Darshan Case; ಹಿಂಡಲಗಾ ಜೈಲಿನ 15 ಅಂಧೇರಿ ಸೆಲ್ ಗಳು ಖಾಲಿ: ದರ್ಶನ್ ಶಿಫ್ಟ್ ಸಾಧ್ಯತೆ
Team Udayavani, Aug 26, 2024, 12:53 PM IST
ಬೆಳಗಾವಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Prison) ನಟ ದರ್ಶನ್ ಗೆ (Actor Darshan) ರಾಜಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್ ನನ್ನು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ (Hindalaga Central Jail) ಸ್ಥಳಾಂತರ ಮಾಡುತ್ತಾರಾ ಎಂಬ ಚರ್ಚೆ ಶುರುವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೊ, ವಿಡಿಯೋ ವೈರಲ್ ಬೆನ್ನಲ್ಲೇ ಬಂಧಿಖಾನೆ ಇಲಾಖೆ ಅಲರ್ಟ್ ಆಗಿದೆ.
ದರ್ಶನ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ಬೆಳಗಾವಿ ಜೈಲಿಗೆ ದರ್ಶನ ಶಿಫ್ಟ್ ಆಗುತ್ತಾರಾ ಎಂಬ ವಿಷಯ ಚರ್ಚೆಯಾಗುತ್ತಿದೆ.
ಶತಮಾನಗಳ ಇತಿಹಾಸ ಇರುವ ಹಿಂಡಲಗಾ ಜೈಲಿನಲ್ಲಿ 15 ಅಂಧೇರಿ ಸೆಲ್ ಗಳು (ಕತ್ತಲು ಕೋಣೆಗಳು) ಇವೆ. ಯಾವುದೇ ಕ್ಷಣದಲ್ಲಾದರೂ ಬಂಧಿಖಾನೆ ಮೇಲಧಿಕಾರಿಗಳಿಂದ ಸೆಲ್ ಗಳ ಮಾಹಿತಿ ಕೇಳುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕಾರಿಗಳೂ ಮಾಹಿತಿ ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ.
ನಟ ದರ್ಶನ್ ಬೆಳಗಾವಿ ಜೈಲಿಗೋ ಅಥವಾ ಬಳ್ಳಾರಿ ಜೈಲಿಗೋ? ಎಂಬುದರ ಬಗ್ಗೆ ಸೋಮವಾರ ಸಂಜೆಯೊಳಗೆ ಸ್ಥಳಾಂತರ ಬಗ್ಗೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಅಧಿಕಾರಿಗಳು ಸಸ್ಪೆಂಡ್
ಕೊಲೆ ಆರೋಪಿ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ದರ್ಬಾರ್ ನಡೆಸುತ್ತಿರುವ ಫೋಟೋ – ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಏಳು ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರು, ಘಟನೆ ಹೇಗೆ ನಡೆಯಿತು ಎಂದು ವರದಿ ಕೇಳಿದ್ದೇನೆ. ಇದರಲ್ಲಿ ಏಳು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ವರದಿ ಬಂದಿದೆ. ಶರಣ ಬಸವ ಅಮೀನಗಡ, ಪ್ರಭು, ತಿಪ್ಪೇಸ್ವಾಮಿ, ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್, ಶ್ರೀಕಾಂತ್ ತಲವಾರ್, ಬಸಪ್ಪ ತೇಲಿ ಇವರನ್ನು ಅಮಾನತು ಮಾಡಿದ್ದೇವೆ. ಜೈಲು ಸೂಪರಿಂಟೆಂಡೆಂಟ್ ಅವರನ್ನು ವರ್ಗಾವಣೆ ಮಾಡುತ್ತೇವೆ. ಈ ರೀತಿಯ ಘಟನೆ ನಡೆಯಬಾರದು. ಹಿರಿಯ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.