Anandapura: ಮಳೆಯಿಂದ ಹಾನಿ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಭೇಟಿ
Team Udayavani, Aug 20, 2024, 8:17 PM IST
ಆನಂದಪುರ: ಸೋಮವಾರ ಸಂಜೆ ಸುರಿದ ಭಾರಿ ಮಳೆಯಿಂದ ನೂರಾರು ಎಕರೆ ಭತ್ತ ನಾಟಿ ಮಾಡಿದಾಗ ಗದ್ದೆಗಳು ಹಾಗೂ ರಸ್ತೆ, ಸೇತುವೆ ಕೊಚ್ಚಿ ಕೊಚ್ಚಿ ಹೋದ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಮೇರೆಗೆ ಆಪ್ತ ಕಾರ್ಯದರ್ಶಿ ಶ್ರೀನಿವಾಸಮೂರ್ತಿ ಭೇಟಿ ನೀಡಿ ನಂತರ ಮಾತನಾಡಿದ ಅವರು ಸೋಮವಾರ ಸುರಿದ ಅಕಾಲಿಕ ಮಳೆಯಿಂದ ಮುಂಬಾಳು, ಸುಳೂಗೋಡು, ಜೆಡಿಸರ , ತಾವರೆಹಳ್ಳಿ, ಅಡೂರು ಈ ಭಾಗದಲ್ಲಿ ನೂರಾರು ಎಕರೆ ಭತ್ತ ನಾಟಿ ಮಾಡಿದ ಗದ್ದೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದು ಭಾರಿ ನಷ್ಟ ಸಂಭವಿಸಿದೆ.
ರೈತರಿಗೆ ಹಾನಿಯಾದ ಬಗ್ಗೆ ತಕ್ಷಣವೇ ಸರ್ಕಾರಕ್ಕೆ ವರದಿ ಸಲ್ಲಿಸಿ ಹಾನಿಗೊಂಡ ಬೆಳೆಗೆ ಪರಿಹಾರ ಕೊಡಿಸುವುದಾಗಿ ತಿಳಿಸಿದರು. ಸಾಗರ ಕ್ಷೇತ್ರದಲ್ಲಿ ಈ ಹಿಂದೆ ಸುರಿದ ಬಾರಿ ಮಳೆಯಿಂದ ನೂರಾರು ಮನೆಗಳು ಕುಸಿದು ಹಾನಿ ಸಂಭವಿಸಿತ್ತು. ಈಗ ಸುರಿದ ಮಳೆಯಿಂದ ರೈತರ ಗದ್ದೆಗಳು ಕೊಚ್ಚಿ ಹೋಗಿ ತುಂಬಾ ನಷ್ಟ ಸಂಭವಿಸಿದೆ. ತಕ್ಷಣವೇ ರೈತರು ದಾಖಲೆಯೊಂದಿಗೆ ಕಂದಾಯ ಇಲಾಖೆಗೆ ಅರ್ಜಿ ನೀಡುವಂತೆ ತಿಳಿಸಿದರು.
ಕೊಚ್ಚಿ ಹೋದ ಸೇತುವೆ ಮತ್ತು ರಸ್ತೆ.
ಆನಂದಪುರ ಸಮೀಪದ ಮುಂಬಾಳು ಹಾಗೂ ಸೂಳಗೊಡು ಭಾಗದಲ್ಲಿನ ಕಿರು ಸೇತುವೆ, ರಸ್ತೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಇದಕ್ಕೆ ತಕ್ಷಣವೇ ತುರ್ತು ವ್ಯವಸ್ಥೆ ಕಲ್ಪಿಸಿ ಕೊಡುವಲ್ಲಿ ಗ್ರಾಮ ಆಡಳಿತ ಮುಂದಾಗಬೇಕು ಎಂದು ತಿಳಿಸಿದರು.
ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಕೃಷಿ ಅಧಿಕಾರಿ ಚಂದ್ರ ಕುಮಾರ್, ತೋಟಗಾರಿಕಾ ಇಲಾಖೆ ಅಧಿಕಾರಿ ಉಲ್ಲಾಸ್, ಜಿಲ್ಲಾ ಪಂಚಾಯತ್ ಅಧಿಕಾರಿಗಳಾದ ಶಿವಣ್ಣ ,ಬೆನಕೇಶ್, ಕಂದಾಯ ಅಧಿಕಾರಿಗಳಾದ ಕವಿರಾಜ್, ಕೀರ್ತಿ, ಗೋವಿಂದ್ ಮೂರ್ತಿ, ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಜೇಂದ್ರ ಯಾದವ್, ಪಿಡಿಒ ಮಂಜ ನಾಯಕ್ , ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷ ಕಳಸೆ ಚಂದ್ರಪ್ಪ, ಬಗರ್ ಹುಕ್ಕ್ಂ ಸಮಿತಿ ಸದಸ್ಯ ರವಿಕುಮಾರ್ ದಾಸ್ ಕೊಪ್ಪ, ಪಕ್ಷದ ಮುಖಂಡರಾದ ಎನ್, ಉಮೇಶ್, ರಮಾನಂದ್ ಸಾಗರ್, ರೆಹಮತುಲ್ಲಾ, ಸೇರಿದಂತೆ ಪಕ್ಷದ ಅನೇಕ ಮಂದಿ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.