ತೈವಾನ್ ಕಂಪನಿಯಿಂದ 200 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್
Team Udayavani, Aug 21, 2024, 4:07 PM IST
ಉದಯವಾಣಿ ಸಮಾಚಾರ
ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿರುವ ತೈವಾನ್‌ನ ಬೆಸ್ಟೆಕ್ ಪರ್ವ ಎಲೆಕ್ಟ್ರಾನಿಕ್ಸ್ ಕಂಪನಿ, ಬೆಂಗಳೂರಿನ ಆಸುಪಾಸು ಕಾರ್ಖಾನೆ ಸ್ಥಾಪಿಸಲು ಮುಂದೆ ಬಂದಿದೆ. ಇದರಿಂದ 5 ಸಾವಿರ ಉದ್ಯೋಗಗಳ ಸೃಷ್ಟಿ ಆಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ನಗರದಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಈ ಮಾಹಿತಿ ನೀಡಿದ ಅವರು, ಕಾರ್ಖಾನೆ ಸ್ಥಾಪನೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ:Kamala Harris ಭಾರತೀಯ ಮೂಲದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ WWE ಕುಸ್ತಿಪಟು
ತೈವಾನ್ ಮೂಲದ ಕಂಪನಿಯ ಈ ಯೋಜನೆಯಿಂದ ಸುಮಾರು 5 ಸಾವಿರ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ. ಮೂಲಸೌಕರ್ಯ ಅಭಿವೃದ್ಧಿ ಬಳಿಕ 3 ವರ್ಷಗಳಲ್ಲಿ ಕಂಪನಿಯು ಯೋಜನೆಗೆ ಹಂತ-ಹಂತವಾಗಿ ಬಂಡ ವಾಳ ಹೂಡಲಿದೆ ಎಂದರು. ಬೆಸ್ಟೆಕ್ ಕಂಪನಿಯು ಅಡಾಪ್ಟರ್, ಸಿ-ಪಿನ್, ಇವಿ ಮತ್ತು ಲ್ಯಾಪ್‌ಟಾಪ್ ಚಾರ್ಜರ್, ಕೇಬಲ್ ಇತ್ಯಾದಿಗಳನ್ನು ಉತ್ಕೃಷ್ಟ ಗುಣಮಟ್ಟ ದೊಂದಿಗೆ ತಯಾರಿಸಲಿದೆ.
ಈ ಮೂಲಕ ಕಂಪನಿಯು ವಾರ್ಷಿಕವಾಗಿ ಎರಡೂವರೆ ಸಾವಿರ ಕೋಟಿ ರೂಪಾಯಿ ವಹಿವಾಟು ನಡೆಸಲಿದೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.