Thekkatte: ಪ್ರಯಾಣಿಕರ ಬಸ್‌ ತಂಗುದಾಣ ಸ್ಥಳಾಂತರಕ್ಕೆ ಮಹತ್ವದ ನಿರ್ಣಯ ಕೈಗೊಂಡ ಗ್ರಾ.ಪಂ.!

ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ; ಪ್ರಥಮ ಹಂತದ ಗ್ರಾಮಸಭೆ; ಪ್ರತಿಧ್ವನಿಸಿದ ಉದಯವಾಣಿ ವರದಿ

Team Udayavani, Aug 24, 2024, 10:54 AM IST

4-thekkatte

ತೆಕ್ಕಟ್ಟೆ: ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಟಿ.ಶೋಭನಾ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆ.23ರ ಶುಕ್ರವಾರ ತೆಕ್ಕಟ್ಟೆ ಶ್ರೀ ದುರ್ಗಾಪರಮೇಶ್ವರೀ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಜಿ.ಪಂ. ಶಿಕ್ಷಣ ಮತ್ತು ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಗಣಪತಿ ಟಿ.ಶ್ರೀಯಾನ್‌ ಮಾತನಾಡಿ, ಈಗಾಗಲೇ ತೆಕ್ಕಟ್ಟೆ ಹೃದಯ ಭಾಗದಲ್ಲಿ ಅವ್ಯವಸ್ಥಿತವಾದ ಬಸ್‌ ತಂಗುದಾಣದಿಂದಾಗಿ ಸ್ಥಳೀಯ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ ಹಲವು ಭಾರೀ ವಿಸ್ತೃತವಾದ ವರದಿ ಪ್ರಕಟಿಸಿದೆ. ಈ ತಂಗುದಾಣ ತೆಕ್ಕಟ್ಟೆಗೆ ಕಳಂಕವಾಗಿದ್ದು, ಸಂಭವನೀಯ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಗ್ರಾಮ ಪಂಚಾಯತ್‌ ವೈಜ್ಞಾನಿಕವಾಗಿ ಚಿಂತನೆ ನಡೆಸಿ, ತುರ್ತಾಗಿ ಬಸ್‌ ತಂಗುದಾಣವನ್ನು ಸುರಕ್ಷಿತವಾದ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಇಂದೇ ಅಂತಿಮ ನಿರ್ಣಯ ಕೈಗೊಳ್ಳುವಂತೆ ಸಾರ್ವಜನಿಕರ ಪರವಾಗಿ ಆಗ್ರಹಿಸುತ್ತಿದ್ದಂತೆ ಸಭೆಯಲ್ಲಿ ಹಾಜರಿದ್ದ ನೂರಾರು ಗ್ರಾಮಸ್ಥರು ಒಮ್ಮತದಿಂದ ಒತ್ತಾಯಿಸಿದ ಘಟನೆ ಕೂಡಾ ಸಂಭವಿಸಿದೆ.

ಈ ಸಂದರ್ಭದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಟಿ.ಶೋಭನಾ ಶೆಟ್ಟಿ ಪ್ರತಿಕ್ರಿಯಿಸಿ, ತೆಕ್ಕಟ್ಟೆ ರಾ.ಹೆ.66 ಈಗಿರುವ ಪ್ರಯಾಣಿಕರ ತಾತ್ಕಾಲಿಕ ಬಸ್‌ ತಂಗುದಾಣಗಳಿಂದ  ವಾಹನ ಸವಾರರಿಗೆ ಆಗುತ್ತಿರುವ ತೊಂದರೆಗಳನ್ನು ಅರಿತು ಕುಂದಾಪುರದಿಂದ ಉಡುಪಿ ಕಡೆಗೆ ಹೋಗುವ ಮಾರ್ಗದಲ್ಲಿನ ಬಸ್‌ ಸ್ಟ್ಯಾಂಡ್‌ನ‌ ದಿ| ಬಾಲಕೃಷ್ಣ ಸೇರ್ವೆಗಾರ್‌ ಅವರ ಮನೆ ಎದುರಿನ ಖಾಲಿ ಜಾಗಕ್ಕೆ ಸ್ಥಳಾಂತರಿಸಲಾಗುವುದು. ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುವ ಮಾರ್ಗದಲ್ಲಿನ ಬಸ್‌ ಸ್ಟ್ಯಾಂಡ್‌ನ‌ ನಾರಾಯಣ ಪೈ ಕಾಂಪ್ಲೆಕ್ಸ್‌ ಎದುರಿಗೆ (ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇಗುಲದ ಸಮೀಪ) ಸ್ಥಳಾಂತರಿಸುವ ಬಗ್ಗೆ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಮಾತನಾಡಿ, ಡೆಂಗ್ಯೂ ಮತ್ತು ಮಲೇರಿಯಾದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಿಂದ ಆಯಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಕರಪತ್ರಗಳನ್ನು ಮುದ್ರಿಸುವ ಜವಾಬ್ದಾರಿಯನ್ನು ಗ್ರಾ.ಪಂ.ಗಳಿಗೆ ನೀಡುವ ಮೂಲಕ ಪ್ರತಿ ಗ್ರಾಮಸ್ಥರಿಗೂ ಕೂಡಾ ಕರಪತ್ರವನ್ನು ತಲುಪಿಸುವ ಮಹತ್ವದ ಕಾರ್ಯವಾಗಬೇಕಾಗಿದೆ ಎಂದು ಹೇಳಿದರು.

