BJP; ದಿಲ್ಲಿ ಚಲೋಗೆ ಪಕ್ಷದ ವರಿಷ್ಠರ ಅನುಮತಿ: ರಾಷ್ಟ್ರಮಟ್ಟದ ಅಸ್ತ್ರ
ಸೆಪ್ಟಂಬರ್ ಮೊದಲ ವಾರದಲ್ಲೇ ದಿಲ್ಲಿಗೆ ರಾಜ್ಯ ಕೇಸರಿ ಪಡೆ ದೌಡು
Team Udayavani, Aug 27, 2024, 6:40 AM IST
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಹಾಗೂ ದಲಿತ ವಿರೋಧಿ ಧೋರಣೆಯನ್ನು ಖಂಡಿಸಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಪ್ರತಿಭಟನೆಯ ಕಹಳೆ ಮೊಳಗಿಸಲು ರಾಜ್ಯ ಘಟಕ ಸಲ್ಲಿಸಿದ್ದ ಪ್ರಸ್ತಾವಕ್ಕೆ ಬಿಜೆಪಿ ವರಿಷ್ಠರು ಒಪ್ಪಿಗೆ ಸೂಚಿಸಿದ್ದು, ಸೆಪ್ಟಂಬರ್ ಮೊದಲ ವಾರದಲ್ಲಿ ರಾಜ್ಯ ಕೇಸರಿ ಪಡೆ ದಿಲ್ಲಿಗೆ ದೌಡಾಯಿಸಲಿದೆ.
ಬಿಜೆಪಿಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ದಿಲ್ಲಿಗೆ ತೆರಳಿ, ರಾಹುಲ್ ಗಾಂಧಿ ನಿವಾಸ ಹಾಗೂ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ಆ. 29ರಂದು ಸಿದ್ದರಾಮಯ್ಯ ವರ್ಸಸ್ ರಾಜ್ಯ ಪಾಲರ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ನೀಡುವ ತೀರ್ಪು ಅಥವಾ ನಿರ್ದೇಶನವನ್ನು ಆಧರಿಸಿ ಅಂತಿಮ ದಿನಾಂಕ ನಿರ್ಧರಿಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ರಾಷ್ಟ್ರಮಟ್ಟದ ಅಸ್ತ್ರ
ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣವನ್ನು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಬಲ ಅಸ್ತ್ರವಾಗಿ ಬಳಸಿಕೊಳ್ಳಲು ಬಿಜೆಪಿ ರಾಷ್ಟ್ರೀಯ ನಾಯಕತ್ವ ನಿರ್ಧರಿಸಿದೆ. ಜತೆಗೆ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿಕೊಂಡಿರುವುದು ಕಾಂಗ್ರೆಸ್‌ನ ದಲಿತ ವಿರೋಧಿ ನೀತಿಗೆ ನಿದರ್ಶನ ಎಂಬುದನ್ನು ಪ್ರತಿಪಾದಿಸಲು ಬಿಜೆಪಿ ಮುಂದಾಗಿದೆ. ನಾಲ್ಕು ರಾಜ್ಯಗಳ ಚುನಾವಣೆ ಹೊಸ್ತಿಲಲ್ಲಿ ಈ ವಿಷಯವಾಗಿ ಅಭಿಯಾನ ರೂಪದ ಹೋರಾಟ ನಡೆಸಿ ಕಾಂಗ್ರೆಸ್‌ನ್ನು ಮುಜುಗರಕ್ಕೆ ಸಿಲುಕಿಸುವುದು ಬಿಜೆಪಿಯ ತಂತ್ರವಾಗಿದೆ.
ಕಾಂಗ್ರೆಸ್ ಎಸ್‌ಸಿ-ಎಸ್‌ಟಿ ಹಣವನ್ನು ದುರ್ಬಳಕೆ ಮಾಡಿ ಆ ವರ್ಗಕ್ಕೆ ಅನ್ಯಾಯ ಮಾಡಿದೆ. ಈ ವಿಷಯವನ್ನು ರಾಷ್ಟ್ರಮಟ್ಟದಲ್ಲಿ ಅನಾವರಣ ಗೊಳಿಸುವ ಉದ್ದೇಶದಿಂದ ದೇಶದ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ. ಕಾಂಗ್ರೆಸ್ ಮುಖವಾಡ ಬಯಲು ಮಾಡುತ್ತೇವೆ. -ಸುನಿಲ್ ಕುಮಾರ್,ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.