Student Hostel: ಎಸ್‌ಸಿ, ಎಸ್‌ಟಿ ಹಾಸ್ಟೆಲ್‌ಗ‌ಳಲ್ಲಿ “ಜನದಟ್ಟಣೆ’: ಹೈಕೋರ್ಟ್‌ ಆಘಾತ

ಪ್ರವೇಶ ಮಿತಿಗಿಂತ ಅಧಿಕ ಪಟ್ಟು ವಿದ್ಯಾರ್ಥಿಗಳ ವಾಸ, ಪರಿಹಾರ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ನಿರ್ದೇಶನ

Team Udayavani, Aug 21, 2024, 6:15 AM IST

High-Court

ಬೆಂಗಳೂರು: ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಿಂದುಳಿದ ಜಾತಿ, ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಮಿತಿಗಿಂತ ಅಧಿಕ ಪಟ್ಟು ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡಿರುವುದಕ್ಕೆ ಉಚ್ಚ ನ್ಯಾಯಾಲಯ ಆಘಾತ ವ್ಯಕ್ತಪಡಿಸಿದ್ದು, ಈ ಬಗ್ಗೆ ಸರಕಾರ ತತ್‌ಕ್ಷಣ ಪರಿಹಾರ ಕ್ರಮಗಳಿಗೆ ಮುಂದಾಗಬೇಕು ಎಂದು ನಿರ್ದೇಶನ ನೀಡಿದೆ.

ಈ ವಿಚಾರವಾಗಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಸರಕಾರಿ ವಕೀಲರು ಎಸ್‌ಸಿ/ ಎಸ್‌ಟಿ ಹಾಸ್ಟೆಲ್‌ಗ‌ಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಮಿತಿ ಹಾಗೂ ಸದ್ಯ ಇರುವ ಸಂಖ್ಯೆ, ವಾರ್ಡನ್‌ ಹುದ್ದೆಗಳ ಮಾಹಿತಿ ಹೊಂದಿದ ಕಂದಾಯ ವಿಭಾಗವಾರು ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ವರದಿಯಲ್ಲಿ ಮಿತಿಗಿಂತ ಮೂರ್‍ನಾಲ್ಕು ಪಟ್ಟು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿರುವ ಅಂಶವನ್ನು ಗಮನಿಸಿ ಅಚ್ಚರಿ ವ್ಯಕ್ತಪಡಿಸಿದ ನ್ಯಾಯಪೀಠ, ಸರಕಾರದ ವರದಿಯಲ್ಲಿರುವಂತೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ನಲ್ಲಿ ಪ್ರವೇಶ ಮಿತಿ 50 ಇದ್ದು ಅಲ್ಲಿ 150 ವಿದ್ಯಾರ್ಥಿಗಳು ಇದ್ದಾರೆ.

ಕೊಪ್ಪಳದ ಹಾಸ್ಟೆಲ್‌ನಲ್ಲಿ 75 ಪ್ರವೇಶ ಮಿತಿ ಇದ್ದರೆ 214 ಮಂದಿ ಇದ್ದಾರೆ. ರಾಜ್ಯದ ಬಹುತೇಕ ಹಾಸ್ಟೆಲ್‌ಗ‌ಳ ಸ್ಥಿತಿ ಇದೆ ಆಗಿದೆ. ವಿದ್ಯಾರ್ಥಿಗಳನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವ ಬಗ್ಗೆ ಸರಕಾರ ತತ್‌ಕ್ಷಣ ಗಮನ ಹರಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ತುರ್ತು ಆವಶ್ಯಕತೆ ಇದೆ ಎಂದು ಹೇಳಿತು ಹಾಗೂ ವಿವರವಾದ ವರದಿಯನ್ನು ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಸೆ. 13ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.