Bengaluru: ಪುರುಷ ವೇಷ ಧರಿಸಿ ಕನ್ನ ಹಾಕುತ್ತಿದ್ದ ಕಳ್ಳಿ ಸೆರೆ!
ನಾಲ್ವರು ಮಹಿಳೆಯರ ತಂಡ ಕಟ್ಟಿಕೊಂಡಿದ್ದ ಯುವತಿ
Team Udayavani, Aug 24, 2024, 2:34 PM IST
ಬೆಂಗಳೂರು: ಪುರುಷರ ವೇಷ ಧರಿಸಿ ಮನೆ, ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಮಹಿಳೆಯರ ಗ್ಯಾಂಗ್‌ನ ಓರ್ವ ಸದಸ್ಯೆ ಬಾಗಲಗುಂಟೆ ಠಾಣಾ ಪೊಲೀಸರ ಬಲೆಗೆ ಬಿದ್ದಿದ್ದು, ಆಕೆಯಿಂದ 5 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಾಗಲಗುಂಟೆಯ ನಿಲೂಪರ್ (22) ಬಂಧಿತೆ.
ಆರೋಪಿತ ಮಹಿಳೆ ನಿಲೂಪರ್ ಅಪ್ರಾಪ್ತ ಬಾಲಕಿ ಸಹಿತ ನಾಲ್ವರು ಮಹಿಳೆಯರ ತಂಡ ಹೊಂದಿದ್ದಳು. ಈ ಪೈಕಿ ತಂಡದಲ್ಲಿದ್ದ ಮೂವರು ಮಹಿಳೆಯರು ಪುರುಷರ ವೇಷ ಧರಿಸಿ ಆಟೋ ಚಲಾಯಿಸಿಕೊಂಡು ಬಂದು ಅಂಗಡಿ ಮನೆಗಳಲ್ಲಿ ಮಾಲೀಕರೊಂದಿಗೆ ಮಾತುಕತೆ ನಡೆಸುತ್ತಿದ್ದರು. ಅದೇ ಸಮಯದಲ್ಲಿ ಆರೋಪಿಗಳ ಗುಂಪಿನಲ್ಲಿರುವ ಅಪ್ರಾಪ್ತ ಬಾಲಕಿಯು ಮನೆ ಅಥವಾ ಅಂಗಡಿಗಳಲ್ಲಿ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದಳು.
ಸಿಕ್ಕಿ ಬಿದ್ದಿದ್ದು ಹೇಗೆ?: ಆ.2ರಂದು ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಆರೋಪಿಗಳು ಇದೇ ರೀತಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆ.15ರಂದು ಡಿ.ಜೆ. ಹಳ್ಳಿ ಸಮೀಪದ ಶಾಂಪುರ ಬಳಿ ನಿಲೂಪರ್‌ಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇನ್ನೂ 55 ಗ್ರಾಂ ಚಿನ್ನದ ಒಡವೆಗಳನ್ನು ತಲೆಮರೆಸಿಕೊಂಡಿರುವ ಆರೋಪಿತೆಯರ ಪೈಕಿ ಓರ್ವಳು ತೆಗೆದುಕೊಂಡು ಹೋಗಿರುವುದಾಗಿ ನಿಲೂಪರ್ ಮಾಹಿತಿ ನೀಡಿದ್ದಾಳೆ. ಇನ್ನು ಕದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಿ ಬಂದ ದುಡ್ಡಿನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.