Udupi: 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದನಗಳ್ಳನ ಬಂಧನ
Team Udayavani, Aug 27, 2024, 6:50 AM IST
ಉಡುಪಿ: ದನ ಕಳ್ಳತನ ಪ್ರಕರಣದಲ್ಲಿ 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಟಪಾಡಿಯ ಸೈಯದ್ ಮುಸ್ತಾಕ್ (45) ಬಂಧಿತ ಅರೋಪಿ. 1993ರ ಜು. 21ರಂದು ಶಿವಳ್ಳಿಯ ಇಂದ್ರಾಳಿ ದೇವಸ್ಥಾನದ ಹತ್ತಿರ ದೇವೇಂದ್ರ ನಾಯ್ಕ. ಅವರ ಗದ್ದೆಯ ಬಳಿ ಮೇಯಲು ಬಿಟ್ಟಿದ್ದ ಎರಡು ದನಗಳನ್ನು ಯಾರೋ ಕಳವು ಮಾಡಿಕೊಂಡು ಹೋದ ಬಗ್ಗೆ ದೇವೇಂದ್ರ ನಾಯ್ಕ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಅನಂತರ ಆತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಈ ಬಗ್ಗೆ ಈಗಿನ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ ದೇವರಾಜ ಟಿ.ವಿ. ಅವರ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ಠಾಣಾ ಸಿಬಂದಿ ಪ್ರಸನ್ನ ಕಾರ್ಯಾಚರಣೆ ನಡೆಸಿ ಆ. 24ರಂದು ಕಟಪಾಡಿಯ ಮಣಿಪುರ ಗುಜ್ಜಿ ಹೌಸ್ ಬಳಿ ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.