Puttur: ಸ್ಕೂಟರ್ ಸವಾರನ ಮೇಲೆ ಕಾಡುಹಂದಿ ದಾಳಿ
Team Udayavani, Aug 20, 2024, 2:26 PM IST
ಪುತ್ತೂರು: ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಕಾಡುಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಆ.20ರ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜರ್, ಧನುಷ್ ಗಾಯಾಳು.
ಧನುಷ್ ಎಂದಿನಂತೆ ಬೆಳಗ್ಗೆ ಸ್ಕೂಟರ್ ನಲ್ಲಿ ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ ಏಕಾಏಕಿ ಕಾಡು ಹಂದಿಯೊಂದು ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ದಾಳಿ ನಡೆಸಿದೆ.
ಈ ವೇಳೆ ನಿಯಂತ್ರಣ ತಪ್ಪಿ ಬಿದ್ದ ಧನುಷ್ ಅವರ ಮೇಲೆ ಕಾಡು ಹಂದಿ ಎರಗಿ ಅವರ ಬಲ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದಲ್ಲದೆ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ.
ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.