Atikaya Movie; ಹೊಸ ಲುಕ್ ನಲ್ಲಿ ನಿರೂಪ್ ಭಂಡಾರಿ
Team Udayavani, Aug 22, 2024, 5:17 PM IST
ರಂಗಿತರಂಗ ಮೂಲಕ ಬೆಳಕಿಗೆ ಬಂದು ಕ್ಲಾಸ್ ಹೀರೋ ಎನಿಸಿಕೊಂಡಿದ್ದ ನಿರೂಪ್ ಭಂಡಾರಿ, ಇದೀಗ ಮಾಸ್ ಲುಕ್ನಲ್ಲಿ ಕಾಣಿಸಿ ಕೊಂಡಿದ್ದಾರೆ. “ಅತಿಕಾಯ’ ಎನ್ನುವ ಹೊಸ ಸಿನಿಮಾದಲ್ಲಿ ರಗಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. “ಅತಿಕಾಯ’ ಸಿನಿಮಾ ನಾಗರಾಜ್ ಪೀಣ್ಯ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ.
ಈ ಹಿಂದೆ ಪದೇ ಪದೇ, ನಮಕ್ಹರಾಮ್ ಮೊದಲಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ನಾಗರಾಜ್ ಪೀಣ್ಯ, ಸಣ್ಣ ಗ್ಯಾಪ್ ಬಳಿಕ “ಅತಿಕಾಯ’ ಮಾಡುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಶೂಟಿಂಗ್ ಮುಗಿಸಿದ್ದಾರೆ. ಮತ್ತೂಂದು ಹಂತದ ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ ಚಿತ್ರತಂಡ.ಈವರೆಗೂ ಬೆಂಗಳೂರಿನ ಜನಜಂಗುಳಿ ಪ್ರದೇಶಗಳಲ್ಲೇ ಬಹುತೇಕ ಚಿತ್ರೀಕರಣ ನಡೆಸಲಾಗಿದ್ದು, ನೈಜವಾಗಿ ಮೂಡಿ ಬರಬೇಕೆಂಬ ಕಾರಣದಿಂದ ನೈಜವಾಗಿಯೇ ಶೂಟ್ ಮಾಡಲಾಗಿದೆಯಂತೆ.
ಈ ಚಿತ್ರಕ್ಕಾಗಿ ನಿರೂಪ್ ಭಂಡಾರಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ವರ್ಕೌಟ್ ಮಾಡಿ ದೇಹ ದಂಡಿಸಿದ್ದಾರೆ. ಪಾತ್ರಕ್ಕಾಗಿ ಗೆಟಪ್ ಸಹ ಬದಲಾಯಿಸಿ ಕೊಂಡಿದ್ದಾರೆ. ಡೈಲಾಗ್ ಡೆಲಿವರಿ ಕೂಡ ಭಿನ್ನವಾಗಿರಲಿದೆಯಂತೆ. ಚಿತ್ರಕ್ಕೆ ಉದಯಲೀಲ ಛಾಯಾಗ್ರಹಣ, ಶ್ರೀನಿವಾಸ್ ಪಿ ಬಾಬು ಸಂಕಲನ, ಸತೀಶ್ ಆರ್ಯನ್ ಸಂಗೀತ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.