MUDA CASE: ಸಿಎಂ ರಾಜೀನಾಮೆ ಆಗ್ರಹಿಸಿ ಮಂಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ


Team Udayavani, Aug 23, 2024, 12:53 AM IST

MUDA CASE: ಸಿಎಂ ರಾಜೀನಾಮೆ ಆಗ್ರಹಿಸಿ ಮಂಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಮಂಗಳೂರು: ಮುಡಾ ಪ್ರಕರಣದಲ್ಲಿ ಭಾಗಿಯಾದ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಾಗೂ ದಲಿತ ಸಮುದಾಯಕ್ಕೆ ಸೇರಿದ ರಾಜ್ಯಪಾಲರಿಗೆ ಬೆದರಿಕೆ, ಅವಹೇಳನಕಾರಿಯಾಗಿ ನಡೆದುಕೊಂಡ ಕಾಂಗ್ರೆಸ್‌ ವರ್ತನೆಯನ್ನು ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಶಾಸಕ ಡಾ| ವೈ. ಭರತ್‌ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ವಿರುದ್ಧ ಅಂದಿನ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದಾಗ, ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಯಡಿಯೂರಪ್ಪನವರ ರಾಜೀನಾಮೆಗೆ ಆಗ್ರಹಿಸಿದ್ದರು. ಈಗ ಕಾಲಚಕ್ರ ತಿರುಗಿದ್ದು, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಶುದ್ಧಹಸ್ತರೇ ಆಗಿದ್ದಲ್ಲಿ ವಿಧಾನಸಭಾ ಆವೇಶದಲ್ಲಿ ಚರ್ಚಿಸಬೇಕಿತ್ತು. ಆದರೆ ವಿಧಾನಸಭೆಯಿಂದ ಸಿಎಂ ಓಡಿ ಹೋಗಿದ್ದಾರೆ ಎಂದರು.

ಬಿಜೆಪಿ ಶಾಸಕರ ವಿರುದ್ಧ ತತ್‌ಕ್ಷಣ ಪ್ರಕರಣ ದಾಖಲಿಸುವ ಪೊಲೀಸ್‌ ಅ ಧಿಕಾರಿಗಳು, ಐವನ್‌ ವಿರುದ್ಧ ದೂರು ನೀಡಿದರೂ ಪ್ರಕರಣ ದಾಖಲಿಸಿಲ್ಲ. ಪೊಲೀಸ್‌ ಇಲಾಖೆ ರಾಜಕೀಯ ಬಿಟ್ಟು ತಮ್ಮ ಕರ್ತವ್ಯ ನಿರ್ವಹಿಸಲಿ. ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ನೆನಪಲ್ಲಿಟ್ಟುಕೊಳ್ಳಿ. ಐವನ್‌ ವಿರುದ್ಧ ಪ್ರಕರಣ ದಾಖಲಿಸಲು ಸೆಕ್ಷನ್‌ ಸಿಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದು, ನಿಮಗೆ ಸೆಕ್ಷನ್‌ ನಾವು ಹುಡುಕಿಕೊಡುತ್ತೇವೆ. ಐವನ್‌ ವಿರುದ್ಧ ದೇಶದ್ರೋಹ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಐವನ್‌ ಮನೆಗೆ ಕಲ್ಲು ಹೊಡೆಯಲು ಬೈಕ್‌ನಲ್ಲಿ ಬಂದಿದ್ದ ಇಬ್ಬರು ಹೆಲ್ಮೆಟ್‌ ಧರಿಸಿದ್ದರು ಎಂದು ಹೇಳಲಾಗುತ್ತಿದೆ. ಆ ಇಬ್ಬರು ನಾನು ಮತ್ತು ವೇದವ್ಯಾಸ್‌ ಕಾಮತ್‌ ಎಂದು ಪೊಲೀಸರು ನಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಿ ರೌಡಿಶೀಟರ್‌ ದಾಖಲಿಸಿದರೂ ಆಶ್ವರ್ಯವಿಲ್ಲ ಎಂದು ಭರತ್‌ ಶೆಟ್ಟಿ ಹೇಳಿದರು.

