Tungabhadra dam ; ನಾಲ್ಕೇ ದಿನದಲ್ಲಿ‌ ಯಶಸ್ವಿ ಕಾರ್ಯಾಚರಣೆ ನಡೆಸಿದ್ದೇವೆ: ಡಿಕೆಶಿ

ಡ್ಯಾಂಗಳ ಸುರಕ್ಷತೆಯ ಪ್ರಶ್ನೆ; ಸಮಿತಿ ರಚನೆ ಮಾಡಿದ್ದೇವೆ ಎಂದ ಸಚಿವ ಎಂ.ಬಿ.ಪಾಟೀಲ್

Team Udayavani, Aug 21, 2024, 2:21 PM IST

1-dam

ಕೊಪ್ಪಳ : ಇಡೀ ಭಾರತವೇ ತುಂಗಭದ್ರಾ ಡ್ಯಾಮ್ ನತ್ತ ನೋಡುತ್ತಿತ್ತು, ವಿರೋಧ ಪಕ್ಷದವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದರು ನಮ್ಮ ಸರಕಾರ ನಾಲ್ಕೇ ದಿನದಲ್ಲಿ‌ ಯಶಸ್ವಿ ಕಾರ್ಯಾಚರಣೆ ನಡೆಸಿದೆ ‘ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬುಧವಾರ(ಆ21) ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ‘ ಡ್ಯಾಂ ವಿಚಾರದಲ್ಲಿ ನಿಮಿಷವೂ ವಿಳಂಬ ಮಾಡದೇ ದಿನದ 24 ಗಂಟೆ ಕೆಲಸ ಮಾಡಿದ್ದೇವೆ. ನಮ್ಮ ಸಚಿವರು, ಶಾಸಕರು‌ ಹಗಲು ರಾತ್ರಿ‌ ನಿದ್ದೆ ಮಾಡದೇ ಜಾಗೃತಿ ವಹಿಸಿದ್ದರು. ಅವಘಡ ನಡೆದ ತತ್ ಕ್ಷಣವೇ ತಜ್ಞ ಕನ್ನಯ್ಯ ನಾಯ್ಡು ಸೇರಿದಂತೆ ಜಿಂದಾಲ್ ಕಂಪನಿಯನ್ನು ಸಂಪರ್ಕ ಮಾಡಿದೆವು. ಜಿಂದಾಲ್, ನಾರಾಯಣ ಮತ್ತು ಹಿಂದೂಸ್ಥಾನ್ ಈ ಮೂರು ಕಂಪನಿಗಳು ನಾಲ್ಕು ದಿನಗಳ ಕಾಲ ಶ್ರಮಿಸಿದರು. ನಾಲ್ಕು ದಿನದಲ್ಲಿ‌ ಕಾರ್ಯಾಚರಣೆ ಯಶಸ್ವಿ ಮಾಡಿದೆವು’ ಎಂದು ತಿಳಿಸಿದರು.

‘ಟೀಕೆಗಳು ಸಾಯುತ್ತವೆ, ಕೆಲಸ ಉಳಿಯುತ್ತದೆ. ಭಗವಂತನ ಕೃಪೆಯಿಂದ ಯಾವುದೇ ತೊಂದರೆ ಆಗಲಿಲ್ಲ. ರಾಜ್ಯದ ಎಲ್ಲ ಜಲಾಶಯಗಳ ಭದ್ರತೆಗೆ ಪರಿಶೀಲನೆಗೆ ಸಮಿತಿ ರಚನೆ ಮಾಡಿದ್ದು, ಈಗಾಗಲೇ ತಜ್ಞರು ಒಳಗೊಂಡ ಸಮಿತಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದೆ. ಡ್ಯಾಂ ಭದ್ರತೆಗೆ ನಮ್ಮ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ.ಜಲಾಶಯದ ನೀರು ತಡೆದು ನಾವು ರೈತರನ್ನು‌ ಬದುಕಿಸಿದ್ದೇವೆ’ ಎಂದರು.