ಸ್ಥಳೀಯ ಯುವ ಮುಖಂಡ ಶ್ರೀನಾಥ ಶೆಟ್ಟಿ ಮೇಲ್ತಾರುಮನೆ ಮಾತನಾಡಿ, ತೆಕ್ಕಟ್ಟೆ ರಾ.ಹೆ.66ರ ಇಕ್ಕೆಲದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ಬೃಹತ್‌ ಹೊಂಡಗಳು ಸೃಷ್ಟಿಯಾಗಿ ಕಳೆದ ಒಂದು ತಿಂಗಳಿನಿಂದಲೂ ಹೊಂಡದಲ್ಲಿ ಕೊಳಚೆ ನೀರು ಶೇಖರಣೆಯಾಗಿದೆ. ಅಲ್ಲದೇ ಇಲ್ಲಿನ ಬೃಹತ್‌ ರೈಸ್‌ ಮಿಲ್‌ನ ಹಿಂಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಕಸಗಳನ್ನು ಎಲ್ಲೆಂದರಲ್ಲಿ ಎಸೆಯಲಾಗಿದ್ದು ಪ್ರಸ್ತುತ ಸೊಳ್ಳೆ ಉತ್ಪಾದನೆಯಾಗಿ ಪರಿಸರದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ . ಈ ಬಗ್ಗೆ ಸಂಬಂಧಪಟ್ಟ ಆರೋಗ್ಯ ಇಲಾಖೆ ತುರ್ತು ಗಮನ ಹರಸಬೇಕಾಗಿದೆ. ರಾ.ಹೆ.66 ಅಪಾಯಕಾರಿ ರಸ್ತೆ ಅಂಚುಗಳಿಂದಾಗಿ ಸ್ಥಳೀಯ ಸರಕಾರಿ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಕನ್ನುಕೆರೆ ಲಕ್ಷ್ಮೀನಾರಾಯಣ ವೈದ್ಯ ಮಾತನಾಡಿ, ಕನ್ನುಕೆರೆ ರಾ.ಹೆ.66ರ ರಸ್ತೆ ಬದಿಯಲ್ಲಿ ಉದ್ಯಮಿ ಟಿ.ವಾಸುದೇವ ನಾಯಕ್‌ ಮತ್ತು ಕೋ ಕಂಪೆನಿ ಹೆಸರಿನ ಖಾಸಗಿ ಅಕ್ಕಿ ಉದ್ಯಮ ಸಂಸ್ಥೆ ಹಾಗೂ ವೇ ಬ್ರಿಜ್‌ಗಳಿಗೆ ಅಪಾರ ಸಂಖ್ಯೆಯ ಘನ ವಾಹನಗಳು ರಸ್ತೆಯ ಬದಿಯಲ್ಲಿ ಸಾಲು ಸಾಲಾಗಿ ಬಂದು ನಿಲ್ಲಿಸುವ ಪರಿಣಾಮ ಸ್ಥಳೀಯ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಪಾದಚಾರಿಗಳು ಅಪಾಯದ ನಡುವೆ ಸಂಚರಿಸಬೇಕಾದ ಅನಿವಾರ್ಯತೆ ಇದೆ ಈ ಬಗ್ಗೆ ತುರ್ತುಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ ಘಟನೆ ಕೂಡಾ ನಡೆಯಿತು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಮಲ್ಯಾಡಿ ಸದಾರಾಮ ಶೆಟ್ಟಿ ಅವರು ಮಾತನಾಡಿ, ತೆಕ್ಕಟ್ಟೆ ಪ್ರಮುಖ ಭಾಗದಲ್ಲಿರುವ ಬಸ್‌ ಸ್ಟ್ಯಾಂಡ್‌ನ‌ಲ್ಲಿ ಎಲ್ಲೆಂದರಲ್ಲಿ ಬೈಕ್‌ ಹಾಗೂ ಕಾರುಗಳು ತಂದು ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ . ಈ ಬಗ್ಗೆ ವಾಹನ ನಿಲುಗಡೆ ಮಾಡಬಾರದು ಎಂದು ಗ್ರಾ.ಪಂ. ಸ್ಥಳದಲ್ಲಿ ನಾಮಫಲಕ ಅಳವಡಿಸಿದೆ ಆದರೂ ಕೂಡಾ ಸಮಸ್ಯೆಗಳನ್ನು ಬಗೆಹರಿಸುವವರು ಯಾರು ಎಂದು ಹೇಳಿದರು.

ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶೋಭಾ ಮಾತನಾಡಿ, ಸಾರ್ವಜನಿಕರ ಮಾಹಿತಿಯ ಮೇರೆಗೆ ತೆಕ್ಕಟ್ಟೆಯ ವಿನಯ ಬಾರ್‌ ಹಾಗೂ ಕನ್ನುಕೆರೆ ಐಶಬಿ ಕಾಂಪ್ಲೆಕ್ಸ್‌ ನ ಎದುರಿನ ಹೊಂಡದಲ್ಲಿ ರಾಶಿ ರಾಶಿ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು  ಎಸೆದಿರುವುದು ಕಂಡು ಬಂದಿದ್ದು ಇದಕ್ಕೆ ಸೂಕ್ತ ಕ್ರಮ ವಹಿಸಬೇಕಾಗಿದೆ . ಈ ಬಗ್ಗೆ ಜನರು ಬದಲಾಗಬೇಕು ಜತೆಗೆ ಸ್ವತ್ಛತೆಗೆ ಆದ್ಯತೆ ನೀಡಿ ಎಂದು ಹೇಳಿದರು.

ರೈಲ್ವೆ ಇಲಾಖೆಯ ಉದ್ಯೋಗಿ ಸಂತೋಷ್‌ ಪೂಜಾರಿ ಅವರು ಮಾತನಾಡಿ, ತೆಕ್ಕಟ್ಟೆ ರಾತ್ರಿ ವೇಳೆ ಕರೆಂಟ್‌ ಹೋದಾಗ ರಾತ್ರಿ ಪಾಳಯದಲ್ಲಿ ಮೆಸ್ಕಾಂ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಸಿಬಂದಿಗಳಿಲ್ಲದ ಕುರಿತು ಕಳೆದ ಎರಡು ವರ್ಷಗಳ ಹಿಂದೆಯೇ ಗ್ರಾ.ಪಂ.ನ ಗಮನಕ್ಕೆ ತಂದಿದ್ಧೇನೆ ಆದರೆ ಎರಡು ವರ್ಷವಾದರೂ ಕೂಡಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದ್ದೇವೆ. ಈ ಕುರಿತು ವಾರ್ಡ್‌ ಸದಸ್ಯರು ಏನು ಮಾಡುತ್ತಿದ್ದಾರೆ ? ಸಭೆ ಮಾದರಿಯಾಗಬೇಕಾಗಿತ್ತು ಆದರೆ  ಕಳೆದ ಎರಡು ವರ್ಷದ ಹಿಂದೆ ಕೇಳಿದ ಪ್ರಶ್ನೆಗೆ ಅದೇ ಉತ್ತರ ಬರುತ್ತಿರುವುದು ವಿಪರ್ಯಾಸ ಗ್ರಾ.ಪಂ.ಸದಸ್ಯರಿಗೆ ಬದ್ದತೆ ಇದೆಯಾ? ಇದರಿಂದಾಗಿ ಜನ ಗ್ರಾಮ ಪಂಚಾಯತ್‌ ಮೇಲಿನ ಭರವಸೆ ಕಳೆದುಕೊಳ್ಳುತ್ತಿದ್ದು, ಗ್ರಾಮಸ್ಥರು ಸಭೆಗೆ ಹಾಜರಾಗಲು ಹಿಂಜರಿಯುತ್ತಿದ್ದಾರೆ ಎಂದರು.