ಅನುಕಂಪಕ್ಕಾಗಿ ಐವನ್‌ ಯತ್ನ: ವೇದವ್ಯಾಸ ಕಾಮತ್‌ ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಸಂವಿಧಾನದ ರಕ್ಷಕರು ಎಂದು ಹೇಳುತ್ತಿರುವ ಕಾಂಗ್ರೆಸಿಗರು ಈಗ ದಲಿತ ರಾಜ್ಯಪಾಲರನ್ನು ಅವಹೇಳನ ಮಾಡುತ್ತಿದ್ದಾರೆ. ಪುಂಡ ಕಾಂಗ್ರೆಸ್‌ ಕಾರ್ಯಕರ್ತರು ಬಸ್‌ಗೆ ಕಲ್ಲು ಹೊಡೆದಿದ್ದಾರೆ. ಪೊಲೀಸ್‌ ಇಲಾಖೆಗೆ ಧಮ್‌ ಇದ್ದರೆ ಗಲಭೆಗೆ ಪ್ರಚೋಚನೆ ನೀಡಿದ ಐವನ್‌ ಡಿ’ ಸೋಜಾ ಅವರನ್ನು ಬಂಧಿ ಸಬೇಕು ಎಂದರು.

ಐವನ್‌ ಅವರು ತನ್ನ ಮನೆಗೆ ತಾನೇ ಸೂಚನೆ ನೀಡಿ ಕಲ್ಲು ಹೊಡೆಸುವ ಮೂಲಕ ಅನುಕಂಪ ಗಿಟ್ಟಿಸಲು ಯತ್ನಿಸಿದ್ದಾರೆ. ಕಾಂಗ್ರೆಸಿಗರೇ ಐವನ್‌ಗೆ ಛೀಮಾರಿ ಹಾಕುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಮುಡಾ ಹಗರಣಕ್ಕೆ ಸಂಬಂಧಿ ಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಸಿಎಂ ಹೆದರಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರಿದರೆ ತನಿಖೆಯ ದಿಕ್ಕು ತಪ್ಪಿಸಲಿದ್ದಾರೆ. ಆದ್ದರಿಂದ ಅವರು ತತ್‌ಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪ ಸಿಂಹ ನಾಯಕ್‌ ಮಾತನಾಡಿ, ಸಿಎಂ ವಿರುದ್ಧ ಮುಡಾ ಹಗರಣ ಇರುವ ವೇಳೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಡಾ| ಮಂಜುಳಾ ರಾವ್‌ ಮಾತನಾಡಿ, ಮಂಗಳೂರಿನಲ್ಲಿ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆ ವೇಳೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ಕಾಂಗ್ರೆಸ್‌ ಸರಕಾರ ಕಲ್ಲು ಹೊಡೆಸಿದೆ ಎಂದರು.

ಪಾಲಿಕೆ ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಉಪಮೇಯರ್‌ ಸುನಿತಾ, ಮಾಜಿ ಸಚಿವ ಎಸ್‌. ಅಂಗಾರ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಾಲಕೃಷ್ಣ ಭಟ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್‌ ಆರ್ವಾರ್‌, ಮುಖಂಡರಾದ ರವಿಶಂಕರ ಮಿಜಾರು, ವಿಕಾಸ್‌ ಪುತ್ತೂರು, ರಮೇಶ್‌ ಕಂಡೆಟ್ಟು, ತಿಲಕ್‌ರಾಜ್‌ ಕೃಷ್ಣಾಪುರ, ನಂದನ್‌ ಮಲ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-aie

Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!

1-asi

Mangaluru; ಕಾವೂರು ಎಎಸ್ಐ ಜಯರಾಮ್ ನಿಧನ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.