Medical Education: ಇಲಾಖೆ ವಿವಿಧ ಸಂಸ್ಥೆಗಳ ವೈದ್ಯರು ದೂರು ಸ್ವೀಕರಿಸಿದ ಸಚಿವ
ಹೆಚ್ಚಿನ ಭದ್ರತೆ ಒದಗಿಸಲು ಕ್ರಮ: ಶರಣ ಪ್ರಕಾಶ್ ಪಾಟೀಲ್
Team Udayavani, Aug 28, 2024, 1:07 AM IST
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಎಲ್ಲ ಸಂಸ್ಥೆಗಳ ನಿರ್ದೇಶಕರು, ಸಿಬ್ಬಂದಿ ಹಾಗೂ ವೈದ್ಯ ವಿದ್ಯಾರ್ಥಿಗಳಿಂದ ಸಲಹೆ ಹಾಗೂ ದೂರುಗಳನ್ನು ಸ್ವೀಕರಿಸಲಾಗಿದೆ. ಮುಂದಿನ ಒಂದು ವಾರದಲ್ಲಿ ರಾಜ್ಯಮಟ್ಟದ ಸಭೆಯಲ್ಲಿ ಈ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಎಲ್ಲಾ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ನುರಿತ ಭದ್ರತಾ ಸಿಬ್ಬಂದಿ ನಿಯೋಜನೆ ಸೇರಿದಂತೆ ಬೀದಿ ದೀಪಗಳು, ಸಿಸಿ ಕ್ಯಾಮೆರಾಗಳ ಹೆಚ್ಚಳ ಮುಂತಾದ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ವೈದ್ಯ ಸಿಬ್ಬಂದಿಯ ವಸತಿ ನಿಲಯಗಳ ಸುರಕ್ಷತೆಗೂ ಆದ್ಯತೆ ನೀಡುತ್ತಿದ್ದೇವೆ. ಈ ಕ್ರಮಗಳು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿರಲಿವೆ ಎಂದು ತಿಳಿಸಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ ಸುಜಾತಾ ರಾಥೋಡ್, ಬಿಎಂಸಿ-ಆರ್‌ಐ ನಿರ್ದೇಶಕ ಡಾ ರಮೇಶ್ ಕೃಷ್ಣ, ಪ್ರಾಂಶುಪಾಲೆ ಡಾ. ಅಸಿಮಾ ಬಾನ್, ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವೈದ್ಯಕೀಯ ಸಂಸ್ಥೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರು, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.
ವಿಶ್ರಾಂತಿ ಕೊಠಡಿ ಬೇಡಿಕೆ!
ಸಭೆಯಲ್ಲಿ ವೈದ್ಯ ವಿದ್ಯಾರ್ಥಿಗಳು ತಡರಾತ್ರಿಯಲ್ಲಿ ಬರುವ ತುರ್ತು ಕರ್ತವ್ಯದ ಅವಧಿಯಲ್ಲಿ ವಸತಿ ನಿಲಯದಿಂದ ಆಸ್ಪತ್ರೆಗೆ ಕರೆದ್ಯೊಯಲು ವಾಹನ ವ್ಯವಸ್ಥೆ ಹಾಗೂ ಅದರಲ್ಲಿ ಭದ್ರತೆ ವ್ಯವಸ್ಥೆ ಕಲ್ಪಿಸುವುದು, ಕರ್ತವ್ಯ ನಿರ್ವಹಿಸುವ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯಾಧಿಕಾರಿಗಳಿಗೆ ವಿಶ್ರಾಂತಿ ಕೊಠಡಿ ಕೊರತೆ, ಸಿಸಿ ಕ್ಯಾಮರ ಆಳವಡಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪಿಜಿ ವೈದ್ಯ ವಿದ್ಯಾರ್ಥಿಗಳು ಸಚಿವರಿಗೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.