Hangarkere: ತಲ್ಲೂರು ಗ್ರಾ.ಪಂ.ನಿಂದ ದಂಡೆ ನಿರ್ಮಾಣ

ಹೂಳೆತ್ತಿ, ಅಭಿವೃದ್ಧಿಪಡಿಸಿದರೆ ಊರಿಗೆ ವರದಾನ

Team Udayavani, Aug 22, 2024, 6:19 PM IST

Tallur Grama Panchayat Embankment Construction

ಕುಂದಾಪುರ: ತಲ್ಲೂರು ಗ್ರಾಮದ ಉಪ್ಪಿನಕುದ್ರು – ತಲ್ಲೂರು ಮುಖ್ಯ ರಸ್ತೆಗೆ ತಾಗಿಕೊಂಡೇ ಇರುವಂತಹ “ಹಂಗಾರ್‌ಕೆರೆ’ಗೆ ತಲ್ಲೂರು ಗ್ರಾ.ಪಂ. ವತಿಯಿಂದ ತುರ್ತಾಗಿ ತಡೆಗೋಡೆ ನಿರ್ಮಾಣ ಕಾರ್ಯ ಬುಧವಾರದಿಂದ ಆರಂಭಗೊಂಡಿದೆ. ಈ ಕೆರೆಯು ರಸ್ತೆಯ ಸನಿಹದಲ್ಲೇ ಇರುವುದರಿಂದ ಅಪಾಯಕಾರಿಯಾಗಿ ಪರಿಣಮಿಸಿತ್ತು.

ತಲ್ಲೂರು – ಉಪ್ಪಿನಕುದ್ರು ರಸ್ತೆಯ ತಲ್ಲೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕಿಂತ ಸ್ವಲ್ಪ ದೂರದಲ್ಲಿಯೇ ಈ ಪುರಾತನ ಕೆರೆಯಿದ್ದು, ಹಿಂದೆ ನಿರ್ಮಿಸಿದ್ದ ದಂಡೆ ಮುರಿದು ಬಿದ್ದಿತ್ತು. ಹತ್ತಿರದಲ್ಲೇ ಅಂಗನವಾಡಿ ಕೇಂದ್ರವೂ ಇದ್ದುದರಿಂದ ಅಪಾಯಕಾರಿಯಾಗಿದ್ದು, ಈಗ ಪಂಚಾಯತ್‌ನಿಂದ ತಡೆಗೋಡೆ ನಿರ್ಮಿಸಲಾಗುತ್ತಿದ್ದು, ಜನ ನಿಟ್ಟುಸಿರು ಬಿಡುವಂತಾಗಿದೆ.

ಹೂಳೆತ್ತಿದರೆ ಕೃಷಿಗೆ ಪೂರಕ
ಇದು 60 ವರ್ಷಗಳಿಗೂ ಹಿಂದಿನ ಕೆರೆಯಾಗಿದ್ದು, ವಿಶಾಲವಾದ ಪ್ರದೇಶದಲ್ಲಿದೆ. ಈ ಕೆರೆಯ ಹೂಳೆತ್ತದೇ 30 ವರ್ಷಗಳಿಗೂ ಹೆಚ್ಚು ಕಾಲವಾಗಿದೆ. ಇನ್ನು 10 ವರ್ಷದ ಹಿಂದೆ ಒಮ್ಮೆ ರಸ್ತೆ ಬದಿಗೆ ದಂಡೆ ನಿರ್ಮಿಸಲಾಗಿತ್ತು. ಅದು ಸಹ ಈಗ ತುಂಡಾಗಿ ಹೋಗಿದೆ. ಈಗ ತಡೆಗೋಡೆ ಆಗುತ್ತಿದೆ. ಅದರೊಂದಿಗೆ ಹೂಳೆತ್ತಿ, ಪುನರುಜ್ಜೀವನಗೊಳಿಸಿದರೆ, ಇಲ್ಲಿನ ಪರಿಸರದ ಸುಮಾರು 25ಕ್ಕೂ ಮಿಕ್ಕಿ ಮನೆಗಳಲ್ಲಿರುವ ಬಾವಿಯ ಅಂತರ್ಜಲ ಮಟ್ಟ ವೃದ್ಧಿಗೂ ಸಹಕಾರಿಯಾಗಬಹುದು. ಇದಲ್ಲದೆ ಇಲ್ಲಿನ ಹತ್ತಾರು ಎಕರೆ ಗದ್ದೆಗಳಲ್ಲಿ ಎರಡನೇ ಬೆಳೆ ಬೆಳೆಯಲು ಸಹ ಪೂರಕವಾಗಲಿದೆ. ಕೆರೆಯ ಹೂಳೆತ್ತಿ, ಕುಸಿಯದಂತೆ ಕಲ್ಲುಗಳನ್ನು ಕಟ್ಟಿ, ತಡೆಗೋಡೆ ನಿರ್ಮಿಸಿದರೆ ಈ ಪರಿಸರದ ಉತ್ತಮ ನೀರಿನ ಮೂಲ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಅಭಿವೃದ್ಧಿಗೆ ಪ್ರಸ್ತಾವ
ಹಂಗಾರ್‌ಕೆರೆ ರಸ್ತೆ ಬದಿಯೇ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ತುರ್ತಾಗಿ ಪಂಚಾಯತ್‌ ವತಿಯಿಂದ ತುರ್ತಾಗಿ ತಡೆಗೋಡೆ ನಿರ್ಮಿಸುತ್ತಿದ್ದೇವೆ. ಇನ್ನು ಲೋಕೋಪಯೋಗಿ ಇಲಾಖೆಗೂ ಪಂಚಾಯತ್‌ನಿಂದ ಪತ್ರ ಬರೆದಿದ್ದೇವೆ. ಇನ್ನು ಕೆರೆಯ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಶಾಸಕರಿಗೂ ಪ್ರಸ್ತಾವನೆ ಸಲ್ಲಿಸಿದ್ದೇವೆ.
– ಗಿರೀಶ್‌ ನಾಯ್ಕ, ಅಧ್ಯಕ್ಷರು, ತಲ್ಲೂರು ಗ್ರಾ.ಪಂ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Sakhi

Udupi: ಮಗನಿಂದ ಕಿರುಕುಳ: ತಾಯಿ ಸಖಿ ಸೆಂಟರ್‌ಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.