Padubidri-Karkala ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ

ಸಾವಿರಾರು ಮಂದಿ ಭಾಗಿ, ಟೋಲ್ ಶಾಶ್ವತ ರದ್ಧು ಘೋಷಣೆಯವರೆಗೂ ಹೋರಾಟದ ಎಚ್ಚರಿಕೆ

Team Udayavani, Aug 24, 2024, 12:59 PM IST

7-padubidri-8

ಪಡುಬಿದ್ರಿ: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಂಚಿನಡ್ಕದಲ್ಲಿ ಆ.24ರ ಶನಿವಾರ ಪ್ರತಿಭಟನೆ ನಡೆಯಿತು.

ಪ್ರಸ್ತಾವನೆಗೈದ ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಮಾತನಾಡಿ, ನಮ್ಮ ಊರಿಗೆ ಬಂದಿರುವ ಟೋಲ್ ಗೇಟ್ ಎಂಬ ಕಂಟಕವನ್ನು ಒದ್ದೋಡಿಸುವ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಿರುವುದು ಹೋರಾಟಕ್ಕೆ ಬಲ ಬಂದಿದೆ. ಕಾರ್ಯಾದೇಶಕ್ಕೆ ತಾತ್ಕಾಲಿಕ ತಡೆ ಸ್ವಾಗತಾರ್ಹವೇ ಆಗಿದ್ದು, ಕಾರ್ಕಳ – ಪಡುಬಿದ್ರಿ ನಡುವಿನ ರಸ್ತೆಯಿಂದ ಸಂಪೂರ್ಣ ಎತ್ತಂಗಡಿಯಾಗುವವರೆಗೂ ಈ ಹೋರಾಟ ಮುಂದುವರಿಯಲಿದೆ. ರಾಜ್ಯ ಸರಕಾರ ಕೂಡಲೇ ಸಂಪೂರ್ಣ ರದ್ಧು ಪಡಿಸಿ ಆದೇಶ ಹೊರಡಿಸಲಿ ಎಂದು ಆಗ್ರಹಿಸಿದರು.

ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈಗಾಗಲೇ ಲೋಕೋಪಯೋಗಿ ಇಲಾಖೆ ಸಚಿವರು ತಾತ್ಕಾಲಿಕ ರದ್ಧು ಎಂಬ ಆದೇಶ ಹೊರಡಿಸಿದ್ದಾರೆ. ಆದರೆ ಈ ಅದೇಶ ಶಾಶ್ವತ ರದ್ದಾಗಬೇಕು. ರಾಜ್ಯಪತ್ರದಲ್ಲಿ ಇದನ್ನು ಆದೇಶ ಪತ್ರದಲ್ಲಿ ಪ್ರಕಟಿಸಬೇಕು. ಈ ಬಗ್ಗೆ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಜನರ ಬಲವೇ ಹೋರಾಟಕ್ಕೆ ಶಕ್ತಿ ತುಂಬಿದೆ. ಟೋಲ್ ಹೋರಾಟಕ್ಕೆ ರಾಜಕೀಯ ಬಣ್ಣ ತುಂಬದೇ ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸುವ ಮೂಲಕ ಒಂದು ಹಂತದ ಜಯ ನಮ್ಮದಾಗಿದೆ. ಈ ಹೋರಾಟ ಇಲ್ಲಿಗೇ ಮುಗಿಯುವುದಿಲ್ಲ. ಕಾರ್ಕಳ – ಪಡುಬಿದ್ರಿ ರಸ್ತೆಯಲ್ಲಿ ಟೋಲ್ ರದ್ಧು ಎಂದು ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಈ ಹೋರಾಟ ಮುಂದುವರಿಯಲಿದೆ. ಶಾಸಕನಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು ‌

ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ ಮಾತನಾಡಿ, ಈ ಟೋಲ್ ಹೋರಾಟವು ಜನರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದೆ. ಇಲ್ಲಿ ಎಲ್ಲಾ ಪಕ್ಷಗಳೂ, ಜಾತಿಯ ಜನರೂ ಒಗ್ಗೂಡಿದ್ದು ರಾಜಕೀಯ ರಹಿತ ಹೋರಾಟಕ್ಕೆ ಸರಕಾರವೂ ತಲೆಬಾಗುವುದು ನಿಶ್ಚಯವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಟೋಲ್ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ನಾವೆಲ್ಲರೂ ಒಗ್ಗೂಡೋಣ ಎಂದರು.

