Bengaluru: ವ್ಯಕ್ತಿ ಕೊಲೆಗೆ ಯತ್ನ; 6 ಮಂದಿ ಆರೋಪಿಗಳ ಸೆರೆ
Team Udayavani, Aug 27, 2024, 10:57 AM IST
ಬೆಂಗಳೂರು: ಹಣಕಾಸು ವಿಚಾರಕ್ಕೆ ಶೋಹಿಬ್ ಎಂಬಾತನ ಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ 6 ಮಂದಿ ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲಿಂಗರಾಜಪುರ ನಿವಾಸಿಗಳಾದ ಮೆಹಬೂಬ್ ಪಾಷಾ (48), ಫೈರೋಜ್ ಪಾಷಾ (48), ನಿಜಾರ್ ಪಾಷಾ (48), ರಜಾಕ್ ಪಾಷಾ (40), ನಫೀಜ್ (38), ಮನ್ಸೂರ್ (34) ಬಂಧಿತರು. ಆರೋಪಿಗಳು ಆ.24ರಂದು ರಾತ್ರಿ ಸುಮಾರು 8.30ಕ್ಕೆ ಲಿಂಗರಾಜಪುರದ ಆಯಿಲ್ ಮಿಲ್ ರಸ್ತೆಯಲ್ಲಿ ಶೋಹಿಬ್ (30) ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹÇÉೆ ನಡೆಸಿ ಕೊಲೆಗೆ ಯತ್ನಿಸಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗಳಾದ ದಾವೂದ್ ಮತ್ತು ಜಿಶಾನ್ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಏನಿದು ಪ್ರಕರಣ?: ಕಮ್ಮನಹಳ್ಳಿ ನಿವಾಸಿಯಾದ ಶೋಹಿಬ್ ಮತ್ತು ದಾವೂದ್ ಸ್ನೇಹಿತರು. ಶೋಹಿಬ್‌ಗ ದಾವೂದ್ ಸಹೋದರ ಜಿಶಾನ್ 1.70 ಲಕ್ಷ ರೂ. ನೀಡಬೇಕಿತ್ತು. ಈ ಹಣ ವಾಪಸ್ ನೀಡುವಂತೆ ಶೋಹಿಬ್, ಜಿಶಾನ್‌ನನ್ನು ಹಲವು ಬಾರಿ ಕೇಳಿದರೂ ಕೊಟ್ಟಿರಲಿಲ್ಲ. ಶೋಹಿಬ್ ಹಣ ವಾಪಾಸ್ ಕೇಳಿದ್ದಕ್ಕೆ ದಾವೂದ್ ಹಾಗೂ ಜಿಶಾನ್ ಕೋಪಗೊಂಡಿದ್ದರು.
ಶೋಹಿಬ್ ಆ.24ರಂದು ರಾತ್ರಿ ಲಿಂಗರಾಜಪುರದ ಆಯಿಲ್ ಮಿಲ್ ರಸ್ತೆಯಲ್ಲಿ ಹೋಗುತ್ತಿದ್ದ. ಈ ವೇಳೆ ಆರೋಪಿಗಳು ಶೋಹಿಬ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದರು. ಬಳಿಕ ಕಾರಿನಲ್ಲಿ ಕೂರಿಸಿಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಾರ್ಕೆಟ್ ಬಳಿ ಎಸೆದು ಹೋಗಿದ್ದರು. ಬಳಿಕ ಸ್ಥಳೀಯರು ಶೋಹಿಬ್‌ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.