ತುಂಗಭದ್ರಾ ಡ್ಯಾಂ ಆಯಸ್ಸು  30 ವರ್ಷ ಎಂಬ ವಿಚಾರದ ಕುರಿತಾದ ಪ್ರಶ್ನೆಗೆ ಉತ್ತರಿಸಿ ‘ಡ್ಯಾಂ ಗೆ ಪ್ರತಿ ವರ್ಷ ಅರ್ಧ ಟಿಎಂಸಿ ಹೂಳು ತುಂಬುವ ವಿಚಾರ ನಮಗೆ ಗೊತ್ತಿದೆ. ನವಲಿ ಡ್ಯಾಂ ವಿಚಾರದಲ್ಲಿ ನಾವು ಏನು ಮಾಡಬೇಕೆಂದು ಚರ್ಚೆ ಮಾಡುತ್ತೇವೆ’ ಎಂದರು.

ಡ್ಯಾಂ ನ ಕ್ರಸ್ಟ್ ಗೇಟ್‌ಗಳ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ ‘ತಜ್ಞ ಕನ್ನಯ್ಯ ನಾಯ್ಡು ಹೇಳಿದ್ದು, ಅದಕ್ಕೆ ನಮ್ಮ ಸರಕಾರ ಏನು ಮಾಡಬೇಕಿದೆಯೋ ಅದನ್ನು ಮಾಡುತ್ತದೆ.ನಾನು ಜಲಾಶಯದ ತಾಂತ್ರಿಕ ತಜ್ಞನಲ್ಲ. ನಾವು ರಚಿಸಿದ ಸಮಿತಿ ನೀಡುವ ವರದಿಯನ್ವಯ ಕ್ರಮ ಕೈಗೊಳ್ಳುತ್ತೇವೆ’ ಎಂದರು.

‘ತುಂಗಭದ್ರಾ ತುಂಬಿದ ನಂತರ ಬಾಗಿನ ಅರ್ಪಿಸಲು ಬರುತ್ತೇವೆ.ಗೇಟ್ ಅಳವಡಿಕಗೆ ಶ್ರಮಿಸಿದವರನ್ನು ಸತ್ಕರಿಸುತ್ತೇವೆ’ ಎಂದು ಡಿಸಿಎಂ ಹೇಳಿದರು.

ಸುರಕ್ಷತೆಗೆ ಸಮಿತಿ ರಚನೆ

ಸಚಿವ ಎಂ ಬಿ ಪಾಟೀಲ್ ಮಾತನಾಡಿ ‘ಡ್ಯಾಂ ನಿರ್ಮಾಣ ಮಾಡುವಾಗ ಪ್ರತಿ ವರ್ಷ 0.5 ಟಿಎಂಸಿ ಹೂಳು ತುಂಬುತ್ತದೆ. ಇದನ್ನು ನಮ್ಮ ಹಿರಿಯರು ಮೊದಲೇ ಹೇಳಿದ್ದಾರೆ. ಡ್ಯಾಂ ನಿರ್ಮಾಣವಾಗಿ ಈಗ 70 ವರ್ಷ ಆಗಿದೆ. 35 ಟಿಎಂಸಿ ಯಷ್ಟು ಹೂಳು ತುಂಬಿದೆ’ ಎಂದು ತಿಳಿಸಿದರು.

‘ಪ್ರತಿ ನೂರು ವರ್ಷಕ್ಕೆ ಹೊಸ ಡ್ಯಾಂ ಕಟ್ಟಬೇಕಾಗುತ್ತದೆ. ಈಗಾಗಲೇ ತುಂಗಭದ್ರಾ ಡ್ಯಾಂ ವಿಚಾರದಲ್ಲಿ ಸಮಿತಿ ರಚನೆ ಮಾಡಲಾಗಿದೆ.ಡ್ಯಾಂ ಗೇಟ್ ಸೇರಿ ಸುರಕ್ಷತೆಗೆ ಏನು ಮಾಡಬೇಕು ಎಲ್ಲವನ್ನೂ ಮಾಡುತ್ತೇವೆ. ಸರಕಾರ ಡ್ಯಾಂ ಸುರಕ್ಷತೆಗೆ ಸಮಿತಿ ರಚನೆ ಮಾಡಿದೆ. ವರದಿ ಅನುಸಾರ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.