ಮುದರಂಗಡಿ ಚರ್ಚ್ ನ  ಧರ್ಮಗುರು ರೆ| ಫಾ | ಫೆಡ್ರಿಕ್ ಡಿ ಸೋಜ ಮಾತನಾಡಿ, ಇದು ಜನಪರ ಸಭೆಯಾಗಿದ್ದು ನಮ್ಮ ರಾಜ್ಯ ರಸ್ತೆಯಲ್ಲಿ ಯಾವುದೇ ಕಾರಣಕ್ಕೂ ಟೋಲ್ ಗೇಟ್ ಆಗಲು ಅವಕಾಶ ಮಾಡಿಕೊಡಬಾರದು. ನಮ್ಮ ಹೋರಾಟ ಸರಕಾರದವರೆಗೂ ತಲುಪಲಿ ಎಂದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ, ವಿಧಾನ‌ ಪರಿಷತ್ ಸದಸ್ಯ ಡಾ| ಧನಂಜಯ ಸರ್ಜಿ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಕೆ. ರಘುಪತಿ ಭಟ್, ಪ್ರಮುಖರಾದ ಯೋಗೀಶ್ ಶೆಟ್ಟಿ ಬಾಲಾಜಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಅನ್ಸಾರ್ ಅಹಮದ್ ಮೊದಕಾದವರು ಮಾತನಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಕೆ.ಎಂ.ಎಫ್ ಅಧ್ಯಕ್ಷ ಕೆ. ಸುಚರಿತ ಶೆಟ್ಟಿ, ಮಧ್ವರಾಯ ಭಟ್ ನಂದಿಕೂರು, ಮುಖಂಡರಾದ ಸತೀಶ್ ಶೆಟ್ಟಿ ಮುಟ್ಲುಪಾಡಿ, ಕುಯಿಲಾಡಿ ಸುರೇಶ್ ನಾಯಕ್, ಸಾಂತೂರು ಭಾಸ್ಕರ ಶೆಟ್ಟಿ, ರಾಮಕೃಷ್ಣ ಶರ್ಮ ಬಂಟಕಲ್ಲು, ಅನ್ಸಾರ್ ಅಹಮದ್ ಉಡುಪಿ, ರೇಷ್ಮಾ ಉದಯ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಉದಯ್ ಶೆಟ್ಟಿ ಇನ್ನ, ದೀಪಕ್ ಕೋಟ್ಯಾನ್ ಇನ್ನ, ಶೀಲಾ ಕೆ. ಶೆಟ್ಟಿ ಎರ್ಮಾಳು, ವೆಂಕಟರಮಣ ಮುಚ್ಚಿಂತಾಯ, ದಿನೇಶ್ ಕೋಟ್ಯಾನ್ ಪಲಿಮಾರು, ದಿನಕರ ಬಾಬು, ಅಶೋಕ್ ಕುಮಾರ್ ಶೆಟ್ಟಿ, ಶಶಿಧರ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಸದಾಶಿವ ಶೆಟ್ಟಿ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಶಶಿಕಾಂತ್ ಪಡುಬಿದ್ರಿ, ಲಕ್ಷ್ಮಣ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶಶಿಕಲಾ ಮೊದಲಾದವರು ಉಪಸ್ಥಿತರಿದ್ದರು.

ಸಾವಿರಾರು ಮಂದಿ ಭಾಗಿ : ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳು, ಕಾಪು, ಕಾರ್ಕಳ, ಉಡುಪಿ, ಮೂಲ್ಕಿ ತಾಲೂಕು ಮತ್ತು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸುತ್ತಲಿನ‌ 40 ಗ್ರಾಮಗಳ ಸಾರ್ವಜನಿಕರು ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಬಳಿಕ ಕಂಚಿನಡ್ಕದಿಂದ ಪಡುಬಿದ್ರಿ ಜಂಕ್ಷನ್ ವರೆಗೆ ಜಾಥಾ ನಡೆಯಿತು.

ಮನವಿ‌ ಸಲ್ಲಿಕೆ : ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರ ಮೂಲಕವಾಗಿ ಜಿಲ್ಲಾಡಳಿತ ಮತ್ತು ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರಭಾರ ಡಿವೈಎಸ್ಪಿ ಗೀತಾ ಪಾಟೀಲ್, ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಮೊದಲಾದವರು ಜತೆಗಿದ್ದರು.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಸರ್ವಜ್ಞ ತಂತ್ರಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Sakhi

Udupi: ಮಗನಿಂದ ಕಿರುಕುಳ: ತಾಯಿ ಸಖಿ ಸೆಂಟರ್‌ಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.