Maharashtra: 6 ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ-ಶಿಕ್ಷಕನ ಬಂಧನ
ದೂರಿನ ಆಧಾರದ ಮೇಲೆ ಶಿಕ್ಷಕನ ವಿರುದ್ಧ ಎಫ್ ಐಆರ್ ದಾಖಲಾಗಿದೆ.
Team Udayavani, Aug 21, 2024, 11:31 AM IST
ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ್ ದಲ್ಲಿ ನಾಲ್ಕು ವರ್ಷದ ಪುಟ್ಟ ಹೆಣ್ಣು ಮಕ್ಕಳ ಮೇಲೆ ದೈಹಿಕ ದೌರ್ಜನ್ಯ ನಡೆಸಿದ ಕೃತ್ಯದ ವಿರುದ್ಧ ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅರು ಮಂದಿ ವಿದ್ಯಾರ್ಥಿನಿಯರಿಗೆ ಲೈ*ಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನನ್ನು ಬಂಧಿಸಿರುವ ಘಟನೆ ಅಕೋಲಾದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಶಿಕ್ಷಕ (47ವರ್ಷ) ಅಶ್ಲೀಲ ವಿಡಿಯೋಗಳನ್ನು ತೋರಿಸಿ ಕಿರುಕುಳ ನೀಡುತ್ತಿರುವುದಾಗಿ ಕೆಲವು ವಿದ್ಯಾರ್ಥಿನಿಯರು ಆರೋಪಿಸಿರುವ ಪ್ರಕರಣದ ಸಂಬಂಧ ಮಂಗಳವಾರ (ಆ.20) ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:US new chapter; ಕಮಲಾ ಹ್ಯಾರಿಸ್ ರನ್ನು ಹಾಡಿ ಹೊಗಳಿದ ಒಬಾಮಾ
ಅಕೋಲಾದ ಕಾಝಿಖೇಡ್ ನಲ್ಲಿರುವ ಜಿಲ್ಲಾ ಪರಿಷತ್ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ಈತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.
ವಿದ್ಯಾರ್ಥಿನಿಯರು ನೀಡಿರುವ ದೂರಿನ ಆಧಾರದ ಮೇಲೆ ಶಿಕ್ಷಕನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿದ್ಯಾರ್ಥಿನಿಯರ ಹೇಳಿಕೆಯನ್ನು ಪಡೆದುಕೊಂಡಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಅಕೋಲಾ ಪೊಲೀಸ್ ವರಿಷ್ಠಾಧಿಕಾರಿ ಬಚ್ಚನ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.