು ನಿಗಾ ಇಡಬೇಕು. ಜಿಲ್ಲೆ, ತಾಲೂಕು ಕೇಂದ್ರ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೊರಗಿನ ಶಾಲೆಗಳಲ್ಲಿ ಮಾತ್ರ ಸಿಎಸ್‌ಆರ್‌ ನಿಧಿ ಬಳಕೆ ಮಾಡಬೇಕು ಎಂದರು.

ಸಿಎಸ್‌ಆರ್‌ ನಿಧಿಯಡಿ ಅಭಿವೃದ್ಧಿ ಪಡಿಸಲು ರಾಜ್ಯದಲ್ಲಿ 2,000 ಶಾಲೆಗಳನ್ನು ಗುರುತಿಸಿದ್ದು ಉದ್ಯಮಿಗಳು ಇವುಗಳಲ್ಲಿ ಯಾವುದೇ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಅಭಿವೃದ್ಧಿಪಡಿಸಬಹುದು. ಇಡೀ ಶಾಲೆಯನ್ನು ಅಭಿವೃದ್ಧಿ ಪಡಿಸುವುದು ಅಥವಾ ಮೂಲ ಸೌಕರ್ಯ ಕಲ್ಪಿಸುವುದು ಅಥವಾ ಹೊಸದಾಗಿ ಶಾಲೆಯನ್ನು ಕಟ್ಟಲು ಅವಕಾಶವಿದೆ. ನೀವು ಸರಕಾರಿ ಶಾಲೆಗಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಿ, ನಿಮಗೆ ಬೇಕಾದ ರೀತಿ ಬ್ರಾಂಡಿಂಗ್‌ ಮಾಡಿಕೊಳ್ಳಿ ಎಂದು ಹೇಳಿದರು.

ರಾಜ್ಯದಲ್ಲಿ 43 ದೊಡ್ಡ ಕಂಪೆನಿಗಳು 4 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಲಾಭದಲ್ಲಿದ್ದು, ಅದರಲ್ಲಿ 8063 ಕೋಟಿ ರೂ. ಸಿಎಸ್‌ಆರ್‌ ನಿಧಿ ನೀಡುತ್ತಿವೆ. ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮವಾಗಿದ್ದು, ನಾನೇ ನಮ್ಮೂರಲ್ಲಿ ಶಾಲೆಗಾಗಿ ಭೂಮಿಯನ್ನು ದಾನ ಮಾಡಿದ್ದೇನೆ, ಶಾಲೆಗಳನ್ನು ಅಭಿವೃದ್ಧಿ ಪಡಿಸಿದ್ದೇನೆ ಎಂದರು.

ಇದೇ ವೇಳೆ ಹಲವು ಕಂಪೆನಿಗಳು ಸರಕಾರದ ಜತೆ ಶಾಲೆಗಳ ಅಭಿವೃದ್ಧಿ ಬಗೆಗಿನ ಒಟ್ಟು 68 ಕೋಟಿ ರೂ. ವೆಚ್ಚದ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಹಾಗೆಯೇ ಸಮತ್ವ’ ಕಾರ್ಯಕ್ರಮದ ಲಾಂಛನ ಬಿಡುಗಡೆ ಮಾಡಲಾಯಿತು.

ಪ್ರತೀ 3 ಗ್ರಾ.ಪಂ.ಗೆ 1 ಮಾದರಿ ಶಾಲೆ
ಪ್ರಸ್ತುತ ಇರುವ ಶಾಲೆಗಳ ಪುನಶ್ಚೇತನಕ್ಕೆ 4 ಕೋಟಿ ರೂ. ಮತ್ತು ಹೊಸದಾಗಿ ಶಾಲೆ ನಿರ್ಮಾಣಕ್ಕೆ 10 ಕೋಟಿ ರೂ. ವೆಚ್ಚವಾಗಲಿದೆ. 3 ಗ್ರಾ.ಪಂ.ಗೆ 1 ಮಾದರಿ ಶಾಲೆ ನಿರ್ಮಾಣ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಬೆಳಗಾವಿ ವಿಭಾಗದಲ್ಲಿ 143 ಶಾಲೆ, ಕಲಬುರಗಿ ವಿಭಾಗದಲ್ಲಿ 145 ಶಾಲೆ, ಮೈಸೂರು ವಿಭಾಗದಲ್ಲಿ 109 ಶಾಲೆ, ಬೆಂಗಳೂರು ವಿಭಾಗದಲ್ಲಿ 103 ಶಾಲೆಯನ್ನು ಒಟ್ಟು 2,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಗುರಿ ಇದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ ಹೇಳಿದರು.

ರಾಜ್ಯವ್ಯಾಪಿ ಪ್ರಿ ನರ್ಸರಿ ಶಾಲೆ ಆರಂಭ
ಕಲ್ಯಾಣ ಕರ್ನಾಟಕದ ಸಾವಿರಕ್ಕೂ ಹೆಚ್ಚು ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದ್ದು, 38 ಸಾವಿರ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುತ್ತದೆ. ಎಲ…ಕೆಜಿಯಿಂದ 12ನೇ ತರಗತಿವರೆಗೂ ಒಂದೇ ಆವರಣದಲ್ಲಿ ಶಿಕ್ಷಣ ಸಿಗುವಂತೆ ಮಾಡುವ ಗುರಿಯಿದೆ. ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.