ಸಂಗೊಳ್ಳಿ ರಾಯಣ್ಣ ನಂಬಿಕೆ-ವಿಶ್ವಾಸದ ಪ್ರತೀಕ: ಸಿಎಂ ಸಿದ್ದರಾಮಯ್ಯ
Team Udayavani, Aug 27, 2024, 10:08 AM IST
ಉದಯವಾಣಿ ಸಮಾಚಾರ
ಮೂಡಲಗಿ: “ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತನಾಗಿ ಜನರ ಹƒದಯದಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾನೆ. ಅಂಥ ದೇಶಭಕ್ತನ ಪ್ರತಿಮೆಯನ್ನು ಒಂದೇ ದಿನ ನಾಲ್ಕು ಕಡೆಯಲ್ಲಿ ಅನಾವರಣ ಮಾಡುತ್ತಿರುವುದು ಹೆಮ್ಮೆ ಎನಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಲ್ಲೂಕಿನ ಯಾದವಾಡದಲ್ಲಿ ಮುಧೋಳ ಲೋಕಾಪುರ ರಸ್ತೆಯಲ್ಲಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಿತಿಯವರು ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನು ನಂಬಿಕೆ, ವಿಶ್ವಾಸದ ಪ್ರತೀಕನಾಗಿದ್ದನು ಎಂದರು.
ಸಂಗೊಳ್ಳಿ ರಾಯಣ್ಣನು ಕಿತ್ತೂರ ರಾಣಿ ಚನ್ನಮ್ಮಳ ಬಲಗೈ ಬಂಟನಾಗಿದ್ದವನು. ಬ್ರಿಟಿಷರಿಗೆ ಸಿಂಹಸ್ವಪ್ನನಾಗಿ ಸ್ವಂತ ಸೇನೆ ನಿರ್ಮಿಸಿದ್ದ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಶ್ರೇಷ್ಠ ದೇಶಪ್ರೇಮಿಯೆನಿಸಿ ಯವಕರಿಗೆ ಪ್ರೇರಣೆಯಾಗಿದ್ದಾರೆ ಎಂದರು.
182 ಕೋಟಿ ವೆಚ್ಚದಲ್ಲಿ ಸಂಗೊಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆ ನಿರ್ಮಿಸಿದ್ದು, ಅದರ ಮೂಲಕ ಮಕ್ಕಳಲ್ಲಿ ಧೈರ್ಯ, ನಂಬಿಕೆ ಮತ್ತು ವಿಶ್ವಾಸದ ಪಾಠ ಕಲಿಕೆಯಾಗಬೇಕು. ಸಂಗೊಳ್ಳಿ ರಾಯಣ್ಣನ ತರಹ ಶೂರರು ನಾಡಿನಲ್ಲಿ ಬೆಳೆಯಬೇಕು. ಸಂಗೊಳ್ಳಿ ರಾಯಣ್ಣನ ರೀತಿಯಲ್ಲಿ ಪ್ರತಿಯೊಬ್ಬರು ದೇಶ ಮತ್ತು ಸಮಾಜವನ್ನು ಪ್ರೀತಿಸಬೇಕು ಎಂದರು.
ಹುಲಜಂತಿ ಮಾಳಿಂಗರಾಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳಕರ್, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಿಂಗಪ್ಪ ಕುರಬೇಟ, ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಟಾಳಕರ, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ| ರಾಜೇಂದ್ರ ಸಣ್ಣಕ್ಕಿ, ಲಕ್ಷ್ಮಣರಾವ ಚಿಂಗಳೆ, ಯಾದವಾಡ ಗ್ರಾಪಂ ಅಧ್ಯಕ್ಷ ಬಸವರಾಜ ಭುತಾಳಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಮಿಟಿಯವರು, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.