ಹಿರಿಯ ಕೃಷಿಕ ಸೂರ್ಯ ಶೆಟ್ಟಿ ಮಾತನಾಡಿ, ತೆಕ್ಕಟ್ಟೆ ಭಾಗದಲ್ಲಿ ಕರೆಂಟ್‌ ಹೋದರೆ ಸುಮಾರು 3ರಿಂದ 4 ಗಂಟೆಗಳ ಕಾಲ ಬರುವುದಿಲ್ಲ ಆದರೆ ಆ ಸಮಯದಲ್ಲಿ ನಮ್ಮ ಸುತ್ತಮುತ್ತಲಿನ ಮಣೂರು, ಕೋಟ ಗ್ರಾಮಗಳಲ್ಲಿ ಕರೆಂಟ್‌ ಇರುತ್ತದೆ ಈ ಬಗ್ಗೆ ಇಲಾಖೆ ಕ್ರಮ  ಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ  ನೊಡೆಲ್‌ ಅಧಿಕಾರಿ ರಾಜೇಶ್‌ ಕೆ.ಸಿ., ಗ್ರಾ.ಪಂ.ಉಪಾಧ್ಯಕ್ಷೆ ರೇಣುಕಾ, ಗ್ರಾ.ಪಂ. ಸದಸ್ಯರಾದ ಶೇಖರ್‌ ಕಾಂಚನ್‌, ವಿಜಯ ಭಂಡಾರಿ , ಸಂಜೀವ ದೇವಾಡಿಗ, ಮಮತಾ ದೇವಾಡಿಗ, ಸುರೇಶ್‌ ಶೆಟ್ಟಿ, ಸತೀಶ್‌ ದೇವಾಡಿಗ, ಗೋಪಾಲ, ವಿನೋದ್‌ ದೇವಾಡಿಗ, ಕಮಲ, ಪ್ರೇಮ, ಲಕ್ಷ್ಮೀ, ಪ್ರತಿಮಾ ಯು., ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಪಿಡಿಒ ಸುನಿಲ್‌ ಸ್ವಾಗತಿಸಿ, ಗ್ರಾ.ಪಂ. ಸಿಬಂದಿಗಳಾದ ಭಾರತಿ ಶೆಟ್ಟಿ, ಆಶಾ, ಶ್ರೀನಿವಾಸ ಪೂಜಾರಿ, ಮಂಜುನಾಥ ಕೊಮೆ ಸಹಕರಿಸಿ, ಕಾರ್ಯದರ್ಶಿ ಚಂದ್ರ ವಂದಿಸಿದರು.

ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಂಚೆ ಇಲಾಖೆ ಹಾಗೂ ಕಸ್ಟಮ್‌ ಇಲಾಖೆಗೆ ಮೀಸಲಿರಿಸಿ ಜಾಗದಲ್ಲಿ ಯಾವುದೇ ಅಭಿವೃದ್ಧಿ ಕಾಣದೇ ಸಂಪೂರ್ಣ ಗಿಡಗಂಟಿಗಳು ಆವರಿಸಿದೆ. ಪ್ರಸ್ತುತ ಗ್ರಾ.ಪಂ. ವ್ಯಾಪ್ತಿಯಲ್ಲಿ ಸರಕಾರಿ ಜಾಗದ ಕೊರತೆ ಇರುವುದರಿಂದ ಗ್ರಾಮದ ಹಿತದೃಷ್ಟಿಯಿಂದ ಆ ಜಾಗದಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶು ಆಸ್ಪತ್ರೆ ನಿರ್ಮಾಣದ ಉದ್ದೇಶಕ್ಕೆ ಗ್ರಾ.ಪಂ.ಗೆ ಜಾಗವನ್ನು ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

 

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.