My Hero: ಜಾತಿ ಪದ್ಧತಿ ಸುತ್ತ ಚಿತ್ರದ ಕಥೆ ʼಮೈ ಹೀರೋʼ ತೆರೆಗೆ ಬರಲು ಸಿದ್ದ
Team Udayavani, Aug 26, 2024, 4:24 PM IST
“ಮೈ ಹೀರೋ’ ಎಂಬ ಚಿತ್ರ ಆ.30ರಂದು ತೆರೆಕಾಣುತ್ತಿದೆ. ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರವಿದು.
ಹಾಲಿವುಡ್ ಕಲಾವಿದರಾದ ಜಿಲಾಲಿ ರಜ್ ಕಲ್ಲಹ್, ಎರಿಕ್ ರಾಬರ್ಟ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಮೈ ಹೀರೋ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಕಾಶ್ ಬೆಳವಾಡಿ ಅವರು ಜಿಲ್ಲಾಧಿಕಾರಿಯಾಗಿ, ಹಿರಿಯ ನಟ ದತ್ತಣ್ಣ ಅವರು ಪುರೋಹಿತರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಟಿ ಅಂಕಿತಾ ಅಮರ್ ಮಧ್ಯಪ್ರದೇಶದ ಯುವತಿಯಾಗಿ ನಟಿಸಿದ್ದಾರೆ.
ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಅವಿನಾಶ್ ವಿಜಯಕುಮಾರ್, ನಾನು ಮೂಲತಃ ರಂಗಭೂಮಿ ಕಲಾವಿದ. ನನ್ನ ನಿರ್ದೇಶನದ ಮೊದಲ ಚಿತ್ರವಿದು. ಎ.ವಿ. ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ನಿರ್ಮಿಸಿದ್ದೇವೆ. ನಮ್ಮ ತಾಯಿ 2009ರಲ್ಲಿ ಚಿಲಿಪಿಲಿ ಹಕ್ಕಿಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಹಿಂದುಳಿದವರ ಮೇಲೆ ನಡೆಯುವ ಶೋಷಣೆ ಕುರಿತಂತೆ ಮಾಡಿರುವ ಕಾನ್ಸೆಪ್ಟ್ ಇದು. ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಒಂದು ಘಟನೆ ನಡೆದಿತ್ತು.
ಅದನ್ನು ಇಟ್ಟುಕೊಂಡು ಈ ಚಿತ್ರಕಥೆ ರಚಿಸಿದ್ದೇನೆ. ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳಲ್ಲಿ ಸಂಭಾಷಣೆ ಇರುತ್ತದೆ. ಹಳ್ಳಿಗಳಲ್ಲಿ ಈಗಲೂ ಜಾತಿ ಪದ್ಧತಿ ಇದೆ. ಬೇರೆ ಬೇರೆ ದೇಶಗಳಲ್ಲೂ ಸಹ ಇದೆ. ಇದನ್ನೇ ಪ್ರಮುಖವಾಗಿಟ್ಟಿಕೊಂಡು ಸಿನಿಮಾ ಮಾಡಿದ್ದೇನೆ. ಪಿವಿಆರ್, ಐನಾಕ್ಸ್ ಅವರು ವಿತರಣೆ ಮಾಡುತ್ತಿದ್ದಾರೆ’ ಎಂದರು.
“ನಾನು ಈ ಚಿತ್ರದಲ್ಲಿ ಮಧ್ಯಪ್ರದೇಶದ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಮೈ ಹೀರೋ ಚಿತ್ರದಲ್ಲಿ ಎನ್‌ಜಿಓ ಪಾತ್ರ ನನ್ನದು. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲಿ ವಾರಣಾಸಿಯಲ್ಲಿರುವಂತೆ ಅನೇಕ ಘಾಟ್‌ಗಳಿವೆ. ಅಹಲ್ಯಬಾಯಿ ಎಂಬ ಮಹಾರಾಣಿ ಈ ಘಾಟ್ ಗಳನ್ನು ನಿರ್ಮಿಸಿದ್ದರು. ಅಲ್ಲಿ ಅವರ ಪ್ರತಿಮೆ ಕೂಡ ಇದೆ. ಈ ಚಿತ್ರದಲ್ಲಿ ನಟಿಸುವುದಕ್ಕೆ ಮುಂಚೆ ನಾನು ಅಲ್ಲಿನ ವಿಷಯಗಳನ್ನು ತಿಳಿದುಕೊಂಡು ನಟಿಸಿದ್ದೇನೆ’ ಎಂದರು ನಟಿ ಅಂಕಿತಾ ಅಮರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.