Amritsar: ಹೆಂಡತಿ, ಮಕ್ಕಳ ಎದುರೇ ವ್ಯಕ್ತಿಯ ಮೇಲೆ ಗುಂಡಿನ ದಾಳಿ… ಕೊನೆಗೂ ಕೈ ಕೊಟ್ಟ ಗನ್
Team Udayavani, Aug 24, 2024, 3:50 PM IST
ಅಮೃತಸರ: ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅಕ್ರಮವಾಗಿ ಮನೆಯೊಳಗೆ ಪ್ರವೇಶಿಸಿ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಭಯಾನಕ ಘಟನೆ ಪಂಜಾಬ್‌ನ ಅಮೃತಸರದ ದಬುರ್ಜಿ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಶನಿವಾರ (ಆಗಸ್ಟ್ 24) ಬೆಳಿಗ್ಗೆ ಸುಮಾರು ಏಳು ಗಂಟೆಯ ವೇಳೆಗೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೈಯಲ್ಲಿ ಬಂಧೂಕು ಹಿಡಿದುಕೊಂಡು ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಈ ವೇಳೆ ಮನೆಮಂದಿಯನ್ನು ಬೆದರಿಸಿ ಬಳಿಕ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ವ್ಯಕ್ತಿಯ ಪತ್ನಿ ಹಾಗೂ ಮಗ ಕೈಮುಗಿದು ಗುಂಡು ಹಾರಿಸದಂತೆ ಬೇಡಿಕೊಂಡಿದ್ದಾರೆ ಆದರೂ ಕೇಳದ ದುಷ್ಕರ್ಮಿಗಳು ಮತ್ತೆ ಗುಂಡಿನ ದಾಳಿ ನಡೆಸಲು ಮುಂದಾಗಿದ್ದಾರೆ ಆದರೆ ಅದೃಷ್ಟವಶಾತ್ ಬಂದೂಕಿನಿಂದ ಗುಂಡು ಹಾರಲಿಲ್ಲ ಎನ್ನಲಾಗಿದೆ.
ಬಳಿಕ ಅಲ್ಲಿಂದ ಕಾಲ್ಕಿತ್ತ ದುಷ್ಕರ್ಮಿಗಳ ತಂಡ ಬೈಕ್ ಏರಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಎಲ್ಲ ದೃಶ್ಯಗಳು ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಯಾವ ಉದ್ದೇಶಕ್ಕೆ ದಾಳಿ ನಡೆಸಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ವ್ಯಕ್ತಿಗೆ ಗಂಭೀರ ಗಾಯ:
ದುಷ್ಕರ್ಮಿಗಳ ಗುಂಡಿನ ದಾಳಿಗೆ ಸುಖಚೈನ್ ಸಿಂಗ್ ಗಂಭೀರ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಮೆರಿಕದಲ್ಲಿ ನೆಲೆಸಿದ್ದ ವ್ಯಕ್ತಿ:
ಸುಖಚೈನ್ ಸಿಂಗ್ ಅವರು ಅಮೆರಿಕದಲ್ಲಿ ನೆಲೆಸಿದ್ದು ಸುಮಾರು 20 ದಿನಗಳ ಹಿಂದೆಯಷ್ಟೇ ಅಮೃತಸರಕ್ಕೆ ಬಂದಿದ್ದರು, ಜೊತೆಗೆ ಇತ್ತೀಚೆಗಷ್ಟೇ 1.5 ಕೋಟಿ ಮೌಲ್ಯದ ಐಷಾರಾಮಿ ಕಾರೊಂದನ್ನು ಖರೀದಿಸಿದ್ದರು ಎನ್ನಲಾಗಿದೆ.
ದಾಳಿಯ ಹಿಂದೆ ಮೊದಲ ಪತ್ನಿಯ ಕುಟುಂಬದ ಕೈವಾಡ ಶಂಕೆ:
ದಾಳಿಗೆ ಸಂಬಂಧಿಸಿ ಸಿಂಗ್ ಕುಟುಂಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಅಲ್ಲದೆ ದಾಳಿಯ ಹಿಂದೆ ಸಿಂಗ್ ಅವರ ಮೊದಲ ಪತ್ನಿಯ ಕುಟುಂಬದ ಕೈವಾಡವಿದೆ ಎಂದು ಅವರ ತಾಯಿ ದೂರಿದ್ದಾರೆ.
ಸುಖಚೈನ್ ಸಿಂಗ್ ಅವರ ತಾಯಿಯ ದೂರಿನ ಮೇರೆಗೆ ಸಿಂಗ್ ಅವರ ಮೊದಲ ಪತ್ನಿಯ ಕುಟುಂಬದ ಐವರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Sensitive ⚠️ Content warning
Law and order in Punjab is deteriorating rapidly!!
This morning..two assailants entered an NRI’s home in Amritsar and opened fire on Mr. Sukhchain Singh in broad daylight, ignoring the pleas of a woman and child. Mr. Sukhchain is critical & now… pic.twitter.com/b9rsjrPeOD
— Megh Updates 🚨™ (@MeghUpdates) August 24, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.