Dog Attack: ಶಂಕಿತ ರೇಬಿಸ್ಗೆ ಹೊಸನಗರದ ಮಹಿಳೆ ಮೃತ್ಯು
ತಕ್ಷಣವೇ ಸೂಕ್ತ ಚುಚ್ಚುಮದ್ದು ತೆಗೆದುಕೊಳ್ಳದ ಪರಿಣಾಮ ಸೋಂಕು ಉಲ್ಬಣ
Team Udayavani, Aug 24, 2024, 7:10 PM IST
ಹೊಸನಗರ: ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಶಿವಪ್ಪನಾಯಕ ರಸ್ತೆ ನಿವಾಸಿ ಸಂಗೀತಾ (38) ಸೋಂಕಿಗೆ ಒಳಪಟ್ಟು ಶುಕ್ರವಾರ ಮೃತಪಟ್ಟಿದ್ದಾರೆ. ಮೃತರಿಗೆ ಪುತ್ರ, ಪುತ್ರಿ ಇದ್ದಾರೆ.
ಸಂಗೀತಾ ಅವರಿಗೆ ಜುಲೈ 14ರಂದು ನಾಯಿಯೊಂದು ಕಚ್ಚಿತ್ತು. ನಾಯಿ ಕಚ್ಚಿದ ಆ ಸಮಯದಲ್ಲಿ ತಕ್ಷಣವೇ ಸೂಕ್ತ ಚುಚ್ಚುಮದ್ದು ತೆಗೆದುಕೊಳ್ಳದ ಪರಿಣಾಮ ಸೋಂಕು ಉಲ್ಬಣಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆಗಸ್ಟ್ 20ರಂದು ಆರೋಗ್ಯದಲ್ಲಿ ಏರುಪೇರು ಉಂಟಾದ್ದರಿಂದ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಅಷ್ಟರಲ್ಲೇ ರೇಬಿಸ್ ಸೋಂಕು ಉಲ್ಬಣಗೊಂಡ ಕಾರಣ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ್ದರಿಂದ ಸಂಗೀತಾ ಶುಕ್ರವಾರ ಶಿವಮೊಗ್ಗದಲ್ಲಿ ನಿಧನ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.