Congress Government: ರಾಜ್ಯಪಾಲರ ನಿಂದನೆ: ಬಿಜೆಪಿಯಿಂದ ದಲಿತಾಸ್ತ್ರ

ರಾಜ್ಯ ಸರಕಾರದ ವಿರುದ್ಧ ಹೋರಾಟ ತೀವ್ರ, ರಾಜ್ಯವ್ಯಾಪಿ ಪ್ರತಿಭಟನೆ

Team Udayavani, Aug 20, 2024, 12:32 AM IST

Governer

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಬಗ್ಗೆ ಕಾಂಗ್ರೆಸಿಗರು ನಡೆಸುತ್ತಿರುವ ನಿರಂತರ ಟೀಕೆಗೆ ಎದಿರೇಟು ನೀಡುವುದಕ್ಕೆ ಬಿಜೆಪಿ ಚಿಂತನೆ ನಡೆಸಿದ್ದು, ಸಿದ್ದರಾಮಯ್ಯ ಬಣದ ಅಹಿಂದ ಅಸ್ತ್ರಕ್ಕೆ ಪ್ರತಿಯಾಗಿ ದಲಿತಾಸ್ತ್ರ ಪ್ರಯೋಗಕ್ಕೆ ಬಿಜೆಪಿ ಮುಂದಾಗಿದೆ.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ನಡೆಸುತ್ತಿರುವ ವಾಗ್ಧಾಳಿಗೆ ಪ್ರತಿಯಾಗಿ ತಂತ್ರಗಾರಿಕೆ ರೂಪಿಸುವುದಕ್ಕೆ ಬಿಜೆಪಿ ಹಿರಿಯ ನಾಯಕರು ಸೋಮವಾರ ತುರ್ತು ಸಭೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್‌. ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌, ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಮೊದಲಾದವರು ಸಭೆ ಸೇರಿ ಹೋರಾಟದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ.

ರಾಜ್ಯಪಾಲ ಗೆಹ್ಲೋಟ್‌ ದಲಿತ ಸಮುದಾಯಕ್ಕೆ ಸೇರಿದವರು. ಅವರು ಈ ಹಿಂದೆ ಕೇಂದ್ರ ಸಂಪುಟದಲ್ಲಿ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಕಲ್ಯಾಣ ಸಚಿವರಾಗಿದ್ದರು. ತಳ ಹಂತದಿಂದ ಸ್ವಪ್ರಯತ್ನದಿಂದ ಬೆಳೆದು ರಾಜ್ಯಪಾಲರ ಹುದ್ದೆಗೆ ಏರಿದ್ದಾರೆ. ಆದರೆ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್‌ ನಾಯಕರು ಸಿದ್ದರಾಮಯ್ಯ ಅವರ ರಕ್ಷಣೆ ನೆಪದಲ್ಲಿ ಒಬ್ಬ ದಲಿತ ನಾಯಕನನ್ನು ಅವಮಾನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಹೋರಾಟ ರೂಪಿಸಲು ನಿರ್ಧರಿಸಲಾಗಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಲಿದ್ದಾರೆ. ಆ ಬಳಿಕ ಬಿಜೆಪಿ ನಿಯೋಗ ರಾಜ್ಯ ಪೊಲೀಸ್‌ ಮಹಾನಿರ್ದೇಶಕರನ್ನು ಭೇಟಿ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ನಾಯಕರ ವಿರುದ್ಧ ದೂರು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವುದಕ್ಕೂ ಬಿಜೆಪಿ ನಿರ್ಧರಿಸಿದೆ. ಗುರುವಾರದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಲು ನಿರ್ಧರಿಸಲಾಗಿದೆ. ಈ ಹೋರಾಟದ ರೂಪುರೇಷೆ ನಿರ್ಧರಿಸುವ ಜವಾಬ್ದಾರಿಯನ್ನು ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ಗೆ ವಹಿಸಲಾಗಿದೆ. ಮುಡಾ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ನಷ್ಟೇ ತೀವ್ರವಾಗಿ ಹೋರಾಟ ರೂಪಿಸಿ ತಿರುಗೇಟು ನೀಡಲು ಬಿಜೆಪಿ ಮುಂದಾಗಿದೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.