Navunda: ಫ್ಯಾನ್ಸಿ ಸ್ಟೋರ್ನಲ್ಲಿ ಬೆಂಕಿ ದುರಂತ; 3 ಲಕ್ಷ ರೂ. ಮಿಕ್ಕಿ ನಷ್ಟ
Team Udayavani, Aug 23, 2024, 7:35 PM IST
ಉಪ್ಪುಂದ: ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ಪ್ಲಾಜಾ ಗ್ರೋ ಕಾಂಪ್ಲೆಕ್ಸ್ನಲ್ಲಿರುವ ಫ್ಯಾನ್ಸಿ ಸ್ಟೋರ್ಗೆ ಶುಕ್ರವಾರ(ಆ.23) ಆಕಸ್ಮಿಕವಾಗಿ ಬೆಂಕಿ ತಗಲಿ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ಅರೆಹೊಳೆ ಪ್ರತಿಭಾ ವಿಜೇಂದ್ರ ಟೈಲರಿಂಗ್ ಜತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿ ಅಂಗಡಿ ನಡೆಸುತ್ತಿದ್ದರು. ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ವಸ್ತುಗಳು ಹಾಗೂ ಸುಮಾರು 5 ಸಾ.ರೂ. ಇತ್ತು.
ಪ್ರತಿಭಾ ಮಧ್ಯಾಹ್ನ 12 ಗಂಟೆಯವರೆಗೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಬಳಿಕ ದೇವಸ್ಥಾನಕ್ಕೆ ತೆರಳಿದ್ದರು. ಸುಮಾರು 12.45ರ ಹೊತ್ತಿಗೆ ಹೊಗೆ ತುಂಬಿಕೊಂಡದ್ದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬಂದಿ ಹಾಗೂ ಪೊಲೀಸರಿಗೆ ತಿಳಿಸಿದರು. ಅಗ್ನಿ ಶಾಮಕ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಹೊತ್ತಿಗೆ ಒಳಗಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಹೋಗಿದ್ದು, 3 ಲಕ್ಷ ರೂ. ಮಿಕ್ಕಿ ನಷ್ಟ ಅಂದಾಜಿಸಲಾಗಿದೆ.
ಬೈಂದೂರು ಪೊಲೀಸರು ಸ್ಥಳಕ್ಕೆ ತೆರಳಿದ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.