Google Map: ಬಿರುಕು ಬಿಟ್ಟಂತೆ ಕಂಡುಬಂದ ರಾಣಿಝರಿ ಪ್ರದೇಶ… ಅಧಿಕಾರಿಗಳು ದೌಡು
Team Udayavani, Aug 22, 2024, 11:12 AM IST
ಕೊಟ್ಟಿಗೆಹಾರ : ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಬುಧವಾರ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿ`ಭಾಗದಲ್ಲಿರುವ ರಾಣಿ ಝರಿ ಪ್ರವಾಸಿತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಾರಿ ಮಳೆಯಾಗುತ್ತಿದೆ. ಗೂಗಲ್ ಮ್ಯಾಪ್‌ನಲ್ಲಿ ರಾಣಿ ಝರಿ ಪ್ರದೇಶ ಬಿರುಕು ಬಿಟ್ಟಿರುವ ರೀತಿಯಲ್ಲಿ ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗಾಕಾರಿಗಳು ರಾಣಿಝರಿ ಸಮೀಪ ಬಾರಿ ಮಳೆಯಾಗುತ್ತಿರುವುದರಿಂದ `ಭೂಮಿಕುಸಿತವಾಗುವ ಸಂಭವವಿದೆ ಎಂದು ಚಿಕ್ಕಮಗಳೂರು ಉಪವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಉಪವಿಭಾಗಧಿಕಾರಿಗಳು ಸೂಚನೆಯ ಮೇರೆಗೆ ನಿಡುವಾಳೆ ಮತ್ತು ಸುಂಕಸಾಲೆ ಗ್ರಾಮ ಲೆಕ್ಕಾಕಾರಿಗಳಾದ ಜಯಪ್ರಕಾಶ್ ಮತ್ತು ಮಹೇಶ್ ಸ್ಥಳ್ಕಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಆದರೆ ಅಲ್ಲಿ ಯಾವುದೇ ಭೂಕುಸಿತ ಹಾಗೂ ಬಿರುಕು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.