BJP Karnataka: ಪಕ್ಷನಿಷ್ಠರ ಪಾದಯಾತ್ರೆಗೆ “ಮಧ್ಯಾಂತರ ತಡೆ’?
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬಳಿಕ ರಾಜ್ಯ ಚಿತ್ರಣ ಬದಲು
Team Udayavani, Aug 20, 2024, 6:30 AM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಬಿಜೆಪಿಯ “ಪಕ್ಷ ನಿಷ್ಠರ ಬಣ’ ಕೂಡಲ ಸಂಗಮದಿಂದ ಬಳ್ಳಾರಿ ವರೆಗೆ ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆಗೆ ಈಗ ನಾನಾ ಕಾರಣಗಳಿಗಾಗಿ ಮಧ್ಯಾಂತರ ತಡೆ ಸಿಕ್ಕಿದೆ. ಹೀಗಾಗಿ ಈ ಹಂತದಲ್ಲಿ ಯಾತ್ರೆ ನಡೆಸದೇ ಇರಲು ತೀರ್ಮಾನಿಸಲಾಗಿದೆ.
ಈ ಸಂಬಂಧ ಸದ್ಯದಲ್ಲೇ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ನಿರ್ಧರಿಸಿತ್ತು. ಆದರೆ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ನಡೆಸುವುದಕ್ಕೆ ಅನುಮತಿ ನೀಡಿದ ಅನಂತರ ರಾಜ್ಯ ರಾಜಕಾರಣದ ಸ್ವರೂಪ ಬದಲಾಗಿದೆ. ಈ ಹಂತದಲ್ಲಿ ಪಾದಯಾತ್ರೆ ನಡೆಸಿದರೆ ವ್ಯತಿರಿಕ್ತ ಸಂದೇಶ ರವಾನೆಯಾಗುತ್ತದೆ ಎಂಬ ತೀರ್ಮಾನಕ್ಕೆ ಬರಲಾಗಿದೆ.
ಹೀಗಾಗಿ ಈ ಬಣದ ಪ್ರತಿನಿಧಿಗಳು ನಡೆಸಲು ಉದ್ದೇಶಿಸಿದ್ದ ದಿಲ್ಲಿ ಪ್ರವಾಸವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಈಗ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ವರಿಷ್ಠರ ಗಮನವೂ ಇದರ ಮೇಲೆಯೇ ಇದೆ. ಹೀಗಾಗಿ “ಭಿನ್ನ’ ನಿಲುವು ತೋರಿದರೆ ದಿಲ್ಲಿ ನಾಯಕರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶ ಲಭ್ಯವಾದ ಹಿನ್ನೆಲೆ ಯಲ್ಲಿ ಪಾದಯಾತ್ರೆ ಸದ್ಯಕ್ಕೆ ನಡೆಸದೇ ಇರಲು ತೀರ್ಮಾನಿಸಲಾಗಿದೆ.
ಸಿದ್ದರಾಮಯ್ಯ- ರಾಜ್ಯಪಾಲರ ನಡುವಿನ ಕಾನೂನು ಸಂಘರ್ಷ ಯಾವ ದಿಕ್ಕಿನತ್ತ ಸಾಗುತ್ತದೆ ಎಂಬುದನ್ನು ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಅದೇ ರೀತಿ ಆಗಸ್ಟ್ 21ರಂದು ನಡೆಸಲು ಉದ್ದೇಶಿಸಿದ್ದ ಸಭೆಯೂ ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.