Sasthan: ಮಂಜೂರಾಗಿ 2 ವರ್ಷ ಕಳೆದರೂ ಜಿಲ್ಲೆಗಿಲ್ಲ ಇಎಸ್‌ಐ ಆಸ್ಪತ್ರೆ ಭಾಗ್ಯ


Team Udayavani, Aug 23, 2024, 4:43 PM IST

9

ಸಾಸ್ತಾನ: ಉಡುಪಿ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಕಾರ್ಮಿಕ ವಲಯದ ಹಲವಾರು ವರ್ಷಗಳ ಬೇಡಿಕೆಯಂತೆ ಕೇಂದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಿಲ್ಲೆಗೆ 100 ಹಾಸಿಗೆಯ ವಿಮಾ ಅಸ್ಪತ್ರೆ ಹಾಗು ಹಾಗೂ ಸಿಬಂದಿ ವಸತಿಗೃಹ ನಿಮಾಣದ ಮಂಜೂರಾತಿ ನೀಡಿ ಎರಡು ವರ್ಷ ಕಳೆದರೂ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಗೆ ಇನ್ನೂ ಚಾಲನೆ ದೊರಕಿಲ್ಲ.

ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಸುಸಜ್ಜಿತ ಇಎಸ್‌ಐ ಆಸ್ಪತ್ರೆಯ ಆಗತ್ಯತೆ ಇದೆ. ವಿವಿಧ ಕಾರ್ಮಿಕ ಸಂಘಟನೆಗಳು, ಸ್ವಯಂ ಸೇವಾ ಸಂಘಗಳ ಬಹುಕಾಲದ ಬೇಡಿಕೆ ಹಾಗೂ ಹಿಂದಿನ ಉಡುಪಿ ಶಾಸಕರು ಮತ್ತು ಸಂಸದರ ಮುತುವರ್ಜಿಯಿಂದಾಗಿ ಎರಡು ವರ್ಷಗಳ ಹಿಂದೆಯೆ ಇಎಸ್‌ಐ ಕಾರ್ಪೋರೇಶ‌ನ್‌ನಿಂದ ಜಿಲ್ಲೆಗೆ ನೂರು ಹಾಸಿಗೆಯ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಮಂಜೂರಾತಿ ದೊರಕಿತ್ತು. ಅನಂತರ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತವಾದ ಜಾಗ ಗುರುತಿಸಿದ್ದರೂ ಇನ್ನೂ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರಕಿಲ್ಲ.

60 ಸಾವಿರಕ್ಕಿಂತ ಹೆಚ್ಚು ಇಎಸ್‌ಐ ಸದಸ್ಯರಿರುವ ಜಿಲ್ಲೆಯಲ್ಲಿ ಆಸ್ಪತ್ರೆ ನಿರ್ಮಿಸಲೇಬೇಕು ಎಂದು ಇಎಸ್‌ಐ ಕಾನೂನು ಇದ್ದರೂ ಒಂದು ಲಕ್ಷಕ್ಕಿಂತ ಹೆಚ್ಚು ಕಾರ್ಮಿಕರು ವಿಮಾಯೋಜನೆಯ ಸದಸ್ಯರು ಹಾಗು ಸುಮಾರು 5 ಲಕ್ಷದ ತನಕ ಫಲಾನುಭವಿಗಳಿರುವ ಉಡುಪಿ ಜಿಲ್ಲೆಯಲ್ಲಿ ಆಸ್ಪತ್ರೆ ನಿರ್ಮಾಣ ಈಗಾಗಲೇ ಆಗಬೇಕಾಗಿತ್ತು. ಆದುದರಿಂದ ಕಾನೂನಾತ್ಮಕವಾಗಿ ಇಎಸ್‌ಐ ಆಸ್ಪತ್ರೆ ನಿರ್ಮಾಣ ಕಾರ್ಯ ನಡೆಯಬೇಕಾಗಿದೆ.

ಟೆಂಡರ್‌ ಪ್ರಕ್ರಿಯೆಗೆ ಚಾಲನೆ
ಅಸ್ಪತ್ರೆ ನಿರ್ಮಾಣಕ್ಕೆ ಟೆಂಡರ್‌ ಹಾಗು ಬಿಡ್‌ ಪ್ರಕ್ರಿಯೆ ಇಲಾಖಾ ಮಟ್ಟದಲ್ಲಿ ನಡೆದಿದ್ದು, ಅಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲಿ ಚಾಲನೆ ದೊರಕಲಿದೆ.
-ಯಶ್‌ಪಾಲ್‌ ಸುವರ್ಣ, ಶಾಸಕರು

ಮುಂದಿನ ದಿನಗಳಲ್ಲಿ ಹೋರಾಟ
ಇಎಸ್‌ಐ ಆಸ್ಪತ್ರೆ ನಿಮಾಣಕ್ಕೆ ಜಾಗ ಗುರುತಿಸಲಾಗಿದ್ದರೂ ಈ ತನಕ ಆಸ್ಪತ್ರೆ ನಿಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನಡೆದಿಲ್ಲ. ಕೂಡಲೇ ಆಸ್ಪತ್ರೆ ನಿಮಾಣ ಕಾರ್ಯಕ್ಕೆ ಚಾಲನೆ ನೀಡಬೇಕಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಿದ್ದೇವೆ
-ಶಶಿಧರ್‌, ಸಿಐಟಿಯು ಉಡುಪಿ ಜಿಲ್ಲಾ ಕೋಶಾಧಿಕಾರಿ

ಅತೀ ಶೀಘ್ರ ಚಾಲನೆಗೊಳ್ಳಬೇಕು
ಇಎಸ್‌ಐ ಅಸ್ಪತ್ರೆ ಹಾಗೂ 32 ಸಿಬ್ಬಂದಿ ವಸತಿಗ್ರಹದ ನಿರ್ಮಾಣದ ಪೂರ್ವಭಾವಿ ಪ್ರಕ್ರಿಯೆಗಳು ಇಎಸ್‌ಐ ನಿಗಮದ ಹಂತದಲ್ಲಿ ಪ್ರಗತಿಯಲ್ಲಿದೆ. ಜಿಲ್ಲಾ ಶಾಸಕರು, ಸಂಸದರ ಮುತುವರ್ಜಿ, ಜಿಲ್ಲಾಡಳಿತ, ಸ್ಥಳೀಯರ ಸಹಕಾರದಿಂದ ಆಸ್ಪತ್ರೆ ನಿರ್ಮಾಣ ಕಾಮಗಾರಿ ಅತೀ ಶೀಘ್ರದಲ್ಲಿ ಚಾಲನೆಗೊಳ್ಳಬೇಕು. ಕ್ಲಪ್ತ ಸಮಯದಲ್ಲಿ ಪೂರ್ಣಗೊಂಡು ಇಎಸ್‌ಐ ಫಲಾನುಭವಿಗಳ ಸೇವೆಗೆ ತೆರೆದುಕೊಳ್ಳುವುದು ಅತೀ ಆಗತ್ಯವಾಗಿದೆ
-ಡಾ| ಹೇಮಂತ್‌ಕುಮಾರ್‌, ಆಡಳಿತ ವಿಮಾ ವೈದ್ಯಾಧಿಕಾರಿ,ಇಎಸ್‌ಐ ಉಡುಪಿ ಮತ್ತು ಕುಂದಾಪುರ

6 ಎಕರೆ ಭೂಮಿ ಗುರುತಿಸಲಾಗಿದೆ
ಆಸ್ಪತ್ರೆ ನಿರ್ಮಿಸಲು ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯಲ್ಲಿ ಸುಮಾರು 6 ಎಕರೆ ಸರಕಾರಿ ಭೂಮಿಯನ್ನು ಗುರುತಿಸಿದ್ದು, ಇಎಸ್‌ಐ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಎರಡು ವರ್ಷಗಳು ಕಳೆದರೂ ಕಾಮಗಾರಿಗೆ ಚಾಲನೆ ಮಾತ್ರ ಇನ್ನೂ ದೊರೆತಿಲ್ಲ.

-ಉದಯ ಆಚಾರ್‌ ಸಾಸ್ತಾನ

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.