Hospital Visit: ಮುಧೋಳ ತಾಲೂಕು ಆಸ್ಪತ್ರೆ ವ್ಯವಸ್ಥೆ ಪರಿಶೀಲಿಸಿದ ಮಹಿಳಾ ಆಯೋಗ ಅಧ್ಯಕ್ಷೆ
ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಿ; ಸಿಬ್ಬಂದಿಯಿಂದ ಮನವಿ
Team Udayavani, Aug 25, 2024, 11:37 PM IST
ಮುಧೋಳ: ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಆಸ್ಪತ್ರೆಯಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ಹೆರಿಗೆಯಾದ ಮಹಿಳೆಯರಿಗೆ ಪ್ರತ್ಯೇಕ ವಾರ್ಡ್, ಆಸ್ಪತ್ರೆಯಲ್ಲಿನ ನೀರಿನ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು. ಮಹಿಳೆಯರಿಗೆ ವಿಶೇಷ ಕಾಳಜಿ ವಹಿಸುವ ಮೂಲಕ ಮಹಿಳಾ ಆರೋಗ್ಯದ ಕಡೆಗೆ ಗಮನ ಹರಿಸಿ. ಬಡವರಿಗೆ ಗುಣಮಟ್ಟದ ಆರೋಗ್ಯ ದೊರೆಯುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಈ ವೇಳೆ ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸುವಂತೆ ಆಸ್ಪತ್ರೆ ಸಿಬ್ಬಂದಿ ಮನವಿ ಮಾಡಿಕೊಂಡರು, ಈ ವೇಳೆ ಮಾತನಾಡಿದ ಮಹಿಳಾ ಆಯೋಗದ ಅಧ್ಯಕ್ಷರು ಸಿಬ್ಬಂದಿ ಸಮಸ್ಯೆ ಸರಿಪಡಿಸುವಂತೆ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ರಕ್ಷಿತಾ ಈಟಿ, ತಾಲೂಕು ಆರೋಗ್ಯಾಧಿಕಾರಿ ಟಿ.ಎಚ್. ಮಲಘಾಣ, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಎ.ಎ.ಸೂರ್ಯವಂಶಿ ಹಾಗೂ ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.