Mandya: ಪತ್ನಿ ಅನುಮಾನಾಸ್ಪದ ಸಾವು: ಗಂಡ ಆತ್ಮಹತ್ಯೆ
Team Udayavani, Aug 21, 2024, 11:42 AM IST
ಮಂಡ್ಯ: ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿದ ಪತಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗದ್ದೆ ಹೊಸೂರು ಗ್ರಾಮದಲ್ಲಿ ಘಟನೆ ಆ. 21ರ ಬುಧವಾರ ನಡೆದಿದೆ.
ಗದ್ದೆ ಹೊಸೂರು ಗ್ರಾಮದ ಮೋಹನ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ನಿನ್ನೆ ಆ.20ರ ಮಂಗಳವಾರ ರಾತ್ರಿ ಮೋಹನ್ ಪತ್ನಿ ಸ್ವಾತಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ಘಟನೆ ಬಳಿಕ ಮನೆಯಿಂದ ಪತಿ ಮೋಹನ್ ಹಾಗೂ ಆತನ ಪೋಷಕರು ನಾಪತ್ತೆಯಾಗಿದ್ದರು.
ಮೃತ ಯುವತಿಯ ಪೋಷಕರು ಗಂಡ ಹಾಗೂ ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದರು. ಆದರೆ ಬುಧವಾರ ಬೆಳಿಗ್ಗೆ ಕೆರೆಯಲ್ಲಿ ಪತಿ ಮೋಹನ್ ಶವ ಪತ್ತೆಯಾಗಿದೆ.
ಪತ್ನಿಯ ಸಾವಿಗೆ ಹೆದರಿ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಪತ್ನಿ ಸ್ವಾತಿ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೋಹನ್ ಪೋಷಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಿಕ್ಕೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದರು.
ಘೋರ ದುರಂತದಲ್ಲಿ ಅಂತ್ಯ ಕಂಡ ದಂಪತಿಯ ಸಾವಿನಿಂದ ಒಂದೂವರೆ ವರ್ಷದ ಹೆಣ್ಣು ಮಗು ಅನಾಥವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.