Mangaluru: ಕೆತ್ತಿಕಲ್‌ ಹೆದ್ದಾರಿಗೆ ವೆಟ್‌ವೆಲ್‌ ಬಲಿ?

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ವೆಟ್‌ವೆಲ್‌ ಕುಸಿಯುವ ಭೀತಿ | ಮಣ್ಣು ಪಾಲಾಗಲಿದೆ 2 ಕೋ. ರೂ. ವೆಚ್ಚದ ಒಳಚರಂಡಿ ಯೋಜನೆ ಸ್ಥಾವರ

Team Udayavani, Aug 20, 2024, 2:37 PM IST

Mangaluru: ಕೆತ್ತಿಕಲ್‌ ಹೆದ್ದಾರಿಗೆ ವೆಟ್‌ವೆಲ್‌ ಬಲಿ?

ಮಹಾನಗರ: ಕೋಟ್ಯಂತರ ರೂಪಾಯಿ ಅನುದಾನ ಬಳಸಿಕೊಂಡು ವಾಮಂಜೂರಿನ ಅಮೃತ ನಗರದ ಕೆತ್ತಿಕಲ್‌ ಗುಡ್ಡದ ಮೇಲೆ ನಿರ್ಮಾಣ ಮಾಡಲಾದ ಒಳಚರಂಡಿ ಯೋಜನೆ ಸಂಬಂಧಿತ ವೆಟ್‌ವೆಲ್‌ ಅವೈಜ್ಞಾನಿಕ ಕಾಮಗಾರಿಗೆ ಬಲಿಯಾಗುವ ಅಪಾಯದಲ್ಲಿದೆ.

ಹೆದ್ದಾರಿ ಕಾಮಗಾರಿಗೆ ಅಸಮರ್ಪಕವಾಗಿ ಬೃಹತ್‌ ಗುಡ್ಡವನ್ನು ಅಗೆದ ಕಾರಣ ಮತ್ತು ಮಣ್ಣು ಗಣಿಗಾರಿಕೆ ನಡೆಸಿದ್ದರಿಂದ ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಒಳಗಾಗಿದೆ. ವೆಟ್‌ವೆಲ್‌ನ ತೀರಾ ಸಮೀಪದವರೆಗೆ ಮಣ್ಣು ತೆಗೆಯಲಾಗಿದ್ದು, ಒಂದು ವೇಳೆ ಗುಡ್ಡ ಇನ್ನಷ್ಟು ಕುಸಿದರೆ ವೆಟ್‌ ವೆಲ್‌ ಸ್ಥಾವರ ಉರುಳಲಿದೆ. ಅದರಲ್ಲೂ ವಯನಾಡು ಘಟನೆ ಬಳಿಕ ಸ್ಥಳೀಯರಲ್ಲಿ ಆತಂಕ ಜೋರಾಗಿದೆ. ಹೀಗಾದಲ್ಲಿ ಎರಡು ಕೋಟಿ ರೂ. ವೆಚ್ಚದ ಯೋಜನೆ ಮಣ್ಣುಪಾಲಾಗಲಿದೆ.

ವರದಿ ಬಂದ ಬಳಿಕ ನಿರ್ಧಾರ ಸಾಧ್ಯತೆ
ಕೆತ್ತಿಕಲ್‌ ಪ್ರದೇಶದ ಅಪಾಯದ ಬಗ್ಗೆ ಈಗಾಗಲೇ ಶಿರೂರಿನಲ್ಲಿ ಪರಿಶೀಲನೆ ನಡೆಸಿದ ತಂಡ ತಪಾಸಣೆ ನಡೆಸಿದೆ. ಇಲ್ಲಿನ ಅಪಾಯದ ಬಗ್ಗೆ ಸಂಪೂರ್ಣ ವಿವರ ಸಂಗ್ರಹಿಸಿದೆ. ತಜ್ಞರು ನೀಡುವ ವರದಿಯ ಆಧಾರದಲ್ಲಿ ಜಿಲ್ಲಾಡಳಿತ ಮುಂದಿನ ಕ್ರಮ ವಹಿಸಲಿದೆ. ಒಂದೊಮ್ಮೆ ಸ್ಥಳಾಂತರಕ್ಕೆ ಸೂಚಿಸಿದಲ್ಲಿ ಹೆದ್ದಾರಿ ಪ್ರಾಧಿಕಾರದ ಮೂಲಕವೇ ಮರು ನಿರ್ಮಾಣ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಬದಲಿ ಸ್ಥಳದ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ.

9 ಮನೆಗಳು ಅಪಾಯದಲ್ಲಿ
ಕೆತ್ತಿಕಲ್‌ ಗುಡ್ಡದ ಅಮೃತ ನಗರದ ಬಳಿ ಇರುವ 9 ಮನೆಗಳು ಅಪಾಯದಲ್ಲಿದ್ದು, ಈ ಪೈಕಿ 3 ಮನೆಗಳು ಹೆಚ್ಚಿನ ಸಮಸ್ಯೆಗೆ ಒಳಗಾಗುವ ಸಾಧ್ಯತೆ ತಲೆದೋರಿದೆ. ವೆಟ್‌ವೆಲ್‌ ಜತೆ ಮನೆಗಳನ್ನೂ ಕೂಡ ಸ್ಥಳಾಂತರ ಮಾಡಬೇಕಾಗುತ್ತದೆ. ಜಿಲ್ಲಾಡಳಿತದ ಮೂಲಕ ಪರ್ಯಾಯ ವ್ಯವಸ್ಥೆಯಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ತ್ಯಾಜ್ಯ ನೀರು ಸಂಪರ್ಕದ ವೆಲ್‌ ಇದು
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮವು ವೆಟ್‌ವೆಲ್‌ ನಿರ್ಮಾಣಕ್ಕೆ 2 ಕೋ. ರೂ. ಅನುದಾನ ನೀಡಿದೆ. ಹಿಂದಿನ ಸರಕಾರದಲ್ಲಿ ಮಂಜೂರಾದ ಯೋಜನೆಯಂತೆ ಒಂದು ವರ್ಷದ ಹಿಂದೆ ಕಾಮಗಾರಿ ಆರಂಭವಾಗಿತ್ತು. ಅಮೃತನಗರದ ಸುತ್ತಮುತ್ತಲ ಹಲವಾರು ಮನೆಗಳ ತ್ಯಾಜ್ಯ ನೀರು ಇದೇ ವೆಟ್‌ವೆಲ್‌ಗೆ ಸೇರಬೇಕಿದೆ. ಇಲ್ಲಿನ ಮನೆಗಳ ಒಳಚರಂಡಿ ಸಂಪರ್ಕದ ಕಾಮಗಾರಿ ಮುಗಿದಿದೆ. ಎರಡು ಭಾಗಗಳಿಂದ ಸಂಪರ್ಕಕ್ಕೆ ವ್ಯವಸ್ಥೆ ಮಾಡಲಾಗಿದೆ. ವೆಟ್‌ವೆಲ್‌ ಟ್ಯಾಂಕ್‌ ನಿರ್ಮಾಣವಾಗಿದೆ. ಪಿಲ್ಲರ್‌ ಗಳನ್ನು ಅಳವಡಿಸಿ ಮೇಲ್ಭಾಗದಲ್ಲಿ ಸುಸಜ್ಜಿತ ಕೊಠಡಿ ನಿರ್ಮಿಸಲಾಗಿದೆ. ಬಹುತೇಕ ಕಾಮಗಾರಿ ಪೂರ್ಣಗೊಂಡು ಕಾರ್ಯಾರಂಭಕ್ಕೆ ಸಿದ್ಧತೆ ನಡೆಯುತ್ತಿದ್ದಂತೆ ಆತಂಕ ಎದುರಾಗಿದೆ.

ಅಪಾಯ ಕಂಡರೆ ಸ್ಥಳಾಂತರ
ಪ್ರಸ್ತುತ ಕಟ್ಟಡದ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಸ್ಥಳಾಂತರದ ಬಗ್ಗೆ ಚರ್ಚೆ ನಡೆದಿದೆ. ವೆಟ್‌ ವೆಲ್‌ನಲ್ಲಿ ಯಾವುದೇ ಯಂತ್ರಗಳನ್ನು ಅಳವಡಿಸಿಲ್ಲ. ಅಪಾಯದ ಬಗ್ಗೆ ವರದಿ ಬಂದ ಬಳಿಕ ಸ್ಥಳಾಂತರ ಪ್ರಕ್ರಿಯೆ ನಡೆಯಲಿದೆ.
-ಆನಂದ್‌ ಸಿ.ಎಲ್‌., ಪಾಲಿಕೆ ಆಯುಕ್ತರು

ಆರಂಭದಲ್ಲಿ ಅಪಾಯವಿರಲಿಲ್ಲ
ಕಾಮಗಾರಿ ಆರಂಭಿಸಿದ ವೇಳೆ ಯಾವುದೇ ರೀತಿಯ ಅಪಾಯವಿರಲಿಲ್ಲ. ಗುಡ್ಡ ಅಗೆತವೂ ನಡೆದಿರಲಿಲ್ಲ. ಜಿಲ್ಲಾಡಳಿತದ ಮುಂದಾಳುತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ. ತಜ್ಞರ ಸಮಿತಿ ವರದಿ ಬಳಿಕ ಮುಂದಿನ ನಿರ್ಧಾರವಾಗಲಿದೆ.
-ಹೇಮಲತಾ ರಘು ಸಾಲ್ಯಾನ್‌, ಪಾಲಿಕೆ ಸದಸ್ಯೆ

– ಸಂತೋಷ್‌ ಮೊಂತೇರೊ